ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

Date:

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ ತಮಗೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದ್ದರು. ಬಿಜೆಪಿ ಸೇರುವಂತೆ ಆಹ್ವಾನಿಸಿದ್ದರು ಎಂದು ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಜಿಜಿ ಥಾಮ್ಸನ್ ಹೇಳಿದ್ದಾರೆ. ಅವರ ಈ‌ ಹೇಳಿಕೆಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

- Advertisement -

ಜಿಜಿ ಥಾಮ್ಸನ್ ನೀಡಿರುವ ಮಾಹಿತಿಯ ಪ್ರಕಾರ, 2016ರಲ್ಲಿ ಕೇರಳದಿಂದ ದೆಹಲಿಗೆ ಇಬ್ಬರೂ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಸಂಭಾಷಣೆ ನಡೆದಿತ್ತು. ಆ ಸಮಯದಲ್ಲಿ ಥಾಮ್ಸನ್ ಅವರು ಕೇರಳದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿಯಂಚಿನಲ್ಲಿದ್ದರು. ಗ್ಯಾನೇಶ್ ಕುಮಾರ್ ಕೂಡ ಅದೇ ಸಮಯದಲ್ಲಿ ಕೇರಳ ಕೆಡರ್‌ನ ಹಿರಿಯ ಐಎಎಸ್ ಅಧಿಕಾರಿಯಾಗಿದ್ದರು. ವಿಮಾನ ಪ್ರಯಾಣದ ವೇಳೆ ಥಾಮ್ಸನ್ ಅವರ ನಿವೃತ್ತಿಯ ನಂತರದ ಯೋಜನೆಗಳ ಕುರಿತು ಗ್ಯಾನೇಶ್ ಕುಮಾರ್ ವಿಚಾರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಆ ಸಮಯದಲ್ಲಿ ಗ್ಯಾನೇಶ್ ಕುಮಾರ್ ಅವರು, ಥಾಮ್ಸನ್ ಅವರಿಗೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ಪತ್ತನಂತಿಟ್ಟ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಸೂಚಿಸಿದ್ದರು. “ನೀವು ಉತ್ತಮ ವಾಗ್ಮಿ, ರಾಜಕೀಯಕ್ಕೆ ಬಂದರೆ ಗೆಲ್ಲುವ ಅವಕಾಶ ಹೆಚ್ಚಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಸಂಸದರಾಗಿ ಆಯ್ಕೆಯಾದ ನಂತರ ಕೇಂದ್ರ ಸಚಿವರಾಗುವ ಅವಕಾಶವೂ ಸಿಗಬಹುದು” ಎಂದು ಗ್ಯಾನೇಶ್ ಕುಮಾರ್ ಪ್ರಚೋದಿಸಿದ್ದರು ಎಂದು ಥಾಮ್ಸನ್ ಹೇಳಿದ್ದಾರೆ. ಆದರೆ, ಚುನಾವಣಾ ರಾಜಕೀಯದಲ್ಲಿ ಆಸಕ್ತಿಯಿಲ್ಲದ ಕಾರಣ ಈ ಆಫರ್ ಅನ್ನು ತಾವು ತಕ್ಷಣವೇ ನಿರಾಕರಿಸಿದ್ದಾಗಿ ಥಾಮ್ಸನ್ ಸ್ಪಷ್ಟಪಡಿಸಿದ್ದಾರೆ.

10 ವರ್ಷಗಳ‌ ಹಿಂದಿನ ಮಾತುಕತೆಯನ್ನು ಥಾಮ್ಸನ್
ಬಹಿರಂಗಪಡಿಸಿರುವುದು ಕೇಂದ್ರ ಚುನಾವಣಾ ಆಯೋಗದ ಸುತ್ತಲೂ ಹೆಣೆದುಕೊಂಡಿರುವ ವಿವಾದವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಇತರೆ ಇಬ್ಬರು ಚುನಾವಣಾ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳು ಬಹಿರಂಗವಾಗಿರುವ ಸಮಯದಲ್ಲಿ ಈ ಹೊಸ ವಿಷಯ ಹೊರಬಿದ್ದಿದೆ.

ಈ ಕುರಿತು ತೀವ್ರ ವಾಗ್ದಾಳಿ ನಡೆಸಿರುವ ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ, “ಅಧಿಕಾರದಲ್ಲಿದ್ದಾಗ ಬಿಜೆಪಿಗೆ ಅಭ್ಯರ್ಥಿಗಳನ್ನು ತರಲು ಗ್ಯಾನೇಶ್ ಕುಮಾರ್ ಅವರನ್ನು ಬಳಸಿಕೊಳ್ಳಲಾಗಿತ್ತು. ಈಗ ಅವರನ್ನು ಚುನಾವಣಾ ಆಯುಕ್ತರನ್ನಾಗಿ ಮಾಡಿ ಚುನಾವಣಾ ‘ಮ್ಯಾಚ್ ಫಿಕ್ಸಿಂಗ್’ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಐಎಎಸ್ ಅಧಿಕಾರಿಯಾಗಿದ್ದಾಗ ರಾಜಕೀಯ ಪಕ್ಷವೊಂದರ ಪರ ಅಭ್ಯರ್ಥಿಗಳನ್ನು ಸೆಳೆಯಲು ಇವರಿಗೆ ಯಾರು ಅಧಿಕಾರ ಕೊಟ್ಟಿದ್ದರು ಎಂದು ಕಾಂಗ್ರೆಸ್ ಪ್ರಶ್ನಿಸಿದ್ದು, ಗ್ಯಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...