ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

Date:

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಪ್ರಾಥಮಿಕ ವಿಜಿಲೆನ್ಸ್ ತನಿಖೆಗೆ ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಆದೇಶಿಸಿದ್ದಾರೆ. 2006ರಲ್ಲಿ ಗ್ಯಾನೇಶ್ ಕುಮಾರ್ ಅವರು ಕೇರಳ ಸರ್ಕಾರದ ಲೋಕೋಪಯೋಗಿ ಇಲಾಖೆಯ (PWD) ಕಾರ್ಯದರ್ಶಿಯಾಗಿದ್ದರು. ಆ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಮಲೇಷ್ಯಾ ಮೂಲದ ಸಿವಿಲ್ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ಯಾನೇಶ್ ಆರೋಪಿಯಾಗಿದ್ದಾರೆ.

- Advertisement -

2006ರಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಯೋಜನೆ (KSTP) ಅಡಿಯಲ್ಲಿ ಅಂಗಮಾಲಿಯಿಂದ ತಿರುವನಂತಪುರದವರೆಗೆ ‘ಎಂಸಿ ರಸ್ತೆ’ಯನ್ನು ಮರುನಿರ್ಮಾಣ ಮಾಡಲು ವಿಶ್ವಬ್ಯಾಂಕ್ ನೆರವಿನ 215 ಕೋಟಿ ರೂ. ಮೌಲ್ಯದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಕಾಮಗಾರಿಯನ್ನು ಮಲೇಷ್ಯಾದ ಸಂಸ್ಥೆ ಮತ್ತು ‘ಭಾಗೀರಥಾ ಎಂಜಿನಿಯರಿಂಗ್’ ಜಂಟಿ ಸಹಯೋಗದ ‘ಪಾಟಿ-ಬೆಲ್’ ಕನ್ಸೋರ್ಟಿಯಂಗೆ ವಹಿಸಲಾಗಿತ್ತು. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲೇಷ್ಯಾದ ಸಿವಿಲ್ ಎಂಜಿನಿಯರ್ ಲೀ ಸಿ ಬೀನ್ ಅವರು ಕಾಮಗಾರಿಗೆ ಹಣ ಪಾವತಿಯಲ್ಲಿನ ವಿಳಂಬ ಮತ್ತು ಬಿಲ್ ಮಂಜೂರು ಮಾಡಲು ಲಂಚದ ಬೇಡಿಕೆ ಸೇರಿದಂತೆ ಹಲವು ಗಂಭೀರ ಅಕ್ರಮಗಳ ಕುರಿತು ಅರೋಪ ಮಾಡಿದ್ದರು. ತದನಂತರ, ಅವರು ಮಲೇಷ್ಯಾಕ್ಕೆ ಹಿಂತಿರುಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಲೀ ಸಿ ಬೀನ್ ಬರೆದಿಟ್ಟಿದ್ದಾರೆ ಎನ್ನಲಾದ ಎರಡು ಡೆತ್‌ನೋಟ್‌ಗಳಲ್ಲಿ (ಆತ್ಮಹತ್ಯೆ ಪತ್ರ) ಒಂದನ್ನು ಅವರ ಪತ್ನಿಯ ಹೆಸರಿಗೆ, ಮತ್ತೊಂದನ್ನು ಕಂಪನಿಯ ನಿರ್ದೇಶಕರಿಗೆ ಬರೆಯಲಾಗಿತ್ತು.‌ಅದರಲ್ಲಿ ಅಂದಿನ PWD ಕಾರ್ಯದರ್ಶಿಯಾಗಿದ್ದ ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಆ ಸಮಯದಲ್ಲೇ ಈ ಪ್ರಕರಣದ ವಿಚಾರಣೆಯನ್ನು ವಿಜಿಲೆನ್ಸ್ ಆರಂಭಿಸಿತ್ತು. ಆದರೆ, ಆಡಳಿತ ಬದಲಾವಣೆಯಾದ ನಂತರ ಈ ಪ್ರಕರಣವನ್ನು ಮುಚ್ಚಿಹಾಕಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಇದೀಗ, ಈ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕೆಪಿಸಿಸಿ ನಾಯಕ ಮಲಯಿಂಕಿಂಝು ವೇಣುಗೋಪಾಲ್ ಅವರು ಶನಿವಾರ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪ್ರಕರಣದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿದೆ ಎಂಬುದನ್ನು ಮನಗಂಡ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರೊಂದಿಗೆ ಸಮಾಲೋಚಿಸಿ ತನಿಖೆಗೆ ಆದೇಶಿಸಿದ್ದಾರೆ. ನಿಯಮಗಳ ಪ್ರಕಾರ ಕಾನೂನು ಕ್ರಮಗಳನ್ನು ಕೈಗೊಳ್ಳಲು ವಿಜಿಲೆನ್ಸ್ ನಿರ್ದೇಶಕ ಮನೋಜ್ ಅಬ್ರಹಾಂ ಅವರಿಗೆ ಸೂಚನೆ ನೀಡಿದ್ದಾರೆ.

Advertisements

ಪ್ರಸ್ತುತ, ಮುಖ್ಯ ಚುನಾವಣಾ ಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಯಾವುದೇ ಕಾನೂನು ಅಡೆತಡೆಗಳಿಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

“ಈ ತನಿಖೆಯು 2007ರಲ್ಲಿ ಗ್ಯಾನೇಶ್ ಕುಮಾರ್ ರಾಜ್ಯದ PWD ಕಾರ್ಯದರ್ಶಿಯಾಗಿದ್ದಾಗ ನಡೆದ ಘಟನೆಗೆ ಸಂಬಂಧಿಸಿದ್ದಾಗಿದೆ. ಪ್ರಸ್ತುತ ಅವರು ಹೊಂದಿರುವ ಸಿಇಸಿ ಹುದ್ದೆಯ ಕಾನೂನು ರಕ್ಷಣೆ ಈ ಹಳೆಯ ಪ್ರಕರಣಕ್ಕೆ ಅನ್ವಯಿಸುವುದಿಲ್ಲ ಎಂಬುದನ್ನು ಕಾನೂನು ಸಲಹೆಗಾರರು ಸ್ಪಷ್ಟಪಡಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆಯೂ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...