ಜ್ಞಾನೇಶ್ ಕುಮಾರ್, ಸುಖ್‌ಬೀರ್ ಸಂಧು ಕೇಂದ್ರ ಚುನಾವಣಾ ಆಯುಕ್ತರಾಗಿ ನೇಮಕ

Date:

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತರಾಗಿ ಮಾಜಿ ನಾಗರಿಕ ಸೇವಾ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಹಾಗೂ ಸುಖ್‌ಬೀರ್‌ ಸಂಧು ಅವರನ್ನು ನೇಮಕ ಮಾಡಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷ ನಾಯಕ ಅಧೀರ್ ರಂಜನ್‌ ಚೌಧರಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ.

- Advertisement -

ಚುನಾವಣಾ ಆಯುಕ್ತರ ಆಯ್ಕೆಗಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮೂವರು ಸದಸ್ಯರ ಉನ್ನತ ಮಟ್ಟದ ಸಭೆಯ ನಂತರ ತಿಳಿಸಿದ್ದಾರೆ. ಚೌಧರಿ ಅವರು ಚುನಾವಣಾ ಅಧಿಕಾರಿ ನೇಮಕ ಮಾಡುವ ಸಭೆಯ ಮೂವರು ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಆದಾಗ್ಯೂ ಚೌಧರಿ ಅವರು ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ವಿರೋಧಿಸಿದ್ದಾರೆ.

“ಕಳೆದ ರಾತ್ರಿ 212 ಮಂದಿಯ ಹೆಸರುಗಳನ್ನು ನನಗೆ ಕಳಿಸಲಾಯಿತು. ಆ ಪಟ್ಟಿಯೊಂದಿಗೆ ನಾನು ಇಂದು ಬೆಳಿಗ್ಗೆ ಪ್ರಧಾನಿ ನಿವಾಸಕ್ಕೆ ತೆರಳಿದೆ. ಮಧ್ಯಾಹ್ನ 12 ಗಂಟೆಯಲ್ಲಿ ಸಭೆ ಆಯೋಜನೆಗೊಂಡ ಕಾರಣ ಸಣ್ಣ ಸಮಯದಲ್ಲಿ ನಾನು ಏನನ್ನು ನಿರ್ಧರಿಸುವುದಕ್ಕೆ ಸಾಧ್ಯವಾಗಲಿಲ್ಲ. ಆರು ಸದಸ್ಯರ ಕಿರು ಪಟ್ಟಿಯಲ್ಲಿ ಜ್ಞಾನೇಶ್ ಕುಮಾರ್ ಹಾಗೂ ಸುಖ್‌ಬೀರ್‌ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ಕೆಲವೇ ನಿಮಿಷಗಳಲ್ಲಿ ನೇಮಕ ಮಾಡಲಾಯಿತು” ಎಂದು ಅಧೀರ್ ರಂಜನ್‌ ಚೌಧರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

ಕೆಲವು ದಿನಗಳ ಹಿಂದೆ ಚುನಾವಣಾ ಆಯುಕ್ತರಾದ ಅರುಣ್ ಗೋಯಲ್‌ ರಾಜೀನಾಮೆ ಹಾಗೂ ಕಳೆದ ತಿಂಗಳು ಅನೂಪ್‌ ಚಂದ್ರ ಪಾಂಡೆ ನಿವೃತ್ತಿ ಹೊಂದಿದರು.

ಲೋಕಸಭಾ ಚುನಾವಣಾ ದಿನಾಂಕಗಳನ್ನು ಮಾ.15 ಅಥವಾ ಮಾ.16ರಂದು ಘೋಷಿಸುವ ಸಾಧ್ಯತೆಯಿದೆ.

ಈ ನಡುವೆ ಮಧ್ಯ ಪ್ರದೇಶದ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಸೇರಿಸದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...