ಹೇಬಿಯಸ್ ಕಾರ್ಪಸ್ ಅರ್ಜಿ ವಜಾ; ಯೂಟ್ಯೂಬರ್‌ ಸ್ವತಂತ್ರ ಭಾರದ್ವಾಜ್‌ಗೆ 14 ದಿನ ನ್ಯಾಯಾಂಗ ಬಂಧನ

Date:

ಎಸ್‌ಸಿ/ಎಸ್‌ಟಿ ಹಾಗೂ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ಬಂಧನ ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ, ಕೆಳ ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

- Advertisement -

ಭಾರದ್ವಾಜ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ರವೀಂದ್ರ ದುಡೇಜಾ ಅವರ ಪೀಠ ವಿಚಾರಣೆ ನಡೆಸಿ ವಜಾಗೊಳಿಸಿತು. ಇದಕ್ಕೂ ಮುನ್ನ ಸೋಮವಾರ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ನೇತೃತ್ವದ ಪೀಠವು ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ದಲಿತ ಯೂಟ್ಯೂಬರ್‌ ಒಬ್ಬರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾರದ್ವಾಜ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಪ್ರತಾಪ್ ಸಿಂಗ್ ಅವರ ಮುಂದೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಭಾನುವಾರವೂ ಭಾರದ್ವಾಜ್ ಅವರನ್ನು ಕರ್ತವ್ಯ ನಿರತ ಮ್ಯಾಜಿಸ್ಟ್ರೇಟ್ ಮುಂದೆ ಆನ್‌ಲೈನ್ ಮೂಲಕ ಹಾಜರುಪಡಿಸಲಾಗಿತ್ತು. ಆಗ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇದರ ನಡುವೆ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಆನ್‌ಲೈನ್ ಮೂಲಕ ಬೆದರಿಕೆ ಹಾಕುವುದು ಹಾಗೂ ಕಿರುಕುಳ ನೀಡಿದ ಆರೋಪಗಳು ದೂರಿನಲ್ಲಿವೆ.

ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 351(3), 78 (ಹಿಂಬಾಲಿಸುವುದು) ಮತ್ತು 79 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ಕೃತ್ಯ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯಲ್ಲಿ ವ್ಯಕ್ತಿಯ ತಲೆಬುರುಡೆ ಒಡೆದ ಸ್ವತಂತ್ರ ಭಾರದ್ವಾಜ್‌ ಬಂಧನ

ತನ್ನ ತಂದೆಯ ಮೇಲಿನ ಆಪಾದಿತ ಹಲ್ಲೆಯನ್ನು ಖಂಡಿಸಿ ಮಾತನಾಡಿದ ಬಳಿಕ ಹಾಗೂ ಪೊಲೀಸರಿಗೆ ದೂರು ನೀಡಿದ ನಂತರ ತನಗೆ ಅತ್ಯಾಚಾರದ ಬೆದರಿಕೆ ಹಾಕಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಜೊತೆಗೆ ನಿಂದನೀಯ ಭಾಷೆಯಲ್ಲಿ ಕಿರುಕುಳ ನೀಡಲಾಗಿದೆ ಮತ್ತು ಮಾರ್ಫ್ ಮಾಡಲಾದ ಚಿತ್ರಗಳನ್ನು ಕಳುಹಿಸಲಾಗಿದೆ ಎಂದು ಅವರು ದೂರಿದ್ದರು. ಈ ಆರೋಪಗಳ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...