ಹಫೀಜ್‌ಪೇಟ್‌ | ಮಹಿಳೆ ಮೇಲೆ ಹಲ್ಲೆಗೈದು, ಕೂದಲು ಹಿಡಿದು ಎಳೆದಾಡಿದ ಪೇದೆ; ಶಿಸ್ತು ಕ್ರಮಕ್ಕೆ ಶಿಫಾರಸು

Date:

ತೆಲಂಗಾಣದ ಹಫೀಜ್‌ಪೇಟ್ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿ, ಆಕೆಯ ಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್‌ ಸಿಬ್ಬಂದಿಯ ದೌರ್ಜನ್ಯದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ, ಘಟನೆ ಕುರಿತು ಪ್ರತಿಕ್ರಿಯಿಸಿರುವ ದಕ್ಷಿಣ ಮಧ್ಯ ರೈಲ್ವೆ (ಸೌತ್‌-ಸೆಂಟ್ರಲ್ ರೈಲ್ವೇ -SCR), ಪೇದೆ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿರುವುದಾಗಿ ಹೇಳಿದೆ.

- Advertisement -

ಶುಕ್ರವಾರ ರಾತ್ರಿ ನಡೆದಿದೆ ಎನ್ನಲಾದ ಘಟನೆಯ ವಿಡಿಯೋದಲ್ಲಿ; ಕರ್ತವ್ಯದಲ್ಲಿದ್ದ  ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವುದು ಮತ್ತು ಆಕೆಯ ಕೂದಲು ಹಿಡಿದು ಎಳೆಯುತ್ತಿರುವ ದೃಶ್ಯಗಳು ಸೆರೆಯಾಗಿವೆ. ಘಟನೆಯ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯನ್ನು ಬಿಡುವಂತೆ ಪೊಲೀಸ್ ಪೇದೆ ಬಳಿ ಮನವಿ ಮಾಡುತ್ತಿರುವುದೂ ವಿಡಿಯೋದಲ್ಲಿ ಕಾಣಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಘಟನೆ ಕುರಿತು ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಎಸ್‌ಸಿಆರ್, “ಘಟನೆಗೆ ಸಂಬಂಧಿಸಿದ ಸಿಬ್ಬಂದಿಯನ್ನು ಗುರುತಿಸಲಾಗಿದೆ. ಅವರು ತೆಲಂಗಾಣ ರಾಜ್ಯ ಪೊಲೀಸರಿಗೆ ಸೇರಿದ ಹೋಂ ಗಾರ್ಡ್ಎಂಬುದು ತಿಳಿದುಬಂದಿದೆ. ಹಫೀಜ್‌ಪೇಟ್ ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಲು ಅವರನ್ನು ನಿಯೋಜಿಸಲಾಗಿತ್ತು” ಎಂದು ತಿಳಿಸಿದೆ.

“ಘಟನೆ  ಬಳಿಕ, ಆರೋಪಿ ಪೇದೆಯನ್ನು ಹಫೀಜ್‌ಪೇಟ್ ರೈಲು ನಿಲ್ದಾಣದ ಕರ್ತವ್ಯದಿಂದ ಹಿಂತೆಗೆಯಲಾಗಿದೆ. ಮುಂದಿನ ಅಗತ್ಯ ಶಿಸ್ತು ಕ್ರಮಕ್ಕಾಗಿ ತೆಲಂಗಾಣ ರಾಜ್ಯ ಪೊಲೀಸ್ ಇಲಾಖೆಗೆ ಶಿಫಾರಸು ಮಾಡಲಾಗಿದೆ” ಎಂದು ಹೇಳಿದೆ.

ಮಹಿಳೆಯೊಬ್ಬರ ಮೇಲೆ ಕರ್ತವ್ಯದಲ್ಲಿರುವ ಸಿಬ್ಬಂದಿಯು ಸಾರ್ವಜನಿಕ ಸ್ಥಳದಲ್ಲಿ, ಅದೂ ರೈಲು ನಿಲ್ದಾಣದಂತಹ ಪ್ರದೇಶದಲ್ಲಿ ಈ ರೀತಿಯ ವರ್ತನೆ ನಡೆದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾ ಮೇಲಿನ ನಿರ್ಬಂಧ ಮಸೂದೆಗೆ ಟ್ರಂಪ್ ಸಹಿ: ಭಾರತಕ್ಕೆ ಶೇ. 100ರಷ್ಟು ಸುಂಕದ ಭೀತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಮೇಲಿನ ನೂತನ ನಿರ್ಬಂಧ...

ಅವಳ ಕಣ್ಣೋಟ | ಮಿಮಿ-ತಾಯ್ತನದ ನಡುವೆ ಮರೆಯಾದ ಕನಸು

ಮಹಿಳೆಯರ ಬದುಕಿನಲ್ಲಿ ಮದುವೆ, ತಾಯ್ತನ ಇವೆಲ್ಲವೂ ಸಹಜವಾದ ಆಯ್ಕೆಗಳೇ. ಆದರೆ ಅವಳ...

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ...

ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು...