ಹಲ್ದ್ವಾನಿ ʼಶುದ್ಧೀಕರಣʼ ವಿವಾದ: ಕಾಂಗ್ರೆಸ್ ನಾಯಕರ ವಿರುದ್ಧವೇ ಖರ್ಗೆ ಅಸಮಾಧಾನ

Date:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಮ್ಮ ಭೇಟಿಯ ಬಳಿಕ ನಡೆದ ‘ಶುದ್ಧೀಕರಣ’ ಹವನವನ್ನು ಹಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಖಂಡಿಸದಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಸಿಗುವ ಕೆಲ ನಾಯಕರು ಈ ಘಟನೆ ಕುರಿತು ಸ್ಪಷ್ಟವಾಗಿ ಮಾತನಾಡದಿರುವುದೇ ತಮಗೆ ಹೆಚ್ಚಿನ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಕೆಲ ದಿನಗಳ ಹಿಂದೆ ಖರ್ಗೆ ಹಲ್ದ್ವಾನಿಗೆ ಭೇಟಿ ನೀಡಿದ ಬಳಿಕ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಥಳದಲ್ಲಿ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ‘ಶುದ್ಧೀಕರಣ ಹವನ’ ಆಯೋಜಿಸಲಾಗಿತ್ತು. ಈ ಘಟನೆಯ ಹಿಂದೆ ಬಿಜೆಪಿಗೆ ಸಂಬಂಧಿಸಿದವರು ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇದು ಜಾತೀಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಟೀಕಿಸಿದೆ. ಆದರೆ ಬಿಜೆಪಿ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದು, ಪಕ್ಷದ ಯಾವುದೇ ಸದಸ್ಯರು ಇದರಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

“ನಾನು ಇದನ್ನು ರಾಜಕೀಯ ವಿಚಾರವನ್ನಾಗಿ ಮಾಡಲು ಬಯಸುವುದಿಲ್ಲ. ನಾನು ದಲಿತ, ನನ್ನನ್ನು ರಕ್ಷಿಸಿ ಎಂದು ಯಾರ ಬಳಿಯೂ ಕೇಳಿಲ್ಲ. ಹೋರಾಡುವ ಶಕ್ತಿ ನನ್ನಲ್ಲಿದೆ ಮತ್ತು ನಾನು ಹೋರಾಡುತ್ತೇನೆ. ಆದರೆ ಹಲ್ದ್ವಾನಿಯಲ್ಲಿ ನಡೆದ ವೇದಿಕೆಯ ಶುದ್ಧೀಕರಣವು ಅಸ್ಪೃಶ್ಯತೆಯ ನೋವನ್ನು ಮತ್ತೆ ಅನುಭವಿಸುವಂತೆ ಮಾಡಿತು ಮತ್ತು ನನ್ನನ್ನು ಅವಮಾನಿಸಿತು” ಎಂದು ಖರ್ಗೆ ರಾಜ್ಯಸಭೆಯಲ್ಲಿ ಹೇಳಿದ್ದರು. ಘಟನೆಗೆ ಸಂಬಂಧಿಸಿದವರ ವಿರುದ್ಧ ಅಸ್ಪೃಶ್ಯತೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದರು.

ಖರ್ಗೆ ಅವರ ಹೇಳಿಕೆಗೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಜೆ ಪಿ ನಡ್ಡಾ, ಘಟನೆ ದುರದೃಷ್ಟಕರ ಎಂದು ಹೇಳಿದ್ದರು. ಇದರಲ್ಲಿ ಬಿಜೆಪಿಯ ಯಾವುದೇ ಸದಸ್ಯರು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಬಗ್ಗೆ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ: ಸಾವರ್ಕರ್ ಮಾನಹಾನಿ ಕೇಸ್‌: ವಿಚಾರಣೆಗೆ ತಡೆ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ

AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಪಕ್ಷ ಈ ಘಟನೆಯನ್ನು ಈಗಾಗಲೇ ಖಂಡಿಸಿದೆ ಎಂದು ಖರ್ಗೆ ಅವರಿಗೆ ತಿಳಿಸಿದರು. ಆದರೆ ಖರ್ಗೆ ಅವರ ಪ್ರತಿಕ್ರಿಯೆಯಿಂದ ಅವರು ಈ ಉತ್ತರದಿಂದ ಸಂಪೂರ್ಣವಾಗಿ ತೃಪ್ತರಾಗಿರಲಿಲ್ಲ ಎಂಬುದು ಸಭೆಯಲ್ಲಿ ಭಾಗವಹಿಸಿದ್ದ ನಾಯಕರ ಮಾತುಗಳಿಂದ ತಿಳಿದುಬಂದಿದೆ ಎನ್ನಲಾಗಿದೆ.

ಪಕ್ಷದ ನಿಲುವಿಗೆ ವಿರುದ್ಧವಾದ ರೀತಿಯಲ್ಲಿ ಕೆಲ ನಾಯಕರು ಆಗಾಗ್ಗೆ ಹೇಳಿಕೆಗಳನ್ನು ನೀಡುವುದು ಮತ್ತು ಲೇಖನಗಳನ್ನು ಬರೆಯುವುದನ್ನೂ ಖರ್ಗೆ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ ಯಾವುದೇ ನಾಯಕರ ಹೆಸರನ್ನು ಅವರು ಬಹಿರಂಗಪಡಿಸಿಲ್ಲ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್, ಹಲ್ದ್ವಾನಿ ಘಟನೆ “ಸ್ವೀಕಾರಾರ್ಹವಲ್ಲ” ಮತ್ತು “ಖಂಡನೀಯ” ಎಂದು ಹೇಳಿದರು. ಈ ಘಟನೆ ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೋಹಿಂಗ್ಯಾ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದ ಐಸಿಜೆ ತೀರ್ಪಿನ ಅರ್ಥವೇನು?

ರೋಹಿಂಗ್ಯಾ ಅಲ್ಪಸಂಖ್ಯಾತ ಸಮುದಾಯದ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ...

ವಿಜಯಪುರ |ಜನರ ಕೆಲಸಕ್ಕೆ ಅಲೆದಾಡಿಸುವ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಉಪಲೋಕಾಯುಕ್ತ ಫಣೀಂದ್ರ ಎಚ್ಚರಿಕೆ

ಸಾರ್ವಜನಿಕರ ಅಗತ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸದೇ, ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿದರೆ...

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ಗೆ ಸಿರಾಜ್ ಅವರನ್ನು ಕೈಬಿಟ್ಟಿದ್ದಕ್ಕೆ ವ್ಯಾಪಕ ಅಸಮಾಧಾನ

ನಿಮ್ಮ ಅಗ್ರ ನಾಲ್ವರು ಬೌಲರ್‌ಗಳಲ್ಲಿ ಸಿರಾಜ್‌ಗೆ ಸ್ಥಾನವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳುವುದು ನನಗೆ...