SIR ಸ್ಥಗಿತಗೊಳಿಸಿ, ತೆಗೆದುಹಾಕಲಾದ ಮತದಾರರ ಹೆಸರುಗಳ ಆಡಿಟ್‌ ಮಾಡಿ: ಶಶಿ ತರೂರ್ ಆಗ್ರಹ

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಮತ್ತು ಇತ್ತೀಚೆಗೆ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಎಲ್ಲಾ ಹೆಸರುಗಳ ಸಮಗ್ರ ಆಡಿಟ್ ನಡೆಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್ ಆಗ್ರಹಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುತ್ತಿರುವ ವಿಧಾನದಲ್ಲಿ ಗಂಭೀರ ಪಾರದರ್ಶಕತೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಶಶಿ ತರೂರ್ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಯಾವುದೇ ಸೂಕ್ತ ಕಾರಣ ಅಥವಾ ಮುನ್ಸೂಚನೆ ನೀಡದೆ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ, ಪ್ರಕ್ರಿಯೆಯನ್ನು ಮಧ್ಯದಲ್ಲೇ ತಡೆಹಿಡಿದು, ಇಲ್ಲಿಯವರೆಗೆ ಕೈಬಿಡಲಾದ ಎಲ್ಲಾ ಹೆಸರುಗಳ ಸ್ವತಂತ್ರ ಮತ್ತು ಸಾರ್ವಜನಿಕ ಆಡಿಟ್ ಮಾಡುವುದು ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಅಗತ್ಯವಾಗಿದೆ ಎಂದು ಶಶಿ ತರೂರ್ ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ಶಶಿ ತರೂರ್‌ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ಗುಂಪು

ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದ್ದು, ತಾಂತ್ರಿಕ ಲೋಪಗಳು ಅಥವಾ ಪ್ರಕ್ರಿಯಾತ್ಮಕ ಲೋಪದೋಷಗಳಿಂದಾಗಿ ಯಾವುದೇ ಅರ್ಹ ನಾಗರಿಕನು ಮತದಾನದ ಹಕ್ಕಿನಿಂದ ವಂಚಿತನಾಗಬಾರದು. ತೆಗೆದುಹಾಕಲಾದ ಹೆಸರುಗಳ ಪಟ್ಟಿಯನ್ನು ಪ್ರಕಟಿಸಿ, ಆಯಾ ಮತದಾರರಿಗೆ ತಮ್ಮ ಹಕ್ಕನ್ನು ಮರುಸ್ಥಾಪಿಸಿಕೊಳ್ಳಲು ಸೂಕ್ತ ಅವಕಾಶ ನೀಡಬೇಕು ಎಂದು ಶಶಿ ತರೂರ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

Advertisements

ಇನ್ನು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶದ ವಿವಿಧ ಭಾಗಗಳಲ್ಲಿ ಹಾಗೂ ಚುನಾವಣಾ ಆಯೋಗದ ಹಂತದಲ್ಲಿ ಈ ಹಿಂದೆ ಆಡಿಟ್ ಮತ್ತು ಪರಿಶೀಲನಾ ಪ್ರಕ್ರಿಯೆಗಳು ನಡೆದಿವೆ.

ಬಿಹಾರದಲ್ಲಿ ಈ ಹಿಂದೆ ನಡೆಸಲಾಗಿದ್ದ ಎಸ್‌ಐಆರ್‌ನಲ್ಲಿ ಸಾವಿರಾರು ಮತದಾರರ ಹೆಸರುಗಳು ಅನಗತ್ಯವಾಗಿ ಕೈಬಿಡಲಾಗಿತ್ತು. ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿದಾಗ ನ್ಯಾಯಾಲಯದ ನಿರ್ದೇಶನದಂತೆ ಮತ್ತು ಸಾರ್ವಜನಿಕ ಒತ್ತಡಕ್ಕೆ ಮಣಿದು ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಆಡಿಟ್‌ಗೆ ಆದೇಶಿಸಿತ್ತು. ಈ ಆಡಿಟ್ ವೇಳೆ ಪ್ರಕ್ರಿಯಾತ್ಮಕ ಲೋಪಗಳಿಂದಾಗಿ ಸಾವಿರಾರು ಅರ್ಹ ಮತದಾರರ ಹೆಸರುಗಳು ರದ್ದಾಗಿದ್ದು ಬೆಳಕಿಗೆ ಬಂದಿತ್ತು.

ಇನ್ನು ಬೆಂಗಳೂರಿನಲ್ಲೂ ಕೇಂದ್ರ ಚುನಾವಣಾ ಆಯೋಗವು ವ್ಯಾಪಕ ಪರಿಶೀಲನೆ ಹಾಗೂ ಆಡಿಟ್‌ಗೆ ಆದೇಶಿಸಿತ್ತು. ಶಿವಾಜಿನಗರ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಬಿಡಲಾಗಿದ್ದ ಮತ್ತು ಸೇರಿಸಲಾಗಿದ್ದ ಹೆಸರುಗಳ ಬಗ್ಗೆ ವಿಶೇಷ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಸಾವಿರಾರು ತಪ್ಪು ನೋಂದಣಿಗಳು ಪತ್ತೆಯಾಗಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇಂಡಿಯಾ’ ಒಕ್ಕೂಟ ಅತ್ಯಂತ ಒಗ್ಗಟ್ಟಾಗಿದೆ; ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಮಮತಾ ಬ್ಯಾನರ್ಜಿ ಆಗ್ರಹ

ವಿಪಕ್ಷಗಳ ಇಂಡಿಯಾ ಒಕ್ಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು...

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

ವಿಜಯಪುರ | ಜನಗಣತಿಯಲ್ಲಿ 21 ವಿಧದ ಅಂಗವೈಕಲ್ಯ ದಾಖಲಿಸಲು ಆಗ್ರಹ

2027ರ ಜನಗಣತಿಯಲ್ಲಿ ಅಂಗವಿಕಲರ ನಿಖರ ಸಂಖ್ಯೆ ಮಾತ್ರವಲ್ಲದೆ, ಅಂಗವಿಕಲರ ಹಕ್ಕುಗಳ ಕಾಯ್ದೆ-2016ರಡಿ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್ ಪ್ರವೇಶಿಸುವ ಮುನ್ನ ಯಾಕೆ ಸಹಿ ಮಾಡಬೇಕು?

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ,...