15 ಲಕ್ಷ ರೂ. ಬಂತು; ‘ಹ್ಯಾಪಿ ಜುಮ್ಲಾ ದಿವಸ್’ ಎಂದು ಪ್ರಧಾನಿಯನ್ನು ಛೇಡಿಸಿದ ನೆಟ್ಟಿಗರು

Date:

ಇಂದು ಏಪ್ರಿಲ್‌ 1 ಎಲ್ಲರನ್ನು ತಮಾಷೆ ಮಾಡುವ ದಿನವನ್ನಾಗಿ ಆಚರಿಸಲಾಗುತ್ತದೆ. ಲೋಕಸಭಾ ಚುನಾವಣೆಗಳು ಕೆಲವೇ ದಿನಗಳು ಬಾಕಿಯಿದೆ. ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಗಳು ಈಗಾಗಲೇ ಶುರುವಾಗಿದೆ

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಜನರನ್ನು ಮೂರ್ಖರನ್ನಾಗಿಸಿದ ವಿಡಿಯೋವನ್ನು ನೆಟ್ಟಿಗರು ಇಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ‘ಹ್ಯಾಪಿ ಜುಮ್ಲಾ ದಿವಸ್’ ಎಂದು ಛೇಡಿಸಿದ್ದಾರೆ.

2014ರ ಚುನಾವಣಾ ಪ್ರಚಾರದ ಸಂದರ್ಭ ಭಾಷಣ ಮಾಡಿದ್ದ ನರೇಂದ್ರ ಮೋದಿ ವಿದೇಶದಲ್ಲಿರುವ ಎಲ್ಲ ಕಪ್ಪು ಹಣವನ್ನು ವಾಪಸ್‌ ತಂದು ದೇಶದ ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೂ 15 ಲಕ್ಷ ರೂ. ಜಮಾ ಮಾಡುವುದಾಗಿ ಹೇಳಿದ್ದರು. ಅದೇ ರೀತಿ ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಕೂಡ ತಮ್ಮ ಭಾಷಣದಲ್ಲಿ ತಿಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

10 ವರ್ಷವಾದರೂ ಪ್ರಧಾನಿಯ ಯಾವುದೇ ಭರವಸೆಗಳು ಈಡೇರದ ಕಾರಣ ಏಪ್ರಿಲ್‌ ಒಂದನೇ ದಿನಾಂಕವಾದ ಇಂದು ಪ್ರಧಾನಿಯ ಭಾಷಣ ಹಾಗೂ ವಿಡಿಯೋಗಳನ್ನು ಹಂಚಿಕೊಂಡು ಹ್ಯಾಪಿ ಜುಮ್ಲಾ ದಿವಸ್‌ ಎಂದು ಟ್ರೋಲ್‌ ಮಾಡಿದ್ದಾರೆ.

ಕೆಲವರು ಪ್ರಧಾನಿ ಕಪ್ಪು ಹಣ ವಿತರಣಾ ತಂಡದಿಂದ 15 ಲಕ್ಷ ರೂ. ಬಂದಿದೆ. ಹ್ಯಾಪಿ ಜುಮ್ಲಾ ದಿವಸ್ ಎಂದು ಸಂದೇಶಗಳನ್ನು ಎಲ್ಲರಿಗೂ ಟ್ವಿಟರ್‌, ಫೇಸ್‌ಬುಕ್‌ ವ್ಯಾಟ್ಸಾಪ್‌ ಮೂಲಕ ಹಂಚಿಕೊಳ್ಳುತ್ತಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...

ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ...

ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ಬಗ್ಗೆ ಏ.18ರಂದು ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು...

ಲೋಕಸಭೆ ಚುನಾವಣೆ | ಪ್ರಣಾಳಿಕೆ: ಬಿಜೆಪಿ ‘ಸಂಕಲ್ಪ ಪತ್ರ’ V/s ಕಾಂಗ್ರೆಸ್‌ ‘ನ್ಯಾಯ ಪತ್ರ’; 10 ಪ್ರಮುಖ ಅಂಶಗಳು

ಮೂರನೇ ಬಾರಿಗೆ ಅಧಿಕಾರ ಹಿಡಿಯುತ್ತೇವೆಂದು ಅಬ್ಬರದ ಭಾಷಣ ಮಾಡುತ್ತಿರುವ ಬಿಜೆಪಿ, ಮುಂಬರು...