ಪತ್ನಿ, ಅತ್ತೆ ಮನೆಯವರ ಕಿರುಕುಳ ಆರೋಪ; ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದ ವ್ಯಕ್ತಿ

Date:

ಗುಜರಾತ್‌ನ ಸೂರತ್‌ನಲ್ಲಿ ದಾಂಪತ್ಯ ಕಲಹವೊಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಪತ್ನಿ ಮತ್ತು ಅತ್ತೆಯ ಮನೆಯವರು ನಿರಂತರ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿರುವ ವ್ಯಕ್ತಿಯೊಬ್ಬರು, ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಅತ್ತೆಯ ಮನೆಯವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು, ಇಲ್ಲವೇ ತಮಗೆ ಗೌರವಯುತವಾಗಿ ಸಾಯಲು ಇಚ್ಛಾಮರಣಕ್ಕೆ ಅನುಮತಿ ನೀಡಬೇಕು ಎಂದು ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

- Advertisement -

ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವವರನ್ನು ಸೂರತ್‌ ಜಿಲ್ಲೆಯ ಬಾಬುಭಾಯಿ ಪಟೇಲ್ ಎಂದು ಹೇಳಲಾಗಿದೆ. ಅವರು ತನ್ನ ಪತ್ನಿ ಮೋನಿಕಾ ಚೌಹಾಣ್, ಅತ್ತೆ ತಾರಾಬೆನ್ ಹಾಗೂ ಭಾವ ದೀಪಕ್ ಚೌಹಾಣ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಮೂವರೂ ತಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಮತ್ತು ಕಾನೂನಾತ್ಮಕವಾಗಿ ಭಾರಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈವರೆಗೆ ನಾಲ್ಕು ಮದುವೆಯಾಗಿರುವ ಬಾಬುಭಾಯಿ, ತಮ್ಮ ಮೊದಲ ಪತ್ನಿಗೆ ಜನಿಸಿದ್ದ 12 ವರ್ಷದ ಮಗನನ್ನು ಹಾಲಿ ಪತ್ನಿ ಮೋನಿಕಾ ಅವರು ಕುತ್ತಿಗೆ ಹಿಸುಕಿ ಮತ್ತು ಬಾಯಿಗೆ ರೊಟ್ಟಿ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದರು ಎಂದು ದೂರಿದ್ದಾರೆ.

ಆ ಸಂದರ್ಭದಲ್ಲಿಯೂ ತಾವು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಎಫ್‌ಐಆರ್‌ ದಾಖಲಾಗಿರಲಿಲ್ಲ. ಆ ಘಟನೆಗೆ ಸಂಬಂಧಿಸಿದಂತೆ, ಕೊಲೆ ಯತ್ನ ಪ್ರಕರಣ ದಾಖಲಿಸಿ, ತನಿಖೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬಾಬುಭಾಯಿ ಒತ್ತಾಯಿಸಿದ್ದಾರೆ. ಪೊಲೀಸರು ತಮ್ಮ ಮಗನಿಗೆ ಆಪ್ತಸಮಾಲೋಚನೆ ನಡೆಸಿದರೆ ಸತ್ಯವೇನೆಂಬುದು ಜಗತ್ತಿಗೆ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಗಮನಿಸಿ: ನಿಮ್ಮ ಗ್ಯಾರಂಟಿ ಯೋಜನೆ, ಸರ್ಕಾರಿ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತದೆ ‘ಎಸ್‌ಐಆರ್’

ತಾವು ಒಬ್ಬ ಪುರುಷ ಎಂಬ ಒಂದೇ ಕಾರಣಕ್ಕಾಗಿ ಪೊಲೀಸರು ಮತ್ತು ಕಾನೂನು ವ್ಯವಸ್ಥೆ ತಮ್ಮ ದೂರಿನ ಬಗ್ಗೆ ಮಲತಾಯಿ ಧೋರಣೆ ತಳೆದಿದೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಬುಭಾಯಿ ಪಟೇಲ್ ಆಪಾದಿಸಿದ್ದಾರೆ. ತಮ್ಮ ಪತ್ನಿ ಒಬ್ಬ ದರೋಡೆಕೋರ ಮಹಿಳೆಯಾಗಿದ್ದು, ಆಕೆ ಮತ್ತು ಆಕೆಯ ಕುಟುಂಬದವರು ವಿಚ್ಛೇದನದ ಇತ್ಯರ್ಥಕ್ಕಾಗಿ ತಮ್ಮಿಂದ ಭಾರಿ ಮೊತ್ತದ ಹಣವನ್ನು ಬೇಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ತಾವು ನೀಡಿದ ದೂರುಗಳ ಬಗ್ಗೆ ಪೊಲೀಸರು ಯಾವುದೇ ಸೂಕ್ತ ಕ್ರಮ ಕೈಗೊಳ್ಳದ ಕಾರಣ, ತಮಗೆ ಬದುಕುವ ಆಸೆಯೇ ಇಲ್ಲದಂತಾಗಿದೆ ಎಂದು ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆ. ಅಲ್ಲದೆ, ಮುಂದಿನ ಮೂರು ದಿನಗಳ ಒಳಗಾಗಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗದಿದ್ದರೆ ತಾವು ‘ಗಂಭೀರ ಹೆಜ್ಜೆ’ ಇಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...