ಬೆಂಗಳೂರು ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ ಕೋರ್ಟ್

Date:

ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ವಿಚಾರದಲ್ಲಿ ಇಸ್ಕಾನ್ ಮುಂಬೈ ಪರವಾಗಿ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಸ್ಕಾನ್ ಬೆಂಗಳೂರಿನ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಎ ಎಸ್ ಓಕಾ ಮತ್ತು ಆಗಸ್ಟೀನ್ ಜಾರ್ಜ್ ಮಾಸಿಹ್ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ. 2011ರ ಮೇ 23ರಂದು ಹೈಕೋರ್ಟ್ ತೀರ್ಪನ್ನು ನೀಡಿದೆ. ಈ ತೀರ್ಪನ್ನು ಪಶ್ನಿಸಿ ಇಸ್ಕಾನ್ ಬೆಂಗಳೂರು 2011ರ ಜೂನ್ 2ರಂದು ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ‘ಇಸ್ಕಾನ್’ ನಿಷೇಧಕ್ಕೆ ಬಾಂಗ್ಲಾ ಹೈಕೋರ್ಟ್‌ ನಕಾರ

2009ರಲ್ಲಿ ಬೆಂಗಳೂರಿನ ಸ್ಥಳೀಯ ನ್ಯಾಯಾಲಯವು ಇಸ್ಕಾನ್ ಬೆಂಗಳೂರಿನ ಪರವಾಗಿ ತೀರ್ಪು ನೀಡಿತ್ತು. ಆದರೆ ಹೈಕೋರ್ಟ್ ಈ ತೀರ್ಪು ರದ್ದುಗೊಳಿಸಿ, ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನವು ಇಸ್ಕಾನ್ ಮುಂಬೈಗೆ ಸೇರಿದ್ದು ಎಂಬ ತೀರ್ಪು ನೀಡಿತು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಬೆಂಗಳೂರು ಇಸ್ಕಾನ್‌ನ ಪದಾಧಿಕಾರಿ ಕೋದಂಡರಾಮ ದಾಸ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೋದಂಡರಾಮ ಅರ್ಜಿ ಪುರಸ್ಕರಿಸಿದ ಉನ್ನತ ನ್ಯಾಯಾಲಯವು ಬೆಂಗಳೂರಿನಲ್ಲಿ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ತೀರ್ಪು ನೀಡಿದೆ.

ಕರ್ನಾಟಕ-ನೋಂದಾಯಿತ ಸಮಾಜವಾದ ಇಸ್ಕಾನ್ ಬೆಂಗಳೂರು, ದಶಕಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು. 1860ರ ರಾಷ್ಟ್ರೀಯ ಸಂಘಗಳ ನೋಂದಣಿ ಕಾಯ್ದೆ ಮತ್ತು ಬಾಂಬೆ ಸಾರ್ವಜನಿಕ ಟ್ರಸ್ಟ್ ಕಾಯ್ದೆ, 1950ರ ಅಡಿಯಲ್ಲಿ ನೋಂದಾಯಿಸಲಾದ ಇಸ್ಕಾನ್ ಮುಂಬೈ, ಇಸ್ಕಾನ್ ಬೆಂಗಳೂರು ತನ್ನ ಶಾಖೆಯಾಗಿದೆ. ಇದರ ಆಸ್ತಿ ತನ್ನ ವ್ಯಾಪ್ತಿಗೆ ಸೇರಿದ ಎಂದು ಇಸ್ಕಾನ್ ಮುಂಬೈ ವಾದಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...