ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ನೂತನ ಅಪ್‌ಡೇಟ್‌ಗಳನ್ನು ಅಪ್‌ಲೋಡ್ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಹರಿಯಾಣದಲ್ಲಿ ಆರಂಭಿಕವಾಗಿ ಹಲವು ಬಿಜೆಪಿಯು ಮುನ್ನಡೆ ಸಾಧಿಸಿದೆ. ಇದಾದ ಬೆನ್ನಲ್ಲೇ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ‘ಟ್ರೆಂಡ್ ಅಪ್‌ಡೇಟ್’ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ದೂರು ಪ್ರತಿಯನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಜೈರಾಮ್ ರಮೇಶ್, “ಚುನಾವಣಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಟ್ರೆಂಡ್‌ಗಳನ್ನು ಅಪ್‌ಡೇಟ್ ಮಾಡುವಲ್ಲಿ ವಿಳಂಬದ ಬಗ್ಗೆ ನಾನು ಪತ್ರ ಬರೆದಿದ್ದೇನೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ
ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈರಾಮ್ ರಮೇಶ್, “ಮುಂದಿನ 5-7 ನಿಮಿಷಗಳಲ್ಲಿ ನಾವು ದೂರು ಸಲ್ಲಿಸುತ್ತೇವೆ. ಚುನಾವಣಾ ಆಯೋಗವು ನಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತದೆ ಎಂದು ನಾವು ಭಾವಿಸುತ್ತೇವೆ. 10-11ರ ಸುತ್ತಿನ ಮತ ಎಣಿಕೆ ಈಗಾಗಲೇ ನಡೆದಿದೆ. ಆದರೆ 4-5 ಸುತ್ತುಗಳ ಅಪ್‌ಡೇಟ್ ಅನ್ನು ಮಾತ್ರ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಹಾಕಿದೆ. ಇದು ಆಡಳಿತದ ಮೇಲೆ ಒತ್ತಡ ಹೇರುವ ತಂತ್ರವಾಗಿದೆ” ಎಂದು ದೂರಿದ್ದಾರೆ.
ಚುನಾವಣಾ ಆಯೋಗದ ಅಂಕಿಅಂಶಗಳು ಮತ್ತು ಮಾಧ್ಯಮದ ಅಂಕಿಅಂಶಗಳಿಗೂ ಹೊಂದಾಣಿಕೆಯಿಲ್ಲ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ
“ಚುನಾವಣಾ ಆಯೋಗದ ಅಂಕಿಅಂಶಗಳು ಹಿಂದುಳಿದಿವೆ. ಅವರು ಇನ್ನೂ ನಾಲ್ಕನೇ ಅಥವಾ ಐದನೇ ಸುತ್ತಿನ ಡೇಟಾ ಅಪ್‌ಲೋಡ್ ಮಾಡುತ್ತಿದ್ದಾರೆ. ಆದರೆ ನಿಜವಾಗಿ 11ನೇ ಸುತ್ತಿನ ಎಣಿಕೆಯಾಗಿದೆ. ನಮ್ಮ ಪ್ರಧಾನ ಕಾರ್ಯದರ್ಶಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.
ವರದಿ ಪ್ರಕಾರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ನಡುವೆ ಚುನಾವಣಾ ಫಲಿತಾಂಶ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ತಡವಾಗಿ ಅಪ್‌ಲೋಡ್ ಆಗುತ್ತಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ಯಾವುದೇ ಏಜೆಂಟ್‌ಗಳು ಅಥವಾ ಅಭ್ಯರ್ಥಿಗಳು ಈ ಆರೋಪ ಮಾಡಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
Here is my letter to @ECISVEEP on the inordinate and unacceptable delay in updating trends in the Haryana assembly elections pic.twitter.com/Lvq747seTz
— Jairam Ramesh (@Jairam_Ramesh) October 8, 2024
