ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬದಲು

Date:

ಅಸೋಜ್ ಅಮವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ.

- Advertisement -

ಮುಂದಿನ ಅಕ್ಟೋಬರ್‌ 1 ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಕ್ಟೋಬರ್‌ 5ಕ್ಕೆ ನಿಗದಿಪಡಿಸಿದೆ. ಇನ್ನೂ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಅಕ್ಟೋಬರ್‌ 4ರ ಬದಲಿಗೆ ಅಕ್ಟೋಬರ್‌ 8ಕ್ಕೆ ಪರಿಷ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಂದ ಪೊಲೀಸರಿಗಾದ ಅವಮಾನ | Darshan Thoogudeepa

ಪಂಜಾಬ್, ರಾಜಸ್ಥಾನ ಮತ್ತು ಹರಿಯಾಣದ ಹಲವಾರು ಕುಟುಂಬಗಳು ತಮ್ಮ ಗುರು ಜಾಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮವಾಸ್ಯೆ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಹರಿಯಾಣದ ಬಿಷ್ಣೋಯ್ ಸಮುದಾಯದ ಜನ ರಾಜಸ್ಥಾನಕ್ಕೆ ಸಾಮೂಹಿಕವಾಗಿ ತೆರಳಲಿದ್ದಾರೆ. ಅಕ್ಟೋಬರ್‌ 2ರಂದು ಹಬ್ಬ ಇರುವುದರಿಂದ ಸಿರ್ಸಾ, ಫತೇಹಾಬಾದ್ ಮತ್ತು ಹಿಸಾರ್‌ನಲ್ಲಿ ವಾಸಿಸುವ ಸಾವಿರಾರು ಬಿಷ್ಣೋಯಿ ಕುಟುಂಬಗಳು ಅಕ್ಟೋಬರ್‌ 1ರಂದು (ನಿಗದಿಪಡಿಸಿದ್ದ ಮತದಾನದ ದಿನ) ರಾಜಸ್ಥಾನಕ್ಕೆ ಪ್ರಯಾಣಿಸಲಿವೆ.

ಅಲ್ಲದೇ ಅದು ಶತಮಾನಗಳ ಸಂಪ್ರದಾಯ ಹಬ್ಬವಾಗಿರುವುದರಿಂದ ಅವರು ಮತದಾನವನ್ನೂ ನಿರಾಕರಿಸಲು ಮುಂದಾಗಿದ್ದಾರೆ. ಇದರಿಂದ ಮತದಾರರ ಭಾಗವಹಿಸುವಿಕೆಯನ್ನು ಕಡಿಮೆ ಮಾಡಬಹುದು. ಹಾಗಾಗಿ ಸಮುದಾಯಗಳ ಭಾವನೆ ಗೌರವಿಸುವ ಉದ್ದೇಶದಿಂದ ಚುನಾವಣಾ ಆಯೋಗ ಚುನಾವಣಾ ದಿನಾಂಕ ಬದಲಾವಣೆ ಮಾಡಿದೆ ಎಂದು ಆಯೋಗ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...