ಭ್ರೂಣಹತ್ಯೆ | ಹೆಣ್ಣು ಮಕ್ಕಳ ಪ್ರಮಾಣ ಇಳಿಕೆ: ಹರಿಯಾಣದಲ್ಲಿ ಕಾರ್ಯಪಡೆ ರಚನೆ, 300 ಗರ್ಭಪಾತ ಕೇಂದ್ರಗಳಿಗೆ ಬೀಗ

Date:

ಹರಿಯಾಣದಲ್ಲಿ ಹೆಣ್ಣು ಭ್ರೂಣಹತ್ಯೆ ಜಾಲದ ಬಗ್ಗೆ ಮಾಧ್ಯಮವೊಂದು ತನಿಖೆ ನಡೆಸಿದ್ದು, ಹೆಣ್ಣು ಭ್ರೂಣಹತ್ಯೆಯಿಂದಾಗಿ ರಾಜ್ಯದಲ್ಲಿ ಲಿಂಗಾನುಪಾತ ಕುಸಿತ ಕಂಡಿದೆ ಎಂದಿದೆ. ಇದಾದ ಬೆನ್ನಲ್ಲೇ ಸರ್ಕಾರವು ಅಕ್ರಮ ಗರ್ಭಪಾತವನ್ನು ತಡೆಯಲು ಕಾರ್ಯಪಡೆಯನ್ನು ಸ್ಥಾಪಿಸಿದೆ.

- Advertisement -

ಇದಲ್ಲದೆ, ಹರಿಯಾಣದಲ್ಲಿರುವ 1,500 ಗರ್ಭಪಾತ ಕೇಂದ್ರಗಳ ಪೈಕಿ 300ರ ನೋಂದಣಿಯನ್ನು ರದ್ದುಗೊಳಿಸಲಾಗಿದೆ. ಈ ಪೈಕಿ ಕೆಲವು ಕೇಂದ್ರಗಳು ಸರ್ಕಾರದ ಕ್ರಮಕ್ಕೂ ಮುನ್ನವೇ ಸ್ವಯಂಪ್ರೇರಿತವಾಗಿಯೇ ಕೇಂದ್ರಕ್ಕೆ ಬೀಗ ಜಡಿದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ವಿಜಯನಗರ | ಭ್ರೂಣಹತ್ಯೆ ನಡೆಯುತ್ತಿದ್ದರೂ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್‌ಐ ಅರೋಪ

ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಔಷಧ ನಿಯಂತ್ರಣ ಮತ್ತು ಪೊಲೀಸರ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಮಿಷನ್-ಹರಿಯಾಣದ ನಿರ್ದೇಶಕ ಡಾ. ವೀರೇಂದ್ರ ಯಾದವ್ ಈ ಕಾರ್ಯಪಡೆಯ ನೇತೃತ್ವವನ್ನು ವಹಿಸಿದ್ದಾರೆ. ಪ್ರತಿ ಮಂಗಳವಾರ ವಿಮರ್ಶೆ ನಡೆಸುವ, ಕ್ಷೇತ್ರ ಭೇಟಿ ನಡೆಸುವ ಜವಾಬ್ದಾರಿಯನ್ನು ಈ ತಂಡಕ್ಕೆ ನೀಡಲಾಗಿದೆ.

ಹರಿಯಾಣದಲ್ಲಿ 2019ರಲ್ಲಿ 1,000 ಗಂಡು ಮಕ್ಕಳಿಗೆ 923 ಹೆಣ್ಣು ಮಕ್ಕಳಿದ್ದರು. ಆದರೆ 2024ರಲ್ಲಿ ಲಿಂಗಾನುಪಾತ 910ಕ್ಕೆ ಇಳಿದಿದೆ. 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣದ ಪಾಣಿಪತ್‌ನಲ್ಲಿ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆ ಆರಂಭಿಸಿದ್ದಾರೆ. ಆದರೆ ಅದು ಹೆಸರು ಮಾತ್ರಕ್ಕೆ ಯೋಜನೆಯಾಗಿ ಉಳಿದಿದೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇನ್ನಷ್ಟುಯ ಕಡಿಮೆಯಾಗಿದೆ.

ಇದನ್ನು ಓದಿದ್ದೀರಾ? ‘ಮುಖ್ಯಮಂತ್ರಿ ಪರಿಹಾರ ನಿಧಿ’ಯಿಂದ ಜನರ ಆರೋಗ್ಯ ಸಮಸ್ಯೆಗೆ 25 ಕೋಟಿ ರೂ. ಬಿಡುಗಡೆ: ಸಿದ್ದರಾಮಯ್ಯ

ಇಂಡಿಯಾ ಟುಡೇ ತಂಡವು ನಡೆಸಿದ ತನಿಖೆಯಲ್ಲಿ ಗಂಡು ಮಗು ಬೇಕು ಎಂಬ ಕಾರಣಕ್ಕೆ ಭ್ರೂಣಹತ್ಯೆ ಮತ್ತು ಶಿಶುಹತ್ಯೆ ಹೆಚ್ಚಾಗುತ್ತಿದೆ ಎಂದು ಕಂಡುಬಂದಿದೆ. ಈ ವರದಿ ಬೆನ್ನಲ್ಲೇ ಸರ್ಕಾರ ಕಾರ್ಯಪಡೆ ರಚಿಸಿದೆ. 23 ಗರ್ಭಪಾತ ಕೇಂದ್ರಗಳಿಗೆ ನೋಟಿಸ್ ನೀಡಲಾಗಿದೆ. ಗರ್ಭಪಾತ ಕಿಟ್‌ಗಳ ಆನ್‌ಲೈನ್ ಮಾರಾಟ ಮಾಡುತ್ತಿದ್ದ 17 ಮಾರಾಟಗಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಲಿಂಗ ಅನುಪಾತದಲ್ಲಿನ ವ್ಯತ್ಯಾಸವನ್ನು ಕಡಿಮೆ ಮಾಡಲು ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕನಿಷ್ಠ ಒಬ್ಬ ಹೆಣ್ಣು ಮಗುವನ್ನು ಹೊಂದಿರುವ ಸುಮಾರು 62,000 ಗರ್ಭಿಣಿಯರಿಗೆ 104 ಸಹಾಯವಾಣಿ ಮೂಲಕ ಸಮಾಲೋಚನೆ ನೀಡಲಾಗುತ್ತಿದೆ. ಅಧಿಕ ಹೆಣ್ಣು ಮಕ್ಕಳನ್ನು ಹೊಂದಿರುವ ಗರ್ಭಿಣಿಯರ ಮೇಲ್ವಿಚಾರಣೆಗಾಗಿ ಆಶಾ ಕಾರ್ಯಕರ್ತರನ್ನು ನಿಯೋಜಿಸಲಾಗುತ್ತಿದೆ. ಹೆಣ್ಣು ಮಗು ಜನಿಸಿದರೆ 1,000 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಈ ಬೆನ್ನಲ್ಲೇ ಮಾರ್ಚ್‌ನಿಂದ ಲಿಂಗ ಅನುಪಾತವು 1,000 ಗಂಡು ಮಕ್ಕಳಿಗೆ 911 ಹೆಣ್ಣುಮಕ್ಕಳಿಗೆ ಸುಧಾರಿಸಿದೆ ಎಂದು ಹರಿಯಾಣ ಸರ್ಕಾರ ಹೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...