ಹರಿಯಾಣ | ಐಪಿಎಸ್ ಅಧಿಕಾರಿ ಸಾವಿನ ಪ್ರಕರಣ: ಡಿಜಿಪಿಯನ್ನು ರಜೆ ಮೇಲೆ ಕಳುಹಿಸಿದ ಸರ್ಕಾರ

Date:

ಹರಿಯಾಣ ಕೇಡರ್‌ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ ರಾಜ್ಯ ಸರಕಾರವು ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅ.17ರ ಸೋನಿಪತ್ ಭೇಟಿಯನ್ನು ರದ್ದುಗೊಳಿಸಲಾಗಿದೆ.

- Advertisement -

ರಾಜ್ಯ ಸರ್ಕಾರವು ಹರಿಯಾಣ ಪೋಲಿಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹರಿಯಾಣ ರಾಜ್ಯ ಮಾದಕದ್ರವ್ಯ ನಿಯಂತ್ರಣ ಬ್ಯೂರೋದ ಮಹಾ ನಿರ್ದೇಶಕರಾಗಿರುವ ಓಂ ಪ್ರಕಾಶ ಸಿಂಗ್ ಅವರಿಗೆ ಡಿಜಿಪಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿದೆ. ರೋಹ್ಟಕ್‌ನ ಆಗಿನ ಎಸ್‌ಪಿ ನರೇಂದ್ರ ಬಿಜರ್ನಿಯಾರನ್ನು ಇತ್ತೀಚಿಗೆ ಎತ್ತಂಗಡಿ ಮಾಡಲಾಗಿದ್ದು,ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮೃತ ಕುಮಾರ್ ಅವರು ಬರೆದಿಟ್ಟಿದ್ದ 9 ಪುಟಗಳ ಅಂತಿಮ ಟಿಪ್ಪಣಿಯಲ್ಲಿನ ಆರೋಪಗಳ ಬಳಿಕ ಹೆಚ್ಚುತ್ತಿರುವ ಒತ್ತಡಗಳ ನಡುವೆಯೇ ಬಿಜೆಪಿ ಸರಕಾರವು ಸೋಮವಾರ ತಡರಾತ್ರಿ ಡಿಜಿಪಿ ಅಮಾನತಿನ ನಿರ್ಧಾರವನ್ನು ಕೈಗೊಂಡಿದೆ. ಇದನ್ನು ಎಸ್‌ಸಿ ಸಮುದಾಯಕ್ಕೆ ಬಲವಾದ ಸಂದೇಶವನ್ನು ರವಾನಿಸಲು ಸರಕಾರದ ಪ್ರಯತ್ನ ಎಂದೂ ನೋಡಲಾಗಿದೆ.

ಕುಮಾರ್ ತನ್ನ ಟಿಪ್ಪಣಿಯಲ್ಲಿ ಕಪೂರ್ ಮತ್ತು ಬಿಜರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಜಾತಿಯಾಧಾರಿತ ತಾರತಮ್ಯ,ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ಅಧಿಕಾರ ದುರುಪಯೋಗದ ಆರೋಪಗಳನ್ನು ಹೊರಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಕುಮಾರ್ ಪತ್ನಿ,ಹಿರಿಯ ಐಎಎಸ್ ಅಧಿಕಾರಿ ಅಮ್ನೀತ್ ಪಿ.ಕುಮಾರ್ ಅವರು ತನ್ನ ಪತಿಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಕಪೂರ್ ಮತ್ತು ಬಿಜರ್ನಿಯಾ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸುವಂತೆ ಆಗ್ರಹಿಸಿದ್ದಾರೆ. ಸರ್ಕಾರವು ಕ್ರಮ ಕೈಗೊಳ್ಳುವವರೆಗೆ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಸಂಸ್ಕಾರಕ್ಕೆ ಒಪ್ಪಿಗೆ ನೀಡಲು ಕುಟುಂಬವು ನಿರಾಕರಿಸಿದೆ.

ಪ್ರಧಾನಿ ಭೇಟಿ ರದ್ದು

ಈ ನಡುವೆ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರ ಅ.17ರ ಸೋನಿಪತ್ ಭೇಟಿಯನ್ನು ರದ್ದುಗೊಳಿಸಲಾಗಿದೆ.

ಮೋದಿಯವರು ಸೋನಿಪತ್‌ನಲ್ಲಿ ‘ಜನ ವಿಶ್ವಾಸ-ಜನ ವಿಕಾಸ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದರು ಮತ್ತು ಹಲವಾರು ಹೊಸ ಉಪಕ್ರಮಗಳಿಗೆ ಚಾಲನೆ ನೀಡಲಿದ್ದರು. ಅವರ ಭೇಟಿ ರದ್ದತಿಗೆ ಅಧಿಕೃತ ಕಾರಣವನ್ನು ನೀಡಲಾಗಿಲ್ಲವಾದರೂ ಐಪಿಎಸ್ ಅಧಿಕಾರಿಯ ಆತ್ಮಹತ್ಯೆ ಬಳಿಕ ಪರಿಸ್ಥಿತಿ ಪ್ರಧಾನಿ ಭೇಟಿಗೆ ಪೂರಕವಾಗಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...