ಕಾಂಗ್ರೆಸ್ ಕಾರ್ಯಕರ್ತೆ ಕೊಲೆ ಪ್ರಕರಣ: ಓರ್ವ ಆರೋಪಿಯ ಬಂಧನ

Date:

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಕೊಲೆಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿರುವುದಾಗಿ ಸೋಮವಾರ ತಿಳಿಸಿದ್ದಾರೆ.

- Advertisement -

ಶನಿವಾರ ನರ್ವಾಲ್ ಅವರ ಮೃತದೇಹವು ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಮೃತ ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ. ಆದರೆ ಕಾಂಗ್ರೆಸ್ ನಾಯಕರುಗಳು ಮಹಿಳೆಯು ಕಾಂಗ್ರೆಸ್ ಕಾರ್ಯಕರ್ತೆ ಎಂದು ತಿಳಿಸಿದ್ದರು. ಅದಾದ ಬಳಿಕ ಪೊಲೀಸರು ಗುರುತು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಹರಿಯಾಣ ಪೊಲೀಸ್ ಅಧಿಕಾರಿಯೋರ್ವರು, “ಸದ್ಯ ನಾವು ಓರ್ವ ಆರೋಪಿಯನ್ನು ಬಂಧಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನು ನರ್ವಾಲ್ ಅವರ ಕುಟುಂಬಸ್ಥರು ಆರೋಪಿಗಳ ಬಂಧನವಾಗುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಎಂದು ವರದಿಯಾಗಿದೆ. ನರ್ವಾಲ್ ರೋಹ್ಟಕ್‌ನ ವಿಜಯ ನಗರದ ನಿವಾಸಿಯಾಗಿದ್ದರು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಹರಿಯಾಣ, ಮಹಾರಾಷ್ಟ್ರ ಮತದಾರರ ಪಟ್ಟಿ ಬಿಡುಗಡೆ ಕೋರಿ ಕಾಂಗ್ರೆಸ್ ಅರ್ಜಿ: 3 ತಿಂಗಳಲ್ಲಿ ಇತ್ಯರ್ಥವೆಂದ ಇಸಿಐ

ನರ್ವಾಲ್ ಬಗ್ಗೆ ಮಾಹಿತಿ ನೀಡಿರುವ ಹರಿಯಾಣ ಕಾಂಗ್ರೆಸ್ ನಾಯಕರು, “ನರ್ವಾಲ್ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿಯೂ ಭಾಗಿಯಾಗಿದ್ದರು. ಕಾನೂನು ಪದವಿ ಪಡೆಯುತ್ತಿದ್ದರು” ಎಂದು ತಿಳಿಸಿದ್ದಾರೆ.

ಈ ನಡುವೆ ನರ್ವಾಲ್ ರಾಜಕೀಯ ಪ್ರಗತಿಯನ್ನು ನೋಡಿ ಕಾಂಗ್ರೆಸ್‌ನ ಕೆಲವು ನಾಯಕರಿಗೆ ಇರಿಸುಮುರಿಸು ಇತ್ತು ಎಂದು ತಾಯಿ ಸವಿತಾ ಆರೋಪಿಸಿದ್ದಾರೆ. “ನನ್ನ ಮಗಳು ಶೀಘ್ರವಾಗಿ ರಾಜಕೀಯ ಪ್ರಗತಿ ಕಾಣುತ್ತಿರುವುದನ್ನು ನೋಡಿ ಅಸೂಯೆ ಪಡುತ್ತಿದ್ದ ಪಕ್ಷದೊಳಗಿನ ಯಾವುದೇ ನಾಯಕರು ಈ ಕೃತ್ಯ ಎಸಗಿರಬಹುದು. ನಮಗೆ ನ್ಯಾಯ ಸಿಗುವವರೆಗೂ ನಾವು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...