ನುಹ್‌: ಕೋಮು ಘರ್ಷಣೆಗೆ ಪ್ರಚೋದನೆ ಸ್ಥಳೀಯ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಬಂಧನ

Date:

ಜುಲೈ 31 ರಂದು ಹರ್ಯಾಣದ ನುಹ್‌ ಜಿಲ್ಲೆಯ ಬ್ರಜಮಂಡಲ್ ಯಾತ್ರೆಯಲ್ಲಿ ಉಂಟಾದ ಹಿಂಸಾಚಾರದ ಸಂದರ್ಭದಲ್ಲಿ ನಿರ್ದಿಷ್ಟ ಸಮುದಾಯದ ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ಫಿರೋಜ್‌ಪುರ ಜಿರ್ಕಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಹರಿಯಾಣ ಪೊಲೀಸರ ವಿಶೇಷ ತಂಡ ಬಂಧಿಸಿದೆ.

ಪೊಲೀಸರು ಶಾಸಕರನ್ನು ಬಂಧಿಸಿ ನುಹ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನುಹ್ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಹಿಂಸಾಚಾರಕ್ಕೆ ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ನುಹ್ ಜಿಲ್ಲೆಯ ಫಿರೋಜ್‌ಪುರ ಜಿರ್ಕಾ ವಿಧಾನಸಭಾ ಕ್ಷೇತ್ರದ ಶಾಸಕ ಮಮ್ಮನ್‌ ಖಾನ್‌ ಅವರಿಗೆ ಆಗಸ್ಟ್ 25 ರಂದು ನೋಟಿಸ್ ನೀಡಿ, ಆಗಸ್ಟ್‌ 31 ರಂದು ತನಿಖೆಗೆ ಹಾಜರಾಗುವಂತೆ ಸೂಚಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೋಟಿಸ್‌ಗೆ ಪ್ರತಿಕ್ರಿಯಿಸಿದ ಶಾಸಕರು ಅನಾರೋಗ್ಯದ ಕಾರಣ ನೀಡಿದ್ದರು. ಆ ಬಳಿಕ ಸೆ.5ರಂದು ಪೊಲೀಸರು ಎರಡನೇ ಬಾರಿಗೆ ಹಾಗೂ ಸೆ.10ರಂದು ಮತ್ತೊಮ್ಮೆ ನೋಟಿಸ್ ನೀಡಿದ್ದರೂ ಹಾಜರಾಗಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಶೇ. 40 ಹಾಲಿ ಸಂಸದರಿಗೆ ಕ್ರಿಮಿನಲ್ ಆರೋಪ, ಶೇ. 7 ಮಂದಿ ಶತ ಕೋಟ್ಯಾಧೀಶರು: ಎಡಿಆರ್ ವರದಿ

ಮಮ್ಮನ್ ಅವರು ಪೋಲಿಸರು ತಮ್ಮನ್ನು ಬಂಧಿಸದಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ಉನ್ನತ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಸಬೇಕು ಎಂದು ವಾದಿಸಿದ್ದರು.

ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೆಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಮಮ್ಮನ್ ಅವರಿಗೆ ಸೂಚಿಸಿ ಮುಂದಿನ ದಿನಾಂಕವನ್ನು ಅಕ್ಟೋಬರ್ 19ಕ್ಕೆ ನಿಗದಿಪಡಿಸಿದ್ದಾರೆ.

ಜುಲೈ 31 ರಂದು, ನುಹ್‌ ಜಿಲ್ಲೆಯಲ್ಲಿ ಬ್ರಿಜ್ಮಂಡಲ್ ಯಾತ್ರೆಯ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿತ್ತು. ಇದರ ನಂತರ ಗುರುಗ್ರಾಮ್, ಪಲ್ವಾಲ್, ರೇವಾರಿ, ಸೋನಿಪತ್ ಮತ್ತು ಫರಿದಾಬಾದ್‌ನ ಇತರ ಪ್ರದೇಶಗಳಿಗೆ ಹರಡಿತು. ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷ ಮತ್ತು ಓರ್ವ ಧರ್ಮಗುರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇದಲ್ಲದೇ 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ...

ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ....