ಅನಾರೋಗ್ಯಕ್ಕೆ ತುತ್ತಾಗಿ, ಆಸ್ಪತ್ರೆಯ ICUನಲ್ಲಿ ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿರುವ ಪೈಶಾಚಿಕ ಘಟನೆ ಹರಿಯಾಣದಲ್ಲಿ ನಡೆದಿದೆ.
ಹರಿಯಾಣದ ಗುರುಗ್ರಾಮ್‌ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಕಾಮುಕ ಆರೋಪಿಯನ್ನು ಪತ್ತೆ ಮಾಡಲು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 5ರಂದು, 46 ವರ್ಷದ ಗಗನಸಖಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುತ್ತಿದ್ದಾಗ ಅಸ್ಥಸ್ಥಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಿದ್ದರು.
ಆಸ್ಪತ್ರೆಯಿಂದ ಮನೆಗೆ ತೆರಳಿದ ಬಳಿಕ ಆಸ್ಪತ್ರೆಯಲ್ಲಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ತನ್ನ ಪತಿಯ ಬಳಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ.
ಏಪ್ರಿಲ್ 6ರಂದು ಆಸ್ಪತ್ರೆಯ ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನಯ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿತ್ತು.ಆರೋಪಿಯ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದಾಗ್ಯೂ, ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ. ಸಾರ್ವಜನಿಕ ಆಕ್ರೋಶವನ್ನು ತಣಿಸಲು ಆರೋಪಿಯನ್ನು ಕೊಲ್ಲಕಾಗಿದೆ ಎಂಬ ಆರೋಪ-ಅಭಿಪ್ರಾಯಗಳು ಕೇಳಿ ಬಂದಿವೆ. ಸದ್ಯ, ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ. ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿದೆ.
ಬೇಟಿ ಬಚಾವೋ ಬೇಟಿ ಪಢಾವೋ ನಾರಿ ಸಮ್ಮಾನ ಗಂಟೆ ಬಾರಿಸಿಕೊಂಡು ದೇಶವೆಲ್ಲಾ ಓಡಾಡುವುದು,,,ಅವರು ಈ ಘೋಷಣೆ ಮಾಡಿದಾಗಲೇ ಅವರ ಭಕ್ತಮಂಡಳಿ ಮಹಿಳೆಯರ ಗತಿ ಅಧೋಗತಿ ಆಗುವುದೆಂದು ತಾವೇ ಮಾತಾಡಿದ್ದರು ಈಗ ಅದೇ ಆಗುತ್ತಿದೆ,,,