ಹರಿಯಾಣ | ಕಳ್ಳತನದ ಶಂಕೆ; ದಲಿತ ಯುವಕನನ್ನು ಬಾವಿಯಲ್ಲಿ ತಲೆಕೆಳಗಾಗಿ ನೇತುಹಾಕಿ ದೌರ್ಜನ್ಯ

Date:

ನೀರೆತ್ತುವ ಮೋಟಾರ್ ಕಳ್ಳತನ ಮಾಡಿದ್ದಾನೆ ಎನ್ನುವ ಶಂಕೆಯ ಮೇಲೆ 32 ವರ್ಷದ ದಲಿತ ಯುವಕನೊಬ್ಬನನ್ನು ಬಾವಿಯೊಳಗೆ ತಲೆಕೆಳಗಾಗಿ ನೇತುಹಾಕಿ, ಗ್ರಾಮಸ್ಥರು ಅಮಾನುಷವಾಗಿ ಥಳಿಸಿರುವ ಆಘಾತಕಾರಿ ಘಟನೆ ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

ಜೂನ್ 1 ರಂದು ಹನ್ಸಿ ಸಮೀಪದ ಸೋರ್ಖಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕನನ್ನು ಹಗ್ಗದಿಂದ ಕಟ್ಟಿ ಬಾವಿಯೊಳಗೆ ತಲೆಕೆಳಗಾಗಿ ನೇತುಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವಕನನ್ನು ಬಾಬು ಎಂದು ಗುರುತಿಸಲಾಗಿದ್ದು, ಆತ ನೀಡಿದ ದೂರಿನ ಮೇರೆಗೆ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಯುವಕನು ನೋವಿನಿಂದ ಮತ್ತು ಭಯದಿಂದ ಕಿರುಚಾಡುತ್ತಿದ್ದರೂ ಗ್ರಾಮಸ್ಥರು ಆತನನ್ನು ವಿಚಾರಣೆಗೆ ಒಳಪಡಿಸುತ್ತಿರುವುದು ಕಂಡುಬಂದಿದೆ.

ಸಂತ್ರಸ್ತ ಬಾಬು, “ನನಗೆ ಡಯೇರಿಯಾ ಇತ್ತು, ಹಾಗಾಗಿ ಮಲವಿಸರ್ಜನೆಗಾಗಿ ಹೊರಗೆ ಹೋಗಿದ್ದೆ. ಈ ವೇಳೆ ಗ್ರಾಮಸ್ಥನೊಬ್ಬ ಕಳ್ಳ ಎಂದು ಕೂಗಿಕೊಂಡ. ನಾನು ಓಡಿಹೋಗುತ್ತಿಲ್ಲ, ನನ್ನನ್ನು ಹಿಡಿಯುವ ಅಗತ್ಯವಿಲ್ಲ ಎಂದು ಹೇಳಿದೆ. ಆದರೆ ಅಷ್ಟರಲ್ಲೇ ಇನ್ನುಳಿದ ಗ್ರಾಮಸ್ಥರು ಅಲ್ಲಿಗೆ ಧಾವಿಸಿ, ನೀರೆತ್ತುವ ಮೋಟಾರ್ ಕಳ್ಳತನ ಮಾಡಿದ್ದೀಯಾ ಎಂದು ಆರೋಪಿಸಿ ನನಗೆ ಮನಬಂದಂತೆ ಥಳಿಸಲು ಆರಂಭಿಸಿದರು” ಎಂದು ನೋವು ತೋಡಿಕೊಂಡಿದ್ದಾರೆ.

ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಬಾಬು ಪದೇ ಪದೇ ಹೇಳಿಕೊಂಡರೂ ಗ್ರಾಮಸ್ಥರು ಕೇಳಲಿಲ್ಲ. “ನಿಮಗೆ ಅನುಮಾನವಿದ್ದರೆ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ಯಿರಿ ಎಂದು ಬೇಡಿಕೊಂಡೆ. ಆದರೆ, ಪೊಲೀಸರ ಬಳಿ ಕರೆದೊಯ್ದರೆ ತಕ್ಷಣವೇ ಜಾಮೀನಿನ ಮೇಲೆ ಹೊರಗೆ ಬಂದುಬಿಡುತ್ತಾನೆ, ಇವನಿಗೆ ಇಲ್ಲೇ ಶಿಕ್ಷೆ ನೀಡಬೇಕು ಎಂದು ಗ್ರಾಮಸ್ಥರು ಮಾತನಾಡಿಕೊಂಡರು. ನಂತರ ನನ್ನ ಕಾಲುಗಳನ್ನು ಹಗ್ಗದಿಂದ ಕಟ್ಟಿ ಬಾವಿಯೊಳಗೆ ತಲೆಕೆಳಗಾಗಿ ನೇತುಹಾಕಿದರು. ಅಸಹನೀಯ ನೋವು ಮತ್ತು ಜೀವಭಯದಿಂದಾಗಿ ಅವರು ಹೇಳಿದ ಕಳ್ಳತನದ ಆರೋಪವನ್ನು ನಾನು ಒಪ್ಪಿಕೊಳ್ಳಬೇಕಾಯಿತು” ಎಂದು ಹೇಳಿಕೊಂಡಿದ್ದಾರೆ/

ಮತ್ತೊಂದೆಡೆ ಗ್ರಾಮಸ್ಥರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ್ದು, ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದ ರೈತರ ತೋಟಗಳಿಂದ ಸರಣಿ ಮೋಟಾರ್‌ಗಳು ಕಳ್ಳತನವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಶಂಕೆಯ ಮೇರೆಗೆ ಬಾಬು ಎಂಬಾತನನ್ನು ಹಿಡಿದಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಾರ್ವೆ ಚೆಸ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ, ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ!

ಸೋರ್ಖಿ ಪೊಲೀಸ್ ಚೌಕಿಯ ಪ್ರಭಾರಿ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ ಅವರು ಮಾಹಿತಿ ನೀಡಿ, ತೀವ್ರವಾಗಿ ಗಾಯಗೊಂಡಿದ್ದ ಬಾಬು ಅವರನ್ನು ಜೂನ್ 4 ರ ಸಂಜೆ ಹನ್ಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಈ ಪ್ರಕರಣವನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ರವೀಂದರ್ ಸಾಂಗ್ವಾನ್ ಅವರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 109(1) (ಕೊಲೆ ಯತ್ನ), 126(2) (ಅಕ್ರಮ ತಡೆಹಿಡಿಯುವಿಕೆ), 351(3) (ಅಪರಾಧ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ಕಠಿಣ ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ತನಿಖೆ ಮುಂದುವರಿದಿದ್ದು, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...