ಗುರುಗ್ರಾಮ: ಮಸೀದಿ, ತೆರೆದ ಸ್ಥಳಗಳಲ್ಲಿ ಶುಕ್ರವಾರದ ನಮಾಜ್ ಸಲ್ಲಿಸದಂತೆ ಮುಸ್ಲಿಂ ಕೌನ್ಸಿಲ್‌ ಮನವಿ

Date:

ಶುಕ್ರವಾರದ ನಮಾಜ್‌ (ಜುಮಾ) ಅನ್ನು ಮಸೀದಿಗಳು ಅಥವಾ ತೆರೆದ ಸ್ಥಳಗಳಲ್ಲಿ ಸಲ್ಲಿಸದಂತೆ ಗುರುಗ್ರಾಮದ ಮುಸ್ಲಿಂ ಕೌನ್ಸಿಲ್‌ ತನ್ನ ಸಮುದಾಯದ ಸದಸ್ಯರಿಗೆ ವಿನಂತಿಸಿದೆ.

ನೂಹ್‌ ಹಿಂಸಾಚಾರ ಹಿನ್ನೆಲೆಯಲ್ಲಿ ಮತ್ತೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಇರಲು ಈ ವಿನಂತಿ ಮಾಡಲಾಗಿದೆ. ಆದರೆ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಗುರುಗ್ರಾಮದಾದ್ಯಂತ ಇರುವ ಎಲ್ಲ ಮಸೀದಿಗಳಲ್ಲಿ ಭದ್ರತೆಗೆ ಏರ್ಪಾಟು ಮಾಡಿದೆ.

ಗುರುಗ್ರಾಮದಲ್ಲಿ ಹಿಂದೆಯೂ ತೆರೆದ ಸ್ಥಳದಲ್ಲಿ ನಮಾಜ್‌ ಸಲ್ಲಿಕೆಗೆ ವಿರೋಧವಿತ್ತು. ಈಗ ನೂಹ್‌ ಹಿಂಸಾಚಾರ ಹಿನ್ನೆಲೆಯಲ್ಲಿ ಇಂದು ಯಾರೂ ತೆರೆದ ಸ್ಥಳಗಳಲ್ಲಿ ನಮಾಝ್ ಸಲ್ಲಿಸದಂತೆ ಕೋರಲಾಗಿದೆ ಎಂದು ಮುಸ್ಲಿಂ ಏಕ್ತಾ ಮಂಚ್‌ ಅಧ್ಯಕ್ಷ ಹಾಜಿ ಸಜ್ಜದ್‌ ಖಾನ್‌ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ‘I.N.D.I.A’ ಹೆಸರು ಬಳಕೆ: ಕೇಂದ್ರ, ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನೋಟಿಸ್

ಗುರುವಾರ ನಗರದ ಮುಸ್ಲಿಂ ಸಮುದಾಯ ಜಿಲ್ಲಾಧಿಕಾರಿ ನಿಶಾಂತ್‌ ಕುಮಾರ್‌ ಯಾದವ್ ಅವರನ್ನು ಭೇಟಿಯಾಗಿ ಮತ್ತೆ ಹಿಂಸಾಚಾರ ನಡೆಯದಂತೆ ಕ್ರಮಕೈಗೊಳ್ಳುವಂತೆ ವಿನಂತಿಸಿದೆ.‌

ಎಲ್ಲ ಮಸೀದಿಗಳಿಗೆ ರಕ್ಷಣೆ ಒದಗಿಸಲಾಗಿದೆ, ಜನರು ಮಸೀದಿಯಲ್ಲಿ ನಮಾಜ್‌ ಸಲ್ಲಿಸಲು ಬಯಸಿದರೂ ಯಾವುದೇ ಸಮಸ್ಯೆಯಾಗದಂತೆ ನಮಾಜ್‌ ಸಲ್ಲಿಸಲು ಏರ್ಪಾಟು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಹಿಂದೂಯೇತರರು, ರೋಹಿಂಗ್ಯಾ ಮುಸ್ಲಿಮರಿಗೆ ಪ್ರವೇಶ ನಿಷೇಧ; ಗ್ರಾಮಗಳಲ್ಲಿ ಫಲಕ ಅಳವಡಿಕೆ!

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಹಲವಾರು ಗ್ರಾಮಗಳ ಹೊರಭಾಗದಲ್ಲಿ ಹಿಂದೂಯೇತರರಿಗೆ, ರೋಹಿಂಗ್ಯಾ ಮುಸ್ಲಿಮರಿಗೆ...

ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ...

ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು

ನಕಲಿ ವೈದ್ಯನೊಬ್ಬ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...