ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

Date:

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ವಿಸ್ತರಣೆಯಾಗಿದೆ. 2027ರ ಜನವರಿ 29ರವರೆಗೆ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಅಥವಾ ಬಂಧನ ಪ್ರಕ್ರಿಯೆ ಕೈಗೊಳ್ಳುವಂತಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್‌ ಆದೇಶಿಸಿದೆ. ಅಂತೆಯೇ, ಮತ್ತೊಂದು ಪ್ರಕರಣದಲ್ಲಿ, ಅವರು ತಾವು ಪ್ರತಿನಿಧಿಸುವ ಕೃಷ್ಣನಗರ ಲೋಕಸಭಾ ಕ್ಷೇತ್ರದ ಭೇಟಿ ವೇಳೆ ಅವರಿಗೆ ಭದ್ರತೆ ನೀಡಬೇಕು ಎಂದೂ ಸರ್ಕಾರ/ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದೆ.

- Advertisement -

ದ್ವೇಷಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಿಂದ ರಕ್ಷಣೆಯನ್ನು ವಿಸ್ತರಿಸುವಂತೆ ಕೋರಿ ಮೊಯಿತ್ರಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. “ಪ್ರಕರಣದ ತನಿಖೆ ನಡೆಯುತ್ತಿದ್ದು, ನ್ಯಾಯಾಲಯದ ಸೂಚನೆಯಂತೆ ಸಂಸದೆ ಮಹುವಾ ಮೊಯಿತ್ರಾ ಅವರು ತನಿಖೆಗೆ ಸಹರಿಸುತ್ತಿದ್ದಾರೆ. ಆಗಸ್ಟ್ 14ರಂದು ಹೊಗಲ್‌ಬೇರಿಯಾ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮೊಯಿತ್ರಾ ಅವರ ಮನವಿಯನ್ನು ನ್ಯಾಯಾಲಯ ಪುರಷ್ಕರಿಸಿದ್ದು, ಬಂಧನದಿಂದ ನೀಡಲಾಗಿರುವ ಮಧ್ಯಂತರ ರಕ್ಷಣೆಯನ್ನು 2027ರ ಜನವರಿ 29ರವರೆಗೆ ವಿಸ್ತರಿಸಿದೆ. ಪ್ರಕರಣದ ವಿಚಾರಣೆಯನ್ನು ಅದೇ ತಿಂಗಳ 13ಕ್ಕೆ ನಿಗದಿಪಡಿಸಿದೆ.

ಈ ಲೇಖನ ಓದಿದ್ದೀರಾ?: ‘ರಾಜಕೀಯದಲ್ಲಿ ಇದ್ದೀರಿ, ಮೊಟ್ಟೆಗೆ ಹೆದರುವಿರೇ’; ಮಹುವಾ ಮೊಯಿತ್ರಾ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಇನ್ನು, ಆಗಸ್ಟ್ 14ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾದ ಸಂದರ್ಭದಲ್ಲಿ ಮಹುವಾ ಅವರ ಮೇಲೆ ಮೊಟ್ಟೆ ಎಸೆದು ದಾಳಿಗಳು ನಡೆದಿದ್ದವು. ಆದ್ದರಿಂದ, ತಮ್ಮ ಕ್ಷೇತ್ರ ಭೇಟಿ ವೇಳೆ ತಮ್ಮ ಮೇಲೆ ನಿರಂತರ ಹಲ್ಲೆ, ಬೆದರಿಕೆ ಹಾಗೂ ಮೊಟ್ಟೆ ಎಸೆಯುವಿಕೆಯಂತಹ ಅಹಿತಕರ ಕೃತ್ಯಗಳಿಂದ ರಕ್ಷಣೆಗಾಗಿ ಸೂಕ್ತ ಭದ್ರತೆ ಕೋರಿ ಅವರು ಮತ್ತೊಂದು ಅರ್ಜಿ ಸಲ್ಲಿಸಿದ್ದರು.

ಅವರ ಅರ್ಜಿಯನ್ನೂ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರೇ ವಿಚಾರಣೆ ನಡೆಸಿದ್ದು, ಮಹುವಾ ಮೊಯಿತ್ರಾ ಅವರ ಸುರಕ್ಷತೆಗಾಗಿ ಇಬ್ಬರು ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಆದೇಶವನ್ನು ನವೆಂಬರ್ 30ರವರೆಗೆ ವಿಸ್ತರಿಸಿದ್ದಾರೆ.

“ಸಂಸದೆ ಮಹುವಾ ಅವರು ಕ್ಷೇತ್ರಕ್ಕೆ ಆಗಮಿಸುವ ಸಂದರ್ಭಗಳಲ್ಲಿ ಯಾವುದೇ ರೀತಿಯ ಭದ್ರತಾ ಲೋಪ ಅಥವಾ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಕೃಷ್ಣನಗರ ಪೊಲೀಸ್ ಸೂಪರಿಂಟೆಂಡೆಂಟ್ (SP) ಎಚ್ಚರಿಕೆ ವಹಿಸಬೇಕು” ಎಂದು ಹೈಕೋರ್ಟ್‌ ಸೂಚಿಸಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

SIR ಮುಕ್ತಾಯದ ಬೆನ್ನಲ್ಲೇ ಒಡಿಶಾ ಸಿಇಒ ಸ್ವಯಂ ನಿವೃತ್ತಿಗೆ ಅರ್ಜಿ

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಹಾಗೂ ಹಿರಿಯ ಐಎಎಸ್ ಅಧಿಕಾರಿ ಆರ್.ಎಸ್....

ರಾಜ್ಯದ ಕ್ಷೀರ ವಲಯ: 11 ಹಾಲು ಒಕ್ಕೂಟಗಳಿಗೆ ಲಾಭದ ಸಿಹಿ, ಐದಕ್ಕೆ ನಷ್ಟದ ಕಹಿ

ರಾಜ್ಯದ ಪ್ರಮುಖ ಡೈರಿ ಉತ್ಪನ್ನ ಸಂಸ್ಥೆಯಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ...

ಕಾರ್ಮಿಕರ ಉಳಿತಾಯಕ್ಕೆ ಕನ್ನ ಹಾಕಿದ ಕೇಂದ್ರದ ಹೊಸ ಪಿಎಫ್ ನೀತಿ: ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಭವಿಷ್ಯ ನಿಧಿ (ಪಿಎಫ್) ಹಿಂಪಡೆಯುವಿಕೆಯ...