ಹಾಥರಸ್ ಕಾಲ್ತುಳಿತ ದುರಂತ: 6 ಮಂದಿ ಬಂಧನ, ಮುಖ್ಯ ಆರೋಪಿ ಸುಳಿವಿಗೆ 1 ಲಕ್ಷ ರೂ. ಬಹುಮಾನ

Date:

ಹಾಥರಸ್ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

- Advertisement -

ನಾರಾಯಣ್‌ ಸಾಕಾರ್‌ ಹರಿ ಎಂಬಾತ ಹಮ್ಮಿಕೊಂಡಿದ್ದ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಬಹುತೇಕ ಮಹಿಳೆಯರನ್ನು ಒಳಗೊಂಡು ಒಟ್ಟು 121 ಮಂದಿ ಮೃತಪಟ್ಟು, 31 ಮಂದಿ ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಲಿಘಢ ಐಜಿ ಶಲಭ್‌ ಮಾತೂರ್‌ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಒಳಗೊಂಡು 6 ಮಂದಿಯನ್ನು ಬಂಧಿಸಲಾಗಿದೆ. ಎಲ್ಲ ಸದಸ್ಯರು ಸಂಘಟನಾ ಸಮಿತಿ ಹಾಗೂ ಸೇವಾದಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಗುಂಪಿನ ನಿರ್ವಹಣೆಯ ಸ್ವಯಂಸೇವಾ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು. ಅವರೆಲ್ಲರೂ ಸ್ವತಂತ್ರವಾಗಿ ಗುಂಪು ನಿಯಂತ್ರವನ್ನು ನಿಭಾಯಿಸುತ್ತಿದ್ದರು ಹಾಗೂ ಈ ಕಾರ್ಯ ನಿರ್ವಹಿಸಲು ಸರ್ಕಾರಿ ಅಧಿಕಾರಿಗಳಿಗೆ ಅನುಮತಿಸಿರಲಿಲ್ಲ ಎಂದು ಶಲಭ್‌ ಮಾತೂರ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

ಈ ನಡುವೆ ಮುಖ್ಯ ಸೇವದಾರನಾದ ದೇವ್‌ ಪ್ರಕಾಶ್‌ ಮಧುಕರ್‌ ಎಂಬಾತನನ್ನು ಮುಖ್ಯ ಆರೋಪಿ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಲಾಗಿದ್ದು, ಮಧುಕರ್‌ ಬಗ್ಗೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಮಾತೂರ್‌ ತಿಳಿಸಿದ್ದಾರೆ.

ಅಗತ್ಯ ಬಿದ್ದರೆ ‘ಬೋಲೆ ಬಾಬಾ ನಾರಾಯಣ್‌ ಸಾಕಾರ್‌’ ನನ್ನು ಕೂಡ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ. ಆತನ ಹೆಸರು ಎಫ್‌ಐಆರ್‌ನಲ್ಲಿ ಇಲ್ಲದಿದ್ದರೂ ತನಿಖೆ ತಡೆಯುತ್ತಿದೆ. ಪೊಲೀಸರು ಬೋಲೆ ಬಾಬಾನ ಹಿನ್ನೆಲೆಯ ಬಗ್ಗೆ ಹೆಚ್ಚಿನ ವಿವರಗಳು ಹಾಗೂ ಅಪರಾಧ ಹಿನ್ನೆಲೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಸತ್ಸಂಗದಲ್ಲಿ 2.50 ಲಕ್ಷ ಮಂದಿ ಭಾಗಿಯಾಗಿದ್ದು, ಜಿಲ್ಲಾಡಳಿತ 80 ಸಾವಿರ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...