ಹಾಥರಸ್ ಕಾಲ್ತುಳಿತ ದುರಂತ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ

Date:

ಉತ್ತರ ಪ್ರದೇಶದ ಹಾಥರಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ.

- Advertisement -

ದುರಂತದಲ್ಲಿ ಯಾವುದೇ ಪಿತೂರಿಯ ಬಗ್ಗೆ ಉಲ್ಲೇಖಿಸದ ಎಸ್‌ಐಟಿ ಘಟನೆಗೆ ಆಯೋಜಕರನ್ನು ಪ್ರಮುಖ ಹೊಣೆಗಾರರನ್ನಾಗಿ ಮಾಡಿದೆ. ಸರ್ಕಾರಕ್ಕೆ ಎಸ್‌ಐಟಿ ಸಲ್ಲಿಸಿರುವ ವರದಿಯಲ್ಲಿ ಭೋಲೆ ಬಾಬಾನ ಯಾವುದೇ ಪಾತ್ರವಿಲ್ಲ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಸತ್ಸಂಗ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಬೋಧನೆ ನೀಡುತ್ತಿದ್ದ ಭೋಲೆ ಬಾಬಾ ತನ್ನ ಪ್ರವಚನವನ್ನು ಮುಗಿಸಿದ ನಂತರ ತೆರಳಲು ಸಿದ್ದವಾಗಿದ್ದ. ಈ ಸಂದರ್ಭದಲ್ಲಿ ಬಾಬಾನ ಪಾದ ಸ್ಪರ್ಶಿಸಲು ಉಂಟಾದ ನೂಕುನುಗ್ಗಲಿನ ಕಾಲ್ತುಳಿತದಲ್ಲಿ ದುರಂತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸತ್ಸಂಗ ನಡೆಯುವ ಕಾರ್ಯಕ್ರಮದಲ್ಲಿ ಎಷ್ಟು ಮಂದಿ ಭಕ್ತರು ಪಾಲ್ಗೊಳ್ಳುತ್ತಾರೆ ಎಂಬುದನ್ನು ಆಯೋಜಕರು ತಿಳಿಸಿರಲಿಲ್ಲ ಎಂದು 850 ಪುಟದ ವರದಿಯಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ‘ತನ್ನ ಪಾದದ ಧೂಳು ತೆಗೆದುಕೊಳ್ಳಲು ಭೋಲೆ ಬಾಬಾ ಕರೆ ಕೊಟ್ಟಿದ್ದೇ ಕಾಲ್ತುಳಿತಕ್ಕೆ ಕಾರಣ’

“ಆಯೋಜಕರು ಪಡೆದಿದ್ದ ಅನುಮತಿ ಪತ್ರದಲ್ಲಿ ಷರತ್ತುಗಳನ್ನು ಪಾಲಿಸಿರಲಿಲ್ಲ. ಬೃಹತ್‌ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿರಲಿಲ್ಲ. ಕಾರ್ಯಕ್ರಮ ನಡೆಯುವ ಪ್ರದೇಶದಲ್ಲಿ ವಿಸ್ತಾರವಾದ ಜಾಗ ಅಥವಾ ಬ್ಯಾರಿಕೇಡ್ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಸ್ಥಳೀಯ ಅಧಿಕಾರಿಗಳು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡದೆ ಅನುಮತಿ ನೀಡಿದ್ದರು. ಘಟನೆಯ ಹಿಂದೆ ಯಾವುದೇ ರೀತಿಯ ಪಿತೂರಿ ನಡೆದಿಲ್ಲ ಎಂದು ತನಿಖೆಯಿಂದ ತಿಳಿದು ಬಂದಿದೆ. ಕುತೂಹಲ ಸಂಗತಿ ಎಂದರೆ ವರದಿಯಲ್ಲಿ ಎಲ್ಲಿಯೂ ಭೋಲೆ ಬಾಬಾನನ್ನು ಉಲ್ಲೇಖಿಸಲಾಗಿಲ್ಲ. ಆದರೆ ಆಯೋಜಕರನ್ನು ಮಾತ್ರ ದೋಷಿಸಲಾಗಿದೆ.

ಸತ್ಸಂಗದ ಪ್ರಮುಖ ಪಾತ್ರಧಾರಿ ಹಾಗೂ ಪ್ರವಚನಕಾರನಾದ ಭೋಲೆ ಬಾಬಾ ಕಾಲ್ತುಳಿತ ದುರಂತ ಸಂಭವಿಸಿದ ಕೆಲವು ದಿನಗಳ ನಂತರ ವಿಡಿಯೋವನ್ನು ಬಿಡುಗಡೆ ಮಾಡಿದ್ದ. ಈ ವಿಡಿಯೋದಲ್ಲಿ ಮೃತರಿಗೆ ಸಂತಾಪ ಸೂಚಿಸಿ, ತನ್ನ ಸಂಗಡಿಗರು ಸಂತ್ರಸ್ತ ಕುಟುಂಬದ ಜೊತೆ ನಿಲ್ಲುವುದಾಗಿ ಹೇಳಿದ್ದ.

ಎಸ್‌ಐಟಿ ತನ್ನ ತನಿಖೆಯಲ್ಲಿ 128 ಪ್ರಮುಖ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು. ಮೂಲಗಳ ಪ್ರಕಾರ ಎಸ್‌ಐಟಿ ತನ್ನ ವರದಿಯನ್ನು ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ನ್ಯಾಯಾಂಗ ಆಯೋಗಕ್ಕೆ ನೀಡಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...