ಹಾಥರಸ್ ಕಾಲ್ತುಳಿತ ದುರಂತ : ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ನಿರಾಕರಣೆ

Date:

ಹಾಥರಸ್‌ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧಿಶರ ಮೇಲ್ವಿಚಾರಣೆಯಲ್ಲಿ ಐವರು ಪರಿಣಿತರ ಸಮಿತಿಯನ್ನು ನೇಮಿಸಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

- Advertisement -

ಅರ್ಜಿದಾರರಿಗೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸುವಂತೆ ತಿಳಿಸಿರುವ ಸುಪ್ರೀಂ ಕೋರ್ಟ್, ಈ ಪ್ರಕರಣವನ್ನು ಇಲ್ಲಿ ಪರಿಗಣಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳನ್ನು ಪರಿಹರಿಸಲು ಹೈಕೋರ್ಟ್ ಸಾಕಷ್ಟು ಶಕ್ತವಾಗಿವೆ. ಆದರೂ ಇದೊಂದು ಮನಕಲುಕುವ ಘಟನೆ ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜುಲೈ 2 ರಂದು ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯ ಪುಲಿರೈ ಗ್ರಾಮದಲ್ಲಿ ಸತ್ಸಂಗ ನಡೆಸುತ್ತಿದ್ದ ಭೋಲೆ ಬಾಬಾನ ಕಾರ್ಯಕ್ರಮದಲ್ಲಿ ಕಾಲ್ತುಳಿತವುಂಟಾಗಿ 121 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಸಂಘಟಕರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. 80 ಸಾವಿರ ಮಂದಿ ಪಾಲ್ಗೊಳ್ಳಲು ಅನುಮತಿ ಪಡೆದು 2.5 ಲಕ್ಷ ಜನರನ್ನು ಸೇರಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಹಾಥರಸ್ ಕಾಲ್ತುಳಿತ ದುರಂತ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ

ಪ್ರಕರಣದ ಬಗ್ಗೆ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ.

ದುರಂತದಲ್ಲಿ ಎಸ್‌ಐಟಿ ಘಟನೆಗೆ ಆಯೋಜಕರನ್ನು ಪ್ರಮುಖ ಹೊಣೆಗಾರರನ್ನಾಗಿ ಮಾಡಿದೆ. ಸರ್ಕಾರಕ್ಕೆ ಎಸ್‌ಐಟಿ ಸಲ್ಲಿಸಿರುವ ವರದಿಯಲ್ಲಿ ಭೋಲೆ ಬಾಬಾನ ಯಾವುದೇ ಪಾತ್ರವಿಲ್ಲ ಎಂದು ತಿಳಿಸಲಾಗಿದೆ.

ಸತ್ಸಂಗ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಬೋಧನೆ ನೀಡುತ್ತಿದ್ದ ಭೋಲೆ ಬಾಬಾ ತನ್ನ ಪ್ರವಚನವನ್ನು ಮುಗಿಸಿದ ನಂತರ ತೆರಳಲು ಸಿದ್ದವಾಗಿದ್ದ. ಈ ಸಂದರ್ಭದಲ್ಲಿ ಬಾಬಾನ ಪಾದ ಸ್ಪರ್ಶಿಸಲು ಉಂಟಾದ ನೂಕುನುಗ್ಗಲಿನ ಕಾಲ್ತುಳಿತದಲ್ಲಿ ದುರಂತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸತ್ಸಂಗ ನಡೆಯುವ ಕಾರ್ಯಕ್ರಮದಲ್ಲಿ ಎಷ್ಟು ಮಂದಿ ಭಕ್ತರು ಪಾಲ್ಗೊಳ್ಳುತ್ತಾರೆ ಎಂಬುದನ್ನು ಆಯೋಜಕರು ತಿಳಿಸಿರಲಿಲ್ಲ ಎಂದು 850 ಪುಟದ ವರದಿಯಲ್ಲಿ ಹೇಳಲಾಗಿದೆ.

“ಆಯೋಜಕರು ಪಡೆದಿದ್ದ ಅನುಮತಿ ಪತ್ರದಲ್ಲಿ ಷರತ್ತುಗಳನ್ನು ಪಾಲಿಸಿರಲಿಲ್ಲ. ಬೃಹತ್‌ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿರಲಿಲ್ಲ. ಕಾರ್ಯಕ್ರಮ ನಡೆಯುವ ಪ್ರದೇಶದಲ್ಲಿ ವಿಸ್ತಾರವಾದ ಜಾಗ ಅಥವಾ ಬ್ಯಾರಿಕೇಡ್ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸ್ಥಳೀಯ ಅಧಿಕಾರಿಗಳು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡದೆ ಅನುಮತಿ ನೀಡಿದ್ದರು. ಕುತೂಹಲ ಸಂಗತಿ ಎಂದರೆ ವರದಿಯಲ್ಲಿ ಎಲ್ಲಿಯೂ ಭೋಲೆ ಬಾಬಾನನ್ನು ಉಲ್ಲೇಖಿಸಲಾಗಿಲ್ಲ. ಆದರೆ ಆಯೋಜಕರನ್ನು ಮಾತ್ರ ದೋಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...