ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

Date:

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆಯು ನಿರಂತರವಾಗಿ ಹೆಚ್ಚಾಗುತ್ತಿದೆ. ಈ ನಡುವೆ ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ ವರದಿಯಾಗಿದೆ.

- Advertisement -

ಮಂಗಳವಾರ ನಡೆದ ಈ ಭಾರೀ ಕಾಲ್ತುಳಿತದ ಬಳಿಕ ಇಲ್ಲಿನ ಸರ್ಕಾರಿ ಆಸ್ಪತ್ರೆಯೊಳಗೆ ನೂರಾರು ಶವಗಳಿದೆ. ಸಂತ್ರಸ್ತರ ಸಂಬಂಧಿಕರು ತಮ್ಮ ಪ್ರೀತಿಪಾತ್ರರ ಪಾರ್ಥಿವ ಶರೀರವನ್ನು ಮನೆಗೆ ಕೊಂಡೊಯ್ಯಲು ಆಸ್ಪತ್ರೆ ಆವರಣದಲ್ಲಿ ಕಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೃತರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಧಾರ್ಮಿಕ ಬೋಧಕ ಭೋಲೆ ಬಾಬಾ ಅವರ ಸತ್ಸಂಗ ನಡೆದಿದೆ. ಮಧ್ಯಾಹ್ನ 3.30ರ ಸುಮಾರಿಗೆ ಬಾಬಾ ಸ್ಥಳದಿಂದ ನಿರ್ಗಮಿಸುತ್ತಿದ್ದಂತೆ ಕಾಲ್ತುಳಿತ ಸಂಭವಿಸಿದೆ.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ | ಹತ್ರಾಸ್ ಕಾಲ್ತುಳಿತ ಘಟನೆ: ಈವರೆಗೆ ಮೃತಪಟ್ಟವರ ಸಂಖ್ಯೆ 116

ಕಾಲ್ತುಳಿತ ನಡೆದ ಸ್ಥಳಕ್ಕೆ ಸಮೀಪವಿರುವ ಸಿಕಂದರಾ ರಾವ್ ಸಮುದಾಯ ಆರೋಗ್ಯ ಕೇಂದ್ರದ ಹೊರಗೆ ಅನೇಕರು ತಮ್ಮ ನಾಪತ್ತೆಯಾದ ಕುಟುಂಬ ಸದಸ್ಯರಿಗಾಗಿ ತಡರಾತ್ರಿಯವರೆಗೆ ಹುಡುಕಾಟ ನಡೆಸಿದ್ದಾರೆ.

ಇನ್ನು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜೇಶ್ ಎಂಬವರು, “ನಾನು ಸುದ್ದಿ ವಾಹಿನಿಯಲ್ಲಿ ನನ್ನ ತಾಯಿಯ ಚಿತ್ರವನ್ನು ನೋಡಿ ಅವರನ್ನು ಗುರುತಿಸಿದೆ. ಅವರು ನಮ್ಮ ಹಳ್ಳಿಯ ಇತರ ಎರಡು ಡಜನ್ ಜನರೊಂದಿಗೆ ಇಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದರು” ಎಂದು ಹೇಳಿದ್ದಾರೆ.


ಇನ್ನು ಅಂಶು ಮತ್ತು ಪಬಲ್ ಕುಮಾರ್ ಎಂಬವರು ತಮ್ಮ ಸೋದರಸಂಬಂಧಿಯ ತಂದೆ ಗೋಪಾಲ್ ಸಿಂಗ್ (40) ಅವರ ಹುಡುಕಾಟದಲ್ಲಿದ್ದು, “ಅವರು ಕಾರ್ಯಕ್ರಮಕ್ಕೆ ಹೋಗಿದ್ದರು ಆದರೆ ಇನ್ನೂ ಮನೆಗೆ ಹಿಂದಿರುಗಿಲ್ಲ. ಅವರು ಫೋನ್ ಕೂಡ ತೆಗೆದುಕೊಂಡು ಹೋಗಿಲ್ಲ. ಸಿಂಗ್ ಬಾಬಾ ಅವರ ಅನುಯಾಯಿ ಅಲ್ಲ. ಆದರೆ ಪರಿಚಯಸ್ಥರ ಒತ್ತಾಯದ ಮೇರೆಗೆ ಮೊದಲ ಬಾರಿಗೆ ಕಾರ್ಯಕ್ರಮಕ್ಕೆ ಹೋಗಿದ್ದರು” ಎಂದು ಪಿಟಿಐಗೆ ತಿಳಿಸಿದರು.

ಮಂಗಳವಾರ ತಡರಾತ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ನಾವು ಸತ್ಸಂಗ ನಡೆಸಿದ ಪ್ರದೇಶದಲ್ಲಿ ಹುಡುಕಾಟ ನಡೆಸಿದೆವು. ಬಾಬಾ ಅಲ್ಲಿ ಇಲ್ಲಿ” ಎಂದು ಎಎನ್‌ಐಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...