ಹತ್ರಾಸ್ ಕಾಲ್ತುಳಿತ ದುರಂತ | ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವು!

Date:

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದೆ. ಈ ನಡುವೆ ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.

- Advertisement -

ಇಟಾಹ್ ಜಿಲ್ಲೆಯ ಅವಘರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಕಾನ್‌ಸ್ಟೆಬಲ್ ರವಿ ಹತ್ರಾಸ್ ಸತ್ಸಂಗದಲ್ಲಿ ಕಾಲ್ತುಳಿತದಿಂದ ಸಾವನ್ನಪ್ಪಿದ ಜನರ ಮೃತದೇಹಗಳನ್ನು ನೋಡಿದ ಬಳಿಕ ಹೃದಯಾಘಾತಕ್ಕೆ ಒಳಗಾಗಿದ್ದು ಇಟಾಹ್ ವೈದ್ಯಕೀಯ ಕಾಲೇಜಿನಲ್ಲಿ ನಿಧನರಾದರು ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರವಿ ಒಂದು ತಿಂಗಳಿನಿಂದ ತನ್ನ ಸಹೋದ್ಯೋಗಿ ಶೇಖರ್ ಪ್ರೇಮಿಯೊಂದಿಗೆ ಕ್ಯೂಆರ್‌ಟಿ ಕರ್ತವ್ಯದ ಮೇರೆಗೆ ಇಟಾಹ್ ನಗರದಲ್ಲಿ ನೆಲೆಸಿದ್ದರು. ಹತ್ರಾಸ್ ಘಟನೆಯ ಬಳಿಕ ತ್ವರಿತವಾಗಿ ಇಟಾಹ್ ವೈದ್ಯಕೀಯ ಕಾಲೇಜಿಗೆ ಹೋಗುವಂತೆ ರವಿ ಅವರಿಗೆ ಸೂಚಿಸಲಾಗಿತ್ತು.

ಇದನ್ನು ಓದಿದ್ದೀರಾ?  ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಇಟಾಹ್ ವೈದ್ಯಕೀಯ ಕಾಲೇಜಿಗೆ ಬಂದ ರವಿ ಅವರು ಮೃತ ದೇಹಗಳನ್ನು ನೋಡಿ ತಲೆ ತಿರುಗಿ ಬಿದ್ದಿದ್ದಾರೆ. ಅವರನ್ನು ಬಿಸಿಲಿನ ಧಗೆಗೆ ತಲೆ ತಿರುಗಿರಬಹುದು ಎಂದು ಹವಾನಿಯಂತ್ರಿತ ಕೊಠಡಿಗೆ ಕರೆದೊಯ್ಯುತ್ತಿದ್ದಂತೆ ರವಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮೃತ ಮತ್ತು ಪ್ರಜ್ಞಾಹೀನರಾದ ಸಂತ್ರಸ್ತರನ್ನು ಟ್ರಕ್‌ಗಳು ಮತ್ತು ಟೆಂಪೋಗಳಲ್ಲಿ ಸಿಕಂದರಾವ್ ಟ್ರಾಮಾ ಸೆಂಟರ್‌ಗೆ ಕರೆತರಲಾಗಿತ್ತು. ಆರೋಗ್ಯ ಕೇಂದ್ರದ ಹೊರಗೆ ಜನರು ಜಮಾಯಿಸಿದ್ದ ಕಾರಣ ಮೃತದೇಹಗಳನ್ನು ಎಲ್ಲೆಂದರಲ್ಲಿ ಇರಿಸಲಾಗಿದೆ. ಮಂಜಿನ ಗೆಡ್ಡೆಯ ಮೇಲೆ ಮಲಗಿಸಲಾಗಿದೆ.

ಇನ್ನು ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಈವರೆಗೆ 121ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಅಧಿಕ ಮಂದಿ ಮಹಿಳೆಯರಾಗಿದ್ದು ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ಭೋಲೆ ಬಾಬಾ ಎಂದು ಕರೆಯಲ್ಪಡುವ ಬೋಧಕನ ನೇತೃತ್ವದಲ್ಲಿ ನಡೆಸಿದ ಸತ್ಸಂಗದ ಬಳಿಕ ಈ ಕಾಲ್ತುಳಿತ ಉಂಟಾಗಿದ್ದು ಸದ್ಯ ಬಾಬಾ ನಾಪತ್ತೆಯಾಗಿದ್ದಾರೆ. ಜನರು ಭೋಲೆ ಬಾಬಾ ಪೋಸ್ಟರ್‌ಗಳಿಗೆ ಕಲ್ಲೆಸೆದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...