ಮಲಗುಂಡಿ ಸ್ವಚ್ಛತೆ ವೇಳೆ ಸಂಭವಿಸಿದ ಎಲ್ಲ ಸಾವುಗಳಿಗೂ ತಲಾ 30 ಲಕ್ಷ ರೂ. ಪರಿಹಾರ ಪಾವತಿಸಿ: ದೆಹಲಿ ಸರಕಾರಕ್ಕೆ ಹೈಕೋರ್ಟ್ ಸೂಚನೆ

Date:

ಮಲಗುಂಡಿ ಸ್ವಚ್ಛತೆ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹೆಚ್ಚುವರಿ 20 ಲಕ್ಷ ರೂ. ಪರಿಹಾರವನ್ನು ಪಾವತಿಸುವಂತೆ ದೆಹಲಿ ಉಚ್ಚ ನ್ಯಾಯಾಲಯವು ದೆಹಲಿ ಸರಕಾರಕ್ಕೆ ಸೂಚಿಸಿದೆ.

ಓರ್ವ ವ್ಯಕ್ತಿಯು ನ್ಯಾಯಾಲಯವನ್ನು ಸಂಪರ್ಕಿಸಿ ತನ್ನ ಪರವಾಗಿ ಆದೇಶವನ್ನು ಪಡೆದುಕೊಂಡಿದ್ದಾಗ ಸರಕಾರವು ಅದೇ ಸ್ಥಿತಿಯಲ್ಲಿರುವ ಎಲ್ಲ ವ್ಯಕ್ತಿಗಳಿಗೂ ಅಂತಹುದೇ ಲಾಭವನ್ನು ನೀಡಬೇಕೇ ಹೊರತು ಅವರೂ ನ್ಯಾಯಾಲಯದ ಮೆಟ್ಟಿಲನ್ನೇರುವುದನ್ನು ಅನಿವಾರ್ಯವಾಗಿಸಬಾರದು ಎಂದು ನ್ಯಾ.ಸುಬ್ರಮಣಿಯಂ ಪ್ರಸಾದ್ ಅವರ ಪೀಠವು ಹೇಳಿತು.

ದೈಹಿಕವಾಗಿ ಮಲಗುಂಡಿಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಂಭವಿಸಿದ ಎಲ್ಲ ಸಾವುಗಳಿಗೂ ಸರಕಾರವು ಬಾಕಿ ಉಳಿದಿರುವ 20 ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸಲು ಪ್ರಯತ್ನಿಸುತ್ತದೆ ಎಂದು ನ್ಯಾಯಾಲಯವು ನಿರೀಕ್ಷಿಸುತ್ತದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

ದಿಲ್ಲಿ ಸರಕಾರದಿಂದ ಈವರೆಗೆ ತಮಗೆ ಕೇವಲ 10 ಲಕ್ಷ ರೂ.ಗಳ ಪರಿಹಾರ ಲಭಿಸಿದೆ ಎಂದು ಮೃತವ್ಯಕ್ತಿಗಳ ವಿಧವೆಯರು ತಮ್ಮ ಅರ್ಜಿಗಳಲ್ಲಿ ತಿಳಿಸಿದ್ದರು

ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಈ ಕುಟುಂಬಗಳು ಸರಕಾರದಿಂದ 30 ಲಕ್ಷ ರೂ.ಪರಿಹಾರವನ್ನು ಪಡೆಯಲು ಅರ್ಹವಾಗಿವೆ ಎಂದು ನ್ಯಾ. ಪ್ರಸಾದ್ ಹೇಳಿದರು.

ಕಳೆದ ವರ್ಷದ ಅಕ್ಟೋಬರ್ ನಲ್ಲಿ ಸರ್ವೋಚ್ಚ ನ್ಯಾಯಾಲಯವು ಮಲಗುಂಡಿ ಸ್ವಚ್ಛತೆ ವೇಳೆ ಸಂಭವಿಸುವ ಸಾವುಗಳಿಗೆ ಪರಿಹಾರವನ್ನು 10 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಿತ್ತು. ಖಾಯಂ ಅಂಗವೈಕಲ್ಯಕ್ಕೆ 20 ಲಕ್ಷ ರೂ.ಮತ್ತು ಇತರ ಅಂಗವೈಕಲ್ಯಗಳಿಗೆ 10 ಲಕ್ಷ ರೂ.ಪರಿಹಾರವನ್ನು ನೀಡಬೇಕು ಎಂದೂ ಅದು ತಿಳಿಸಿತ್ತು. ಈ ಪರಿಹಾರ ಮೊತ್ತವನ್ನು ಸ್ವೀಕರಿಸದ ಯಾವುದೇ ಸಂತ್ರಸ್ತರಿಗೂ ಅದನ್ನು ಪಾವತಿಸಬೇಕು ಎಂದು ಅದು ಹೇಳಿತ್ತು.

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸ್‌ ಕಸ್ಟಡಿಯಲ್ಲೇ ನಡೆದಿವೆ 275 ಅತ್ಯಾಚಾರ ಪ್ರಕರಣಗಳು: ಎನ್‌ಸಿಆರ್‌ಬಿ ಡೇಟಾ

2017 ರಿಂದ 2022ರವರೆಗೆ 275 'ಪೊಲೀಸ್‌ ಕಸ್ಟಡಿಯಲ್ಲಿ ಅತ್ಯಾಚಾರ' ಪ್ರಕರಣಗಳು ದಾಖಲಾಗಿವೆ...

ಗುಜರಾತ್ | ಭಾರತದ ಅತಿ ಉದ್ದದ ಸೇತುವೆ ‘ಸುದರ್ಶನ್ ಸೇತು’ ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್‌ನ ದ್ವಾರಕಾ ಜಿಲ್ಲೆಯ ಬೇಟ್ ದ್ವಾರಕಾ ದ್ವೀಪದಿಂದ ಓಖಾ ಪ್ರದೇಶಕ್ಕೆ ಸಂಪರ್ಕಿಸುವ,...

ಲೋಕಸಭಾ ಚುನಾವಣೆ | ಮುಂದಿನ ವಾರ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ವರದಿ

ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ...

ಆಂಧ್ರ ಪ್ರದೇಶ | ಟಿಡಿಪಿ-ಜನಸೇನಾ ಮೈತ್ರಿ: 24 ಕ್ಷೇತ್ರ ಪವನ್‌ ಕಲ್ಯಾಣ್‌ಗೆ ಬಿಟ್ಟುಕೊಟ್ಟ ಚಂದ್ರಬಾಬು ನಾಯ್ಡು

ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ...