ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗಳನ್ನು ‘ಹಿಂಸಾತ್ಮಕ ಹಿಂದೂಗಳು’ ಎಂದು ಕರೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, “ನನ್ನ ಸಹೋದರ ಹಿಂದೂಗಳನ್ನು ಅವಮಾನಿಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ.
ಸಂಸತ್ ಭವನದಿಂದ ಹೊರಟ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧು ವಾದ್ರಾ, “ನನ್ನ ಸಹೋದರ ರಾಹುಲ್ ಗಾಂಧಿ ಹಿಂದೂಗಳನ್ನು ಅವಮಾನಿಸಲು ಸಾಧ್ಯವಿಲ್ಲ. ಬಿಜೆಪಿ ಬಗ್ಗೆ ಹಾಗೂ ಪಕ್ಷದ ನಾಯಕರ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ್ದಾರೆ” ಎಂದರು.
#WATCH | Delhi: On Congress MP Rahul Gandhi’s speech in Parliament, party leader Priyanka Gandhi Vadra says, “He cannot insult Hindus. He has clearly said this about BJP and its leaders.” pic.twitter.com/G59pWDqOD8
— ANI (@ANI) July 1, 2024
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಇಂದು ತಮ್ಮ ಮೊದಲ ಭಾಷಣ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ಮತ್ತು ಈ ಕುರಿತು ಕ್ಷಮೆ ಯಾಚಿಸುವಂತೆ ಒತ್ತಾಯಿಸಿದೆ. ಇದಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಮೊದಲ ಭಾಷಣದಲ್ಲೇ ಶಿವ ದೇವರ ಫೋಟೋ ತೋರಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಹೇಳಿದ್ದೇನು?
ಇಂದು ಲೋಕಸಭೆಯಲ್ಲಿ ಶಿವನ ಫೋಟೋವನ್ನು ಹಿಡಿದು ಮಾತನಾಡಿದ್ದ ರಾಹುಲ್ ಗಾಂಧಿ, “ನಮ್ಮ ಮಹಾಪುರುಷರೆಲ್ಲರೂ ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ. ನೀವು ಯಾವುದೇ ರೀತಿಯಲ್ಲಿ ಹಿಂದೂ ಅಲ್ಲ.” ಎಂದು ಬಿಜೆಪಿ ನಾಯಕರತ್ತ ಕೈ ತೋರಿಸಿ ಹೇಳಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ, “ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಅತ್ಯಂತ ಗಂಭೀರವಾದ ಆರೋಪವಾಗಿದೆ” ಎಂದು ಹೇಳಿದ್ದರು.
“नरेंद्र मोदी पूरा हिंदू समाज नहीं हैं
BJP पूरा हिंदू समाज नहीं है
RSS पूरा हिंदू समाज नहीं है
ये BJP का ठेका नहीं है”
-श्री राहुल गांधी, नेता प्रतिपक्ष pic.twitter.com/nlK8Kn11Q1
— Priyanka Gandhi Vadra (@priyankagandhi) July 1, 2024
ಅದಕ್ಕೆ ತಿರುಗುತ್ತರ ನೀಡಿದ್ದ ರಾಹುಲ್ ಗಾಂಧಿ, “ನಾನು ಪ್ರಧಾನಿ ಮೋದಿ, ಬಿಜೆಪಿ-ಆರ್‌ಎಸ್‌ಎಸ್ ಹಿಂಸಾತ್ಮಕ ಧೋರಣೆ ತಳೆದಿದೆ ಎಂದು ಹೇಳಿದ್ದು. ಮೋದಿ, ಆರ್‌ಎಸ್‌ಎಸ್, ಬಿಜೆಪಿ ಮಾತ್ರ ಹಿಂದೂ ಸಮುದಾಯವಲ್ಲ” ಎಂದು ತಿರುಗೇಟು ನೀಡಿದ್ದರು.
