‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

Date:

Advertisements

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು ಉಜ್ಜಯಿನಿಯಲ್ಲಿ ಬಾಲಕಿಯ ಅತ್ಯಾಚಾರ ಆರೋಪಿಯ ತಂದೆ ಹೇಳಿದ್ದಾರೆ. ಅಲ್ಲದೆ, ತನ್ನ ಮಗನ ಪರವಾಗಿ ನ್ಯಾಯಾಲಯದಲ್ಲಿ ಯಾರೂ ವಾದಿಸಬಾರದು ಎಂದು ಸ್ಥಳೀಯ ವಕೀಲರ ಸಂಘಕ್ಕೆ ಮನವಿ ಮಾಡಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ನಡೆದಿತ್ತು. ಸಂತ್ರಸ್ತ ಬಾಲಕಿ ಅರೆಬೆತ್ತಲೆಯಾಗಿ ಬೀದಿ-ಬೀದಿಯಲ್ಲಿ ನೆರವು ಕೇಳುತ್ತಿದ್ದಳು. ಆ ಘಟನೆಯು ದೇಶದ ಮನಕಲಕಿತ್ತು. ಆಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆಟೋ ರಿಕ್ಷಾ ಚಾಲಕ ಭರತ್ ಸೋನಿ ಎಂಬಾತನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಭರತ್ ಸೋನಿಯೇ ಅಪರಾಧಿ ಎಂದಿರುವ ಆತನ ತಂದೆ, ‘ತನ್ನ ಮಗನಿಗೆ ಮರಣದಂಡನೆ ವಿಧಿಸಬೇಕು’ ಎಂದಿದ್ದಾರೆ.

“ಇದು ನಾಚಿಕೆಗೇಡಿನ ಕೃತ್ಯ. ನಾನು ಆತನನ್ನು ಭೇಟಿ ಮಾಡಲು ಆಸ್ಪತ್ರೆಗೆ ಹೋಗಿಲ್ಲ. ನಾನು ಪೊಲೀಸ್ ಠಾಣೆ ಅಥವಾ ನ್ಯಾಯಾಲಯಕ್ಕೆ ಹೋಗುವುದಿಲ್ಲ. ನನ್ನ ಮಗ ಅಪರಾಧ ಮಾಡಿದ್ದಾನೆ. ಆದ್ದರಿಂದ ಅವನನ್ನು ಗಲ್ಲಿಗೇರಿಸಬೇಕು” ಎಂದು ಆರೋಪಿ ಭರತ್ ಸೋನಿ ತಂದೆ ಹೇಳಿದ್ದಾರೆ.

Advertisements

ಉಜ್ಜಯಿನಿ ಬಾರ್ ಕೌನ್ಸಿಲ್ ಅಧ್ಯಕ್ಷ ಅಶೋಕ್ ಯಾದವ್ ಮಾತನಾಡಿ, “ಈ ಘಟನೆಯಿಂದ ದೇವಸ್ಥಾನ ನಗರಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಆರೋಪಿ ಪರವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳದಂತೆ ನಮ್ಮ ಸದಸ್ಯರಿಗೆ ಮನವಿ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ತನಿಖೆಗಾಗಿ ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಭರತ್ ಸೋನಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯನ್ನು ಇಂದೋರ್‌ನ ಸರ್ಕಾರಿ ಮಹಾರಾಜ ತುಕೋಜಿರಾವ್ ಹೋಳ್ಕರ್ ಮಹಿಳಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆಕೆಯನ್ನು ಸಮಾಲೋಚಕರೊಬ್ಬರು ಕೌನ್ಸಲಿಂಗ್ ಮಾಡಿದ್ದು, ಆಕೆ ಸತ್ನಾ ಜಿಲ್ಲೆ ಮೂಲದವಳು ಎಂದು ಗೊತ್ತಾಗಿದೆ. ಆದರೆ, ಆಕೆ ತನ್ನ ಹೆಸರು ಮತ್ತು ವಿಳಾಸವನ್ನು ಸರಿಯಾಗಿ ತಿಳಿಸಿಲ್ಲ ಎಂದು ವರದಿಯಾಗಿದೆ.

ಸತ್ನಾದಲ್ಲಿ ಅದೇ ವಯಸ್ಸಿನ ಬಾಲಕಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಆದರೆ, ಸಂತ್ರಸ್ತೆ ಅದೇ ಹುಡುಗಿಯೇ ಎಂದು ದೃಢಪಡಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಏತನ್ಮಧ್ಯೆ, ಪ್ರತಿಪಕ್ಷ ಕಾಂಗ್ರೆಸ್ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ‘ಮೌನ’ವನ್ನು ಪ್ರಶ್ನಿಸಿದೆ. “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಧ್ಯಪ್ರದೇಶ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟಂಬಕ್ಕೊಂದು ಉದ್ಯೋಗ ಎಂದ ಸಿಎಂ ಚೌಹಾಣ್; ಕುತೂಹಲಕಾರಿ ಸಂಗತಿ ಏನು ಗೊತ್ತೇ?

“ಮಧ್ಯಪ್ರದೇಶದಲ್ಲಿ ಮಹಿಳೆಯರು ದಲಿತ, ಬುಡಕಟ್ಟು ಸಮುದಾಯದಲ್ಲಿ ಹುಟ್ಟುವುದೇ ಪಾಪವಾಗಿದೆ. ಅಪ್ರಾಪ್ತರ ಮೇಲಿನ ಅತ್ಯಾಚಾರದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ಅವರ (ಚೌಹಾಣ್) ಆಡಳಿತದ 18 ವರ್ಷಗಳಲ್ಲಿ 58,000 ಅತ್ಯಾಚಾರ ಪ್ರಕರಣಗಳು ಮತ್ತು 68,000 ಅಪಹರಣ ಪ್ರಕರಣಗಳು ವರದಿಯಾಗಿವೆ. ಆದರೆ ದೇಶದ ಪ್ರಧಾನಿ, ಗೃಹ ಸಚಿವರು ಮತ್ತು ಬಿಜೆಪಿಯ ಎಲ್ಲಾ ನಾಯಕರು ಸುಮ್ಮನೆ ಕುಳಿತಿದ್ದಾರೆ,” ಎಂದು ಸುಪ್ರಿಯಾ ಕಿಡಿಕಾರಿದ್ದಾರೆ.

ಘಟನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಮತ್ತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಮೌನವಾಗಿರುವುದನ್ನು ಸುಪ್ರಿಯಾ ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಷ್ಟ್ರವಾದಿಗಳು ದೇಶಭಕ್ತರು,, ಗಂಟೆ ಬಾರಿಸಿಕೊಂಡು ಓಡಾಡುವ ಪಕಲಿಗಳಿಗೆ ಕೇವಲ ಕಾರ್ಪೋರೇಟ್ ಗೆಳೆಯರ ಹಿತ ಕಾಯುವುದು ಮುಖ್ಯ ಆಗಿದೆ,,, ದೇಶದಲ್ಲಿ ನಿರ್ಲಕ್ಷಿತರು ತಳವರ್ಗದವರು ಬದುಕುವುದು ದುಸ್ತರ ಮಾಡಿಬಿಡುವ ವಾತಾವರಣ ನಿರ್ಮಾಣವಾಗುತ್ತಿದೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X