ಉರ್ದು ಭಾಷೆಯಲ್ಲಿ ಶಾಲೆಯ ಹೆಸರು ಬರೆಸಿದ್ದಕ್ಕೆ ಮುಖ್ಯ ಶಿಕ್ಷಕಿ ಅಮಾನತು

Date:

ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

- Advertisement -

ಬಿಜ್ನೋರ್‌ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರಪ್ತಾ ಖಾನ್ ಅವರನ್ನು ಅಮಾನತು ಮಾಡಿರುವುದಾಗಿ ಬಿಜ್ನೋರ್ ಜಿಲ್ಲಾ ಪ್ರಾಥಮಿಕ ಶಿಕ್ಷಣ ಅಧಿಕಾರಿ(ಬಿಎಸ್‌ಎ) ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮುಖ್ಯ ಶಿಕ್ಷಕಿ ರಪ್ತಾ ಖಾನ್ ಅವರು ಶಾಲೆಯ ಮುಖ್ಯ ದ್ವಾರ ಮತ್ತು ಒಳಗಿನ ಗೋಡೆ ಮೇಲೆ ಶಾಲೆಯ ಹೆಸರನ್ನು ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಬರೆಸಿದ್ದರು. ಹಿಂದಿಯ ಜೊತೆಗೆ ಉರ್ದು ಭಾಷೆಯಲ್ಲಿಯೂ ನಾಮಫಲಕವನ್ನು ಬರೆಸಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ.

ಹಿಂದಿ ಮತ್ತು ಉರ್ದು ಭಾಷೆಯಲ್ಲಿ ನಾಮಫಲಕ ಬರೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಭಾಷೆಗೆ ಸಂಬಂಧಿಸಿದ ನಿಯಮಗಳನ್ನು ಮುಖ್ಯ ಶಿಕ್ಷಕಿ ಉಲ್ಲಂಘಿಸಿದ್ದಾರೆ. ಹೀಗಾಗಿ, ಅವರನ್ನು ಅಮಾನತು ಮಾಡಲಾಗಿದೆ ಎಂದು ಬಿಎಸ್‌ಎ ಯೋಗೇಂದ್ರ ಕುಮಾರ್ ಹೇಳಿದ್ದಾರೆ.

ಆದಾಗ್ಯೂ, ವೈರಲ್ ಆಗಿರುವ ವಿಡಿಯೋ ಹಳೆಯದ್ದಾಗಿದ್ದು, ಈ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ ಶಾಲೆಗೆ ಬಣ್ಣ ಬಳಿಯಲಾಗಿದೆ. ಈ ವೇಳೆ, ಉರ್ದು ಭಾಷೆಯಲ್ಲಿ ಬರೆಯಲಾಗಿದ್ದ ಹೆಸರನ್ನು ಅಳಿಸಲಾಗಿದೆ ಎಂದು ಅಮಾನತಾಗಿರುವ ಮುಖ್ಯ ಶಿಕ್ಷಕಿ ರಪ್ತಾ ಖಾನ್ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮರಾಠಿ ನಾಡಿನಲ್ಲಿ ಹಿಂದಿ ಕಡ್ಡಾಯಕ್ಕೆ ತಡೆ: ನಡೆದದ್ದೇನು?

ಪ್ರಕರಣದ ಕುರಿತು ತನಿಖೆ ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ತನಿಖಾ ವರದಿ ಬಂದ ಬಳಿಕ, ಕಾನೂನು ಕ್ರಮ ಜರುಗಿಸುವುದಾಗಿ ಯೋಗೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಅಂದಹಾಗೆ, ದಕ್ಷಿಣ ಭಾರತದ ರಾಜ್ಯಗಳು ಭಾಷಾ ಸ್ವಾಭಿಮಾನಕ್ಕಾಗಿ ಮತ್ತು ಹಿಂದಿ ಹೇರಿಕೆಯ ವಿರುದ್ಧ ನಿರಂತರವಾಗಿ ಹೋರಾಟ ನಡಸುತ್ತಿವೆ. ಆದರೆ, ಎಲ್ಲ ಭಾಷೆಗಳನ್ನು ಒಳಗೊಳ್ಳಬೇಕು, ಕಲಿಯಬೇಕು ಎಂದು ಉತ್ತರ ರಾಜ್ಯಗಳು, ಅದರಲ್ಲೂ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಹೇಳುತ್ತಿವೆ. ದಕ್ಷಿಣ ರಾಜ್ಯಗಳ ಮೇಲೆ ಹಿಂದಿಯನ್ನು ಹೇರಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಹವಣಿಸುತ್ತಿದೆ. ಇಂತಹ ಸಂದರ್ಭದಲ್ಲಿ, ಹಿಂದಿ ಭಾಷೆಯಲ್ಲದೆ, ಮತ್ತೊಂದು ಭಾಷೆಯಲ್ಲಿ ನಾಮಫಲಕ ಬರೆಸಿದ್ದಕ್ಕಾಗಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವುದು ದಕ್ಷಿಣ ರಾಜ್ಯಗಳಲ್ಲಿ ಭಾಷಾ ಹೇರಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...