ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ 2018ರ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಯುಪಿಯ ನ್ಯಾಯಾಲಯವು ಜೂನ್‌ 7ಕ್ಕೆ ನಿಗದಿಪಡಿಸಿದೆ.

- Advertisement -

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಗಾಂಧಿ ವಿರುದ್ಧ ಮಾನನಷ್ಟ ದೂರು ದಾಖಲಿಸಿದ್ದರು. ರಾಹುಲ್ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ರಾಹುಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರಾಗಲು ಸಮಯ ಬೇಕಾಗುತ್ತದೆ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಳಿಕ ನ್ಯಾಯಾಧೀಶ ಶುಭಂ ವರ್ಮಾ ಅವರು ಮುಂದಿನ ವಿಚಾರಣೆಯನ್ನು ಜೂನ್ 7 ಎಂದು ನಿಗದಿಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

ಆದರೆ ರಾಹುಲ್ ಗಾಂಧಿ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಫಿರ್ಯಾದಿದಾರರ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ವಾರೆಂಟ್ ಹೊರಡಿಸಿತ್ತು. ಫೆಬ್ರವರಿ 20ರಂದು ಅಮೇಥಿಯಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಸ್ಥಗಿತಗೊಳಿಸಿದ ರಾಹುಲ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಜಾಮೀನು ನೀಡಲಾಗಿತ್ತು.

ಇದನ್ನು ಓದಿದ್ದೀರಾ?  ಇಂಡಿಯಾ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಅದಾನಿ ಸಮೂಹದ ವಿರುದ್ಧ ತನಿಖೆ: ರಾಹುಲ್ ಗಾಂಧಿ

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಗಸ್ಟ್ 4, 2018ರಂದು ದೂರು ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...