ಹವಾಮಾನ | ದೆಹಲಿ, ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಇನ್ನೂ ಒಂದು ವಾರ ಪ್ರಚಂಡ ಧಗೆ; 47 ಡಿಗ್ರಿ ದಾಟಲಿದೆ ತಾಪಮಾನ

Date:

ದೇಶದಲ್ಲಿ ಬಿಸಿಲ ಬೇಗೆ ತೀವ್ರ ಅಧಿಕವಾಗುತ್ತಿದೆ. ಅದರಲ್ಲೂ ಉತ್ತರ ಮತ್ತು ಮಧ್ಯ ಭಾರತದಲ್ಲಿ ಬೇಸಿಗೆಯ ಧಗೆ ಅತ್ಯಂತ ತೀವ್ರ ರೂಪ ಪಡೆದುಕೊಂಡಿದೆ. ಉತ್ತರ ಪ್ರದೇಶದ ಬಾಂದಾದಂತಹ ಕೆಲವು ಭಾಗಗಳಲ್ಲಿ ಈಗಾಗಲೇ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ದಾಟಿದೆ. ಈ ನಡುವೆ ದೆಹಲಿ ಮತ್ತು ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿಯೂ ತಾಪಮಾನ 47 ಡಿಗ್ರಿ ಸೆಲ್ಸಿಯಸ್‌ ದಾಟಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ದೆಹಲಿ, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಮೇ 26ರವರೆಗೆ ತೀವ್ರವಾದ ಉಷ್ಣಗಾಳಿ ಇರಲಿದೆ ಎಂದು ಐಎಂಡಿ ತಿಳಿಸಿದೆ. ಹಾಗೆಯೇ ತೀವ್ರ ಶಾಖದ ಅಲೆಯ (Severe Heatwave) ಕಾರಣದಿಂದಾಗಿ ದೆಹಲಿ, ಪಂಜಾಬ್ ಮತ್ತು ಹರಿಯಾಣ ಭಾಗಗಳಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಹಾಗೂ ರೆಡ್ ಅಲರ್ಟ್’ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಭಾರತೀಯ ಹವಾಮಾನ ಇಲಾಖೆ ಕಳವಳ

ಇನ್ನು ರಾಜಸ್ಥಾನದ ಮರುಭೂಮಿ ಪ್ರದೇಶದಿಂದ ಒಣ ಹಾಗೂ ಅತ್ಯಂತ ಬಿಸಿಯಾದ ವಾಯುವ್ಯ ಮಾರುತಗಳು ದೆಹಲಿ, ಉತ್ತರ-ಮಧ್ಯಪ್ರದೇಶದಂತಹ ರಾಜ್ಯಗಳತ್ತ ಚಲಿಸುತ್ತಿವೆ. ಹಗಲು ಮಾತ್ರವಲ್ಲದೆ ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ರಾತ್ರಿಯ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗಿದೆ.

ಈ ನಡುವೆ ಮಧ್ಯಾಹ್ನದ ಅವಧಿಯಲ್ಲಿ (ಬೆಳಗ್ಗೆ 11 ರಿಂದ ಮಧ್ಯಾಹ್ನ 4 ರವರೆಗೆ) ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ತಪ್ಪಿಸಿ, ನಿರಂತರವಾಗಿ ನೀರು, ಓ.ಆರ್.ಎಸ್ ಅಥವಾ ಮಜ್ಜಿಗೆಯನ್ನು ಸೇವಿಸುವ ಮೂಲಕ ದೇಹದ ನಿರ್ಜಲೀಕರಣವನ್ನು (Dehydration) ತಡೆಯಿರಿ ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...