ಭಾರೀ ಮಳೆಗೆ ಯುಪಿ ಸ್ಮಶಾನ ಜಲಮಯ: ನೀರಿನಲ್ಲಿ ತೇಲಿದ ಮೃತದೇಹಗಳು

Date:

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಹೆದ್ದಾರಿ ಪಕ್ಕದಲ್ಲಿರುವ ಸೈಯದ್ ಮಜ್ರಾ ಎಂಬ ಹಳ್ಳಿಯ ಸ್ಮಶಾನದಲ್ಲಿ ಮೂರು ದಿನಗಳ ಕಾಲ ಸತತವಾಗಿ ಸುರಿದ ಭಾರೀ ಮಳೆಯಿಂದಾಗಿ ತೀವ್ರ ಜಲಾವೃತ ಮತ್ತು ಮಣ್ಣಿನ ಸವೆತ ಉಂಟಾಗಿದೆ. ಮಳೆಯ ನೀರಿನ ತೀವ್ರತೆ ಎಷ್ಟಿದೆ ಎಂದರೆ ಗೋರಿಗಳ ಮೇಲಿದ್ದ ಮಣ್ಣು ಕೊಚ್ಚಿ ಹೋಗಿ, ಹೂಳಲಾಗಿದ್ದ ಹಲವು ಮೃತದೇಹಗಳು ಈಗ ನೀರಿನಲ್ಲಿ ತೇಲುತ್ತಿದೆ. ಸದ್ಯ ಈ ವಿಡಿಯೋ ಸ್ಥಳೀಯವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

- Advertisement -

ಇನ್ನು ವಿಡಿಯೋ ಹರಿದಾಡಿದ ಬೆನ್ನಲ್ಲೇ ಪೊಲೀಸ್ ಸಿಬ್ಬಂದಿ ಧಾವಿಸಿ, ಗೋರಿಯಿಂದ ಹೊರಬಂದು ನೀರಿನಲ್ಲಿ ತೇಲುತ್ತಿದ್ದ ಮೃತದೇಹಗಳನ್ನು ಸ್ಮಶಾನದ ಸುರಕ್ಷಿತ ಹಾಗೂ ಎತ್ತರವಾದ ಜಾಗಕ್ಕೆ ಸ್ಥಳಾಂತರಿಸಿದ್ದಾರೆ. ಧಾರ್ಮಿಕ ವಿಧಿವಿಧಾನಗಳೊಂದಿಗೆ ಅತ್ಯಂತ ಗೌರವದಿಂದ ಮರುಸಂಸ್ಕಾರ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ದೆಹಲಿ | ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ; ಸಂಚಾರ ಅಸ್ತವ್ಯಸ್ತ

ಈ ನಡುವೆ ಸರಿಯಾಗಿ ಹೂಳದ ಕಾರಣ ನೀರು ತುಂಬುತ್ತಿದ್ದಂತೆ ಮೃತದೇಹಗಳು ಕೊಚ್ಚಿ ಬಂದಿವೆಯೇ ಎಂಬ ಪ್ರಶ್ನೆಯೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಹುಟ್ಟಿಸಿದೆ. ಆದರೆ ಸ್ಥಳೀಯ ಪ್ರಕಾರ ಇಲ್ಲಿ ಹೂಳಲಾದ ಮೃತದೇಹಗಳನ್ನು ಸಂಪ್ರದಾಯದಂತೆ ಸರಿಯಾಗಿಯೇ ಸಂಸ್ಕಾರ ಮಾಡಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಣ್ಣು ಸಂಪೂರ್ಣವಾಗಿ ಸಡಿಲಗೊಂಡಿದೆ.

ಇನ್ನು ಗ್ರಾಮಸ್ಥರ ಪ್ರಕಾರ ಈ ದುರಂತಕ್ಕೆ ಕೇವಲ ಮಳೆಯೊಂದೇ ಕಾರಣವಲ್ಲ. ಆ ಭಾಗದಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗುತ್ತಿದ್ದ ನೈಸರ್ಗಿಕ ಕಾಲುವೆಗಳನ್ನು ಹೂತುಹಾಕಲಾಗಿತ್ತು ಮತ್ತು ಒತ್ತುವರಿ ಮಾಡಲಾಗಿತ್ತು. ಇದರಿಂದಾಗಿ ಹರಿಯಬೇಕಿದ್ದ ನೀರು ದಿಕ್ಕು ಬದಲಿಸಿ ನೇರವಾಗಿ ಸ್ಮಶಾನ ಹಾಗೂ ಹಳ್ಳಿಯೊಳಗೆ ನುಗ್ಗಿದೆ.

ಇನ್ನು ಸ್ಮಶಾನದ ಹಿಂಭಾಗದಲ್ಲಿದ್ದ ಹಿಂಡನ್ ನದಿಯ ಹರಿವಿನ ಮಾರ್ಗದಲ್ಲಿ ಹೂಳು ತುಂಬಿ ದಿನಕಳೆದಂತೆ ಕಿರಿದಾಗುತ್ತಾ ಬಂದಿದೆ. ಹೀಗಾಗಿ ನೀರು ಹೊರಹೋಗಲು ದಾರಿಯಿಲ್ಲದೆ ಸ್ಮಶಾನದಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತು ತೀವ್ರ ಮಣ್ಣಿನ ಸವೆತ ಉಂಟಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...