ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ದಿನಗಳವರೆಗೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದಲ್ಲಿ ಹಿಂಗಾರು ಮುಂದುವರಿದಿದ್ದು, ಕರ್ನಾಟಕದ ಪ್ರಮುಖ ಮೂರು ವಲಯಗಳಾದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ (ಒಂದು ವಾರ) ಕಾಲ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

- Advertisement -

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ (ದಿನ 1 ರಿಂದ ದಿನ 7 ರವರೆಗೆ) ಸಾಧಾರಣದಿಂದ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ...

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು ನಾವಿಕನಿಲ್ಲದ ದೋಣಿಯಾಗಿದೆ. ಸಿದ್ದರಾಮಯ್ಯ ನಿರ್ಗಮನ, ಸ್ಟಿಂಗ್ ಆಪರೇಷನ್ ಆರೋಪ, ಸತೀಶ್ ಜಾರಕಿಹೊಳಿ ಹಿಂದಕ್ಕೆ ಮತ್ತು ಕೆ.ಎನ್. ರಾಜಣ್ಣನವರ ಅನಿಶ್ಚಿತತೆ… ಈ...

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು...

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಇದನ್ನೂ ಓದಿ: ಸುಡು ಧಗೆಯ ನಡುವೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Advertisements

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ ಮತ್ತು ರಾಯಚೂರು ಸೇರಿದಂತೆ ಒಟ್ಟು 7ರಿಂದ 8 ಜಿಲ್ಲೆಗಳಲ್ಲಿ ಮಳೆಯ ಪ್ರಭಾವವಿರಲಿದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಲಘು ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೆಳಗಾವಿ ಭಾಗದಲ್ಲಿ ಗಾಳಿ-ಮಳೆ ತೀವ್ರತೆ ಹೆಚ್ಚಿರಲಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಕೋಲಾರ, ಹಾಸನ, ಚಿಕ್ಕಮಗಳೂರು ಮತ್ತು ಕೊಡರು ಜಿಲ್ಲೆಗಳಲ್ಲಿ ಮುಂದಿನ 5 ರಿಂದ 7 ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ.

ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಸಾಧಾರಣದಿಂದ ತುಂತುರು ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಸಾಧಾರಣ ಮಳೆ ಹಾಗೂ ಆಗಾಗ್ಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಅ.21ರಂದು ರಾಷ್ಟ್ರಮಟ್ಟದ ದಸರಾ ಕುಸ್ತಿ ಪಂದ್ಯಾವಳಿ

ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರ ಯುವಜನ ಸಂಘದಿಂದ 31ನೇ ವರ್ಷದ ರಾಷ್ಟ್ರಮಟ್ಟದ...

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ ಮತಗಳು ಎತ್ತ?

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು...

ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ...