ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

Date:

ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ನಡೆದ ದುರ್ಘಟನೆಗಳಲ್ಲಿ 8 ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಭಾರೀ ವಾಹನದಟ್ಟಣೆ (ಟ್ರಾಫಿಕ್ ಜಾಮ್) ಉಂಟಾಗಿದೆ.

- Advertisement -

ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರಿನ ಮೇಲೆ ಛಾವಣಿ ಕುಸಿದು ಕಾರಿನ ಮೇಲೆ ಬಿದ್ದು 45 ವರ್ಷದ ಕ್ಯಾಬ್ ಚಾಲಕ ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ ವಸಂತ ವಿಹಾರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟದಲ್ಲಿ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇದು ನಿರ್ಮಾಣ ಹಂತದಲ್ಲಿರುವ ಸ್ಥಳವಾಗಿದ್ದು, ಕೆಲವು ಕಾರ್ಮಿಕರು ಇಲ್ಲಿಯೇ ಮಲಗಿದ್ದರು, ಮಳೆಯಿಂದಾಗಿ ನೆಲಕ್ಕೆ ಕುಸಿದಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೃತ ದೇಹವನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು ಪೊಲೀಸ್, ಎನ್‌ಡಿಆರ್‌ಎಫ್, ಡಿಡಿಎಂಎ, ನಾಗರಿಕ ಏಜೆನ್ಸಿಗಳು ಸಹ ಸ್ಥಳಕ್ಕೆ ತಲುಪಿವೆ. ಕಾರ್ಯಚರಣೆ ಮುಂದುವರಿದಿದೆ.

ಇದನ್ನು ಓದಿದ್ದೀರಾ?  ದೆಹಲಿ | ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ; ಸಂಚಾರ ಅಸ್ತವ್ಯಸ್ತ

ಈಶಾನ್ಯ ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಸಂಜೆ 5 ಗಂಟೆ ಸುಮಾರಿಗೆ ಮಳೆನೀರಿನಿಂದಾಗಿ ತುಂಬಿದ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಡಿಸಿಪಿ (ಈಶಾನ್ಯ) ಜಾಯ್ ಟಿರ್ಕಿ ಮಾತನಾಡಿದ್ದು, “ಇಬ್ಬರೂ ಹುಡುಗರು ಕೊಳದಲ್ಲಿ ಈಜಲು ಹೋಗಿ ಮುಳುಗಿದ್ದಾರೆ. ಅವರ ದೇಹಗಳನ್ನು ಹೊರತೆಗೆದು ಜೆಪಿಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಈ ಮಕ್ಕಳು ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ಒಬ್ಬರು ಸಾವು, 5 ಮಂದಿಗೆ ಗಾಯ

ಇನ್ನು ಏಳನೇ ಸಾವು ರೋಹಿಣಿ ಪ್ರದೇಶದಿಂದ ವರದಿಯಾಗಿದೆ. 39 ವರ್ಷದ ವ್ಯಕ್ತಿಯೊಬ್ಬರು ಜಲಾವೃತವಾದ ರಸ್ತೆಯಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿಯಿಂದಾಗಿ ವಿದ್ಯುತ್ ಶಾಕ್‌ಗೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ರೋಹಿಣಿ ಜಿಎಸ್ ಸಿದ್ದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...