ಹವಾಮಾನ | ರಾಜ್ಯದಲ್ಲಿ ಭಾರೀ ಮಳೆ: ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬ

Date:

ಮುಂಗಾರು ಪ್ರವೇಶಿಸುವ ಮುನ್ನವೇ ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಸಂಜೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಹಾಗೂ ಸಂಜೆ ಕಚೇರಿಯಿಂದ ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ತೀವ್ರ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಪರದಾಡುವಂತಾಗಿತ್ತು. ಇವೆಲ್ಲವುದರ ನಡುವೆ ಕೇರಳದಲ್ಲಿ ಮುಂಗಾರು ಪ್ರವೇಶ ವಿಳಂಬವಾಗಿದೆ.

- Advertisement -

ಮೇ 26ರ ಮಂಗಳವಾರ ಸಂಜೆ ರಾಜಧಾನಿ ಬೆಂಗಳೂರಿನ ಮಜಾಸ್ಟಿಕ್, ಶಿವಾಜಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಭಾರೀ ಆಲಿಕಲ್ಲು ಮಳೆಯಾಗಿದೆ. ಬಿರುಗಾಳಿಯಿಂದಾಗಿ ಹಲವೆಡೆ ಮರಗಳು ಉರುಳಿ ಬಿದ್ದಿದ್ದು, ಮೆಟ್ರೋ ಸಂಚಾರದಲ್ಲೂ ವ್ಯತ್ಯಯ ಉಂಟಾಗಿತ್ತು. ಇನ್ನು ಕೊಡಗು, ಆಗುಂಬೆ, ಚಿಕ್ಕಮಗಳೂರು ಮತ್ತು ಹಾಸನದ ಘಾಟ್ ರಸ್ತೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಪ್ರವಾಸಿಗರಿಗೆ ಮತ್ತು ವಾಹನ ಸವಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದನ್ನು ಓದಿದ್ದೀರಾ?

ಕೇರಳದಲ್ಲಿ ಮುಂಗಾರು ವಿಳಂಬ ಕೇರಳ ಪ್ರವೇಶಿಸಿದ ಮುಂಗಾರು; ಕೃಷಿ ಚಟುವಟಿಕೆಗಳು ಆರಂಭ

ಈ ಹಿಂದೆ ಹವಾಮಾನ ಇಲಾಖೆಯು ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಅಂದಾಜಿಸಿತ್ತು. ಆದರೆ ಎಲ್‌ನಿನೋ ಮತ್ತು ಬಂಗಾಳ ಕೊಲ್ಲಿಯ ಚಂಡಮಾರುತದ ಪ್ರಭಾವದಿಂದಾಗಿ ಮುಂಗಾರು ಸ್ವಲ್ಪ ವಿಳಂಬವಾಗಿದೆ. ಸದ್ಯದ ಮುನ್ಸೂಚನೆ ಪ್ರಕಾರ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರು ಕಾಲಿಡಲಿದೆ. ಜೂನ್ 5ರಿಂದ 7ರ ವೇಳೆಗೆ ಕರ್ನಾಟಕದ ಕರಾವಳಿ ತಲುಪುವ ಸಾಧ್ಯತೆಯಿದೆ.

ಕೇರಳದಲ್ಲಿ ಮುಂಗಾರು ಮಳೆಯ ಆಗಮನವು ಸ್ವಲ್ಪ ವಿಳಂಬವಾಗಲು ಮುಖ್ಯವಾಗಿ ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತ ಮತ್ತು ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ವಾತಾವರಣದ ಏರುಪೇರುಗಳು ಕಾರಣವಾಗಿವೆ. ಇದರ ಜತೆಗೆ ಎಲ್ ನಿನೋ ಪರಿಣಾಮದಿಂದಾಗಿ ಮುಂಗಾರು ಮಳೆಯ ಪ್ರಮಾಣವು ಸರಾಸರಿಗಿಂತ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ಪ್ರಸ್ತುತ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ಇದು ಮುಂಗಾರು ಪೂರ್ವ ಮಳೆಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗುವ ಚಂಡಮಾರುತಗಳು ಮಾರುತಗಳನ್ನು ತಮ್ಮತ್ತ ಎಳೆದುಕೊಳ್ಳುತ್ತವೆ. ಇದು ಭಾರತದ ಕಡೆಗೆ ಮುಂಗಾರು ಮಾರುತಗಳು ಸರಾಗವಾಗಿ ಬೀಸಲು ಅಗತ್ಯವಿರುವ ವಾತಾವರಣವನ್ನು ಚದುರಿಸಿ, ವಿಳಂಬಕ್ಕೆ ಕಾರಣವಾಗುತ್ತದೆ. ಎಲ್‌ನಿನೋ ದೇಶದಲ್ಲಿ ಮುಂಗಾರಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಬರಗಾಲ ಮತ್ತು ಮಳೆ ಕೊರತೆಗೆ ಕಾರಣವಾಗಬಹುದು ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...