ಭಾರೀ ಮಳೆ | ಮಣಿಪುರದ ಕೆಲವು ಭಾಗಗಳು ಜಲಾವೃತ; ಗುರುವಾರದವರೆಗೆ ಶಾಲಾ-ಕಾಲೇಜುಗಳಿಗೆ ರಜೆ

Date:

ನಿರಂತರ ಮಳೆಯಿಂದಾಗಿ ಎರಡು ಪ್ರಮುಖ ನದಿಗಳ ಅಡೆಕಟ್ಟುಗಳು ಒಡೆದಿದ್ದು, ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

- Advertisement -

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಿಗೆ ಬುಧವಾರ ರಜೆ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೂ ಕೂಡಾ ರಜೆ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇಂಫಾಲ್ ಪಶ್ಚಿಮದ ಸಿಂಗ್ಜಮೇಯ್ ಓಯನಾಮ್ ಥಿಂಗೆಲ್‌ನಲ್ಲಿ ಇಂಫಾಲ್ ನದಿ ಮತ್ತು ಕೊಂಗ್ಬಾ ಇರಾಂಗ್‌ನಲ್ಲಿ, ಇಂಫಾಲ್ ಪೂರ್ವದ ಕೀರಾವೊದ ಕೆಲವು ಭಾಗಗಳಲ್ಲಿ ಕೊಂಗ್ಬಾ ನದಿ ಅಣೆಕಟ್ಟಿನಿಂದ ಹೊರ ಹರಿಯುತ್ತಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ: ‘ಮಣಿಪುರಕ್ಕೆ ನ್ಯಾಯ ಒದಗಿಸಿ’ ಎಂದು ವಿಪಕ್ಷಗಳಿಂದ ಧರಣಿ

ಇನ್ನು ಇರಿಲ್ ನದಿಯು ಸಾವೊಂಬಂಗ್ ಮತ್ತು ಇಂಫಾಲ್ ಪೂರ್ವದ ಕ್ಷೇತ್ರೀಗಾವೊ ಭಾಗಗಳಲ್ಲಿ ಉಕ್ಕಿ ಹರಿದಿದೆ.

ದೊಡ್ಡ ಪ್ರಮಾಣದಲ್ಲಿ ನದಿಯ ನೀರು ವಸತಿ ಪ್ರದೇಶಗಳಿಗೆ ಪ್ರವೇಶಿಸಿದೆ. ಭಾರತ-ಮಯನ್ಮಾರ್ ರಸ್ತೆಯ 3-ಕಿಮೀ ವ್ಯಾಪ್ತಿಯಲ್ಲೂ ಸಹ ಪ್ರವಾಹ ಉಂಟಾಗಿದೆ. ಸುಮಾರು 1,000ಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ. ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

ಈ ನಡುವೆ ಮಂಗಳವಾರ ಮಧ್ಯಾಹ್ನ ಸೇನಾಪತಿ ನದಿಗೆ ಬಿದ್ದ 25 ವರ್ಷದ ಯುವಕನ ಮೃತದೇಹವನ್ನು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ತಂಡವು ಸ್ಥಳೀಯರ ಸಹಾಯದಿಂದ ಹೊರತೆಗೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...