ಗುಜರಾತ್‌ ಕಡಲ ತೀರದಲ್ಲಿ ಹೆಚ್ಚಿದ ʼಬಿಪೊರ್‌ಜಾಯ್‌ʼ ಅಬ್ಬರ

Date:

  • ರಾಜ್ಯದ ಕರಾವಳಿಗೂ ತಟ್ಟಲಿದೆ ಚಂಡಮಾರುತದ ಪರಿಣಾಮ
  • ಪೋರ್‌ಬಂದರ್‌ನಲ್ಲಿ ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿ ಬಲಿ

ಬಿಪೊರ್‌ಜಾಯ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಜೂನ್‌ 15ರ ಹೊತ್ತಿಗೆ ಗುಜರಾತ್‌ನ ಕಚ್‌ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಕಚ್‌ ಜಿಲ್ಲೆ ಮತ್ತ ಸೌರಾಷ್ಟ್ರ ಪ್ರದೇಶಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

- Advertisement -

ಪೋರ್‌ಬಂದರ್‌ ಸೇರಿದಂತೆ ಕಚ್‌ ಜಿಲ್ಲೆಯ ಹಲವೆಡೆ ಈಗಾಗಲೇ ಗಾಳಿ ಸಹಿತ ಮಳೆ ಶುರುವಾಗಿದೆ. ಕೆಲವೆಡೆ ದೈತ್ಯ ಮರಗಳು ಧರೆಗುರುಳಿದ್ದು, ಪೋರ್‌ಬಂದರ್‌ನಲ್ಲಿ ಬಿರುಗಾಳಿ-ಮಳೆಗೆ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆ ಪರಿಸ್ಥಿತಿ ಅವಲೋಕಿಸುವ ಸಲವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಗುಜರಾತ್‌ನ ಮುಖ್ಯಮಂತ್ರಿ ಭೂಪೇಂದ್ರಭಾಯ್‌ ಪಟೇಲ್‌ ಮತ್ತು ಕರಾವಳಿ ತೀರದ ಜಿಲ್ಲೆಗಳ ಸಂಸದರ ಜೊತೆಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಕಚ್‌ ಜಿಲ್ಲೆಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕಚ್‌ ಕಡಲ ತೀರದುದ್ದಕ್ಕೂ ವಾಸಿಸುತ್ತಿರುವ 8 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಕರ್ನಾಟಕದ ಕರಾವಳಿಯಲ್ಲೂ ಬಿಪರ್‌ಜಾಯ್‌ ಅಬ್ಬರ

karnataka costal

ರಾಜ್ಯದ ಕರಾವಳಿ ತೀರದಲ್ಲೂ ಬಿಪೊರ್‌ಜಾಯ್‌ ಚಂಡಮಾರುತದ ಭೀತಿ ಹೆಚ್ಚಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಚಂಡಮಾರುತದ ಪರಿಣಾಮ ತಟ್ಟುವ ಸಾಧ್ಯತೆ ಇದೆ. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸ್ಥಳೀಯ ಆಡಳಿತ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರ ತೀರದಲ್ಲಿ ಕಲ್ಲು ಹಾಕುವ ತುರ್ತು ಕಾಮಗಾರಿಯನ್ನು ಆರಂಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...