ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

Date:

Advertisements

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್‌ಬಿರ್‌ಗಾಂವ್, ಮಿರಿಕ್ ಬಸ್ತಿ, ಧಾರ್ ಗಾಂವ್ (ಮೆಚಿ), ನಾಗರಕಟ ಮತ್ತು ಮಿರಿಕ್ ಪ್ರದೇಶದಲ್ಲಿ ಭಾರೀ ಮಳೆ – ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತವು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿದ್ದಾರೆ.

ಮಿರಿಕ್ ಜಿಲ್ಲೆಯಲ್ಲಿ 11 ಮಂದಿ, ಡಾರ್ಜಿಲಿಂಗ್‌ನಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂತ್ರಸ್ತರಿಗೆ ಪರಿಹಾರ ಘೋಷಿಸಿದ್ದಾರೆ. ಅಕ್ಟೋಬರ್ 6 ರಂದು ಉತ್ತರ ಬಂಗಾಳಕ್ಕೆ ಭೇಟಿ ನೀಡಿ, ಪ್ರದೇಶಗಳ ಪರಿಸ್ಥಿತಿಯನ್ನು ನಿರ್ಣಯಿಸುವುದಾಗಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

ಅಮೆರಿಕ: ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ....

Download Eedina App Android / iOS

X