ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆ: 16 ಸಾವು, ವಿಪತ್ತು ಪೀಡಿತ ರಾಜ್ಯ ಎಂದು ಘೋಷಣೆ

Date:

Advertisements

ಹಿಮಾಚಲ ಪ್ರದೇಶ ರಾಜ್ಯಾದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಹಾಗೂ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟಿರುವ ವರದಿಯಾಗಿದೆ.

ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಹಿಮಾಚಲ ಪ್ರದೇಶದ ಎಲ್ಲ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಹಾನಿಯಿಂದಾಗಿ 3,056 ಕೋಟಿ ರೂಪಾಯಿಯಷ್ಟು ಆಸ್ತಿ ನಷ್ಟ ಉಂಟಾಗಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶವನ್ನು ವಿಪತ್ತು ಪೀಡಿತ ರಾಜ್ಯವೆಂದು ಘೋಷಿಸಿದ್ದಾರೆ.

ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ವಿನಾಶದ ಪ್ರಮಾಣವನ್ನು ಉಲ್ಲೇಖಿಸಿ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮುಂದಿನ 2 ದಿನಗಳವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕಾಂಗ್ರಾ, ಮಂಡಿ, ಸಿರಮೌರ್ ಮತ್ತು ಕಿರ್ ಜಿಲ್ಲೆಗಳಲ್ಲಿ ಬುಧವಾರ (ಇಂದು) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉನಾ ಮತ್ತು ಬಿಲಾಸ್ಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ 76 ವರ್ಷಗಳಲ್ಲೇ ಈ ಬಾರಿ ಅಧಿಕ ಮಳೆಯಾಗಿದೆ. ಆಗಸ್ಟ್‌ನಲ್ಲಿ 431.3 ಮಿಲಿ ಮೀಟರ್ ಮಳೆಯಾಗಿದೆ ಎಂದು ಶಿಮ್ಲಾ ಹವಾಮಾನ ಇಲಾಖೆ ಹೇಳಿದೆ. ಸಾಮಾನ್ಯವಾಗಿ ಪ್ರತಿವರ್ಷ 256.8 ಮಿ.ಮೀಟರ್ ಮಳೆಯಾಗುತ್ತಿತ್ತು. ಈ ಬಾರಿ 431.3 ಮಿ.ಮೀಟರ್ ಮಳೆಯಾಗಿದ್ದು ಶೇ 68ರಷ್ಟು ಹೆಚ್ಚು ಮಳೆಯಾದಂತಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Himachal Pradesh Flood 3 1

4 ರಾಷ್ಟ್ರೀಯ ಹೆದ್ದಾರಿ ಸೇರಿ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತ

4 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಅವುಗಳಲ್ಲಿ ಮಂಡಿಯಲ್ಲಿ-282, ಶಿಮ್ಲಾದಲ್ಲಿ-255 ,ಚಂಬಾದಲ್ಲಿ 239, ಕುಲ್ಲು 205 ಮತ್ತು ಸಿರಮೌರ್ ಜಿಲ್ಲೆಯ 140 ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 3 (ಮಂಡಿ-ಧರಂಪುರ್ ರಸ್ತೆ), ರಾಷ್ಟ್ರೀಯ ಹೆದ್ದಾರಿ 305 (ಆಸ್ಟ್-ಸೈಂಜ್), ರಾಷ್ಟ್ರೀಯ ಹೆದ್ದಾರಿ 5 (ಹಳೆಯ ಹಿಂದೂಸ್ತಾನ್-ಟಿಬೆಟ್ ರಸ್ತೆ) ಮತ್ತು ರಾಷ್ಟ್ರೀಯ ಹೆದ್ದಾರಿ 707 (ಹಟ್ಟೋಟಿ-ಪೋಂಟಾ) ಗಳಲ್ಲಿಯೂ ಸಂಚಾರ ಸ್ಥಗಿತಗೊಂಡಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 20 ರಂದು ಮಾನ್ಸೂನ್ ಆರಂಭವಾಗಿದ್ದು, ಅಲ್ಲಿಂದ ಈವರೆಗೆ ರಾಜ್ಯದಲ್ಲಿ 95 ಹಠಾತ್ ಪ್ರವಾಹ, 45 ಮೇಘಸ್ಫೋಟ ಮತ್ತು 121 ಭೂಕುಸಿತ ಸಂಭವಿಸಿವೆ. ಮಳೆ ಸಂಬಂಧಿತ ಅವಘಡ ಹಾಗೂ ರಸ್ತೆ ಅಪಘಾತಗಳಲ್ಲಿ ಕನಿಷ್ಠ 340 ಜನ ಮೃತಪಟ್ಟಿದ್ದಾರೆ. 41 ಮಂದಿ ನಾಪತ್ತೆಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X