ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಉತ್ತರ ಭಾರತದಲ್ಲಿ ಏಳು ಸಾವು

Date:

Advertisements

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ ಅವಘಡಗಳಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ.

ಗುರುವಾರ ಸಂಜೆ ಸುರಿದ ಮಳೆಯಿಂದ ಹಲವೆಡೆ ಮರಗಳು ಮುರಿದು ಬಿದ್ದಿವೆ. ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಡಕುಂಟಾಗಿತ್ತು. ಕತ್ರಿಗುಪ್ಪೆ ಮುಖ್ಯರಸ್ತೆಯ ಬಸ್ ನಿಲ್ದಾಣದ ಬಳಿ ಆಟೊದ ಮೇಲೆ ಮರ ಉರುಳಿ ಬಿದ್ದು, ಆಟೊ ಚಾಲಕ, ಇಟ್ಟಮಡು ನಿವಾಸಿ ಮಹೇಶ್ (45) ಸ್ಥಳದಲ್ಲೇ ಮೃತಪಟ್ಟಿದ್ದರು.

ಶುಕ್ರವಾರದ ಮಳೆಗೆ ರಾಜಧಾನಿಯಲ್ಲಿ ಸದ್ಯಕ್ಕೆ ಯಾವುದೇ ಅನಾಹುತಗಳು ವರದಿಯಾಗಿಲ್ಲ. ಹೆಬ್ಬಾಳ, ಸಂಜಯನಗರ, ಆರ್.ಟಿ ನಗರ, ಗಂಗಾನಗರ, ಮೇಖ್ರಿ ಸರ್ಕಲ್, ಶಿವಾನಂದ ಸರ್ಕಲ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಗಾಂಧಿನಗರ, ಕೆ.ಆರ್ ಸರ್ಕಲ್, ಕಾರ್ಪೋರೇಶನ್ ಹಾಗೂ ಮಾರ್ಕೆಟ್​, ಮಲ್ಲೇಶ್ವರಂ, ರಾಜಾಜಿನಗರ, ಗಾಂಧಿ ನಗರದಲ್ಲಿ ಸಂಜೆ ಜೋರಾಗಿ ಮಳೆ ಸುರಿದಿದೆ. ಚಿಕ್ಕಬಳ್ಳಾಪುರದಲ್ಲಿ ಜೋರು ಮಳೆಯಾಗಿದ್ದು, ಬಾಗೇಪಲ್ಲಿಯ ತರಕಾರಿ ಬೆಳೆಗಳು ನೆಲ ಕಚ್ಚಿವೆ.

Advertisements

ಮೇ.3ರಂದು ಹಾವೇರಿ, ಧಾರವಾಡ, ಗದಗ, ಕಲಬುರಗಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 7ರ ವರೆಗೆ ಮಳೆಯ ಸಾಧ್ಯತೆ

IMD ಪ್ರಕಾರ, ಮೇ 4ರ ವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಚಂಡಮಾರುತದ ಪ್ರಭಾವ ಮತ್ತು ಪೂರ್ವ ಮುಂಗಾರು ಮಳೆಯಿಂದ ರಾಜ್ಯದ ಬಿಸಿಲು ಕಡಿಮೆಯಾಗಿ ತಂಪಾದ ಹವಾಮಾನ ನಿರೀಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X