ತಮಿಳುನಾಡಿನಲ್ಲಿ ಭಾರೀ ಮಳೆ; ಶಾಲೆಗಳಿಗೆ ರಜೆ ಘೋಷಣೆ

Date:

ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಹಲವೆಡೆ ತುಂತುರು ಮಳೆಯಾಗುತ್ತಿದೆ.

ಮಂಗಳವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಭಾಗದಲ್ಲಿ ಭಾರೀ ಮಳೆಯಾಗಿದೆ. ಅರಿಯಲೂರು, ತಂಜಾವೂರು, ವಿಲ್ಲುಪುರಂ, ತಿರುವಣ್ಣಾಮಲೈ, ನಾಗಪಟ್ಟಿಣಂ, ತಿರುವರೂರು ಮತ್ತು ಕಡಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬುಧವಾರವೂ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಚೆನ್ನೈನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

“121 ಬಹುಪಯೋಗಿ ಸುರಕ್ಷತಾ ಕೇಂದ್ರಗಳು ಸೇರಿದಂತೆ 4,967 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಶಾಲಾ-ಕಾಲೇಜುಗಳು, ಮದುವೆ ಮಂಟಪಗಳು ಮತ್ತು ಸಮುದಾಯ ಭವನಗಳನ್ನು ಪರಿಹಾರ ಕೇಂದ್ರಗಳಾಗಿ ಬಳಸಿಕೊಂಡು, ಜನರಿಗೆ ವಸತಿ ಕಲ್ಪಿಸಲು ಸಿದ್ಧತೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ತಕ್ಷಣ ರಕ್ಷಣಾ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ” ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ.

ಸರ್ಕಾರವು ಚೆನ್ನೈನಲ್ಲಿ 169 ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದೆ ಮತ್ತು 260 ಹೈ-ಪವರ್ ಮೋಟಾರ್ ಪಂಪ್‌ಗಳು ರಕ್ಷಣಾ ಕಾರ್ಯಾಚರಣೆಗಾಗಿ ಸಿದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

ಕಳೆದ ಒಂದೂವರೆ ತಿಂಗಳುಗಳಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದ ಸೃಷ್ಠಿಯಾಗಿತ್ತು. ತಮಿಳುನಾಡಿನಲ್ಲಿ ನೀರಿಲ್ಲವೆಂದು ಅಲ್ಲಿನ ಸರ್ಕಾರ ವಾದಿಸುತ್ತಿತ್ತು.  ತಮಿಳುನಾಡಿಗೆ ನೀರು ಹರಿಸಬೇಕೆಂದು ಪದೇ-ಪದೇ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶಿಸಿತ್ತು. ಇದೀಗ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಂಧ್ರ, ತೆಲಂಗಾಣದಲ್ಲಿ ರಸ್ತೆ ಅಪಘಾತ: 8 ಸಾವು

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ...

ದುರಹಂಕಾರಿಗಳಿಗೆ ಭಗವಾನ್ ರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ನಾಯಕ ವಾಗ್ದಾಳಿ

ಬಿಜೆಪಿಯ ವಿರುದ್ಧ ಆರ್‌ಎಸ್‌ಎಸ್‌ ನಾಯಕರೊಬ್ಬರು ವಾಗ್ದಾಳಿ ನಡೆಸಿದ್ದು, ಆಡಳಿತ ಪಕ್ಷ ಲೋಕಸಭೆ...

ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ ಮೃತದೇಹಗಳು ಇಂದು ಭಾರತಕ್ಕೆ

ಎರಡು ದಿನಗಳ ಹಿಂದೆ ಕುವೈತ್ ಬೆಂಕಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ...

ಶಾಸಕ ಸ್ಥಾನಕ್ಕೆ ಸಿಕ್ಕಿಂ ಸಿಎಂ ಪತ್ನಿ ರಾಜೀನಾಮೆ: ಒಂದು ದಿನದ ಹಿಂದಷ್ಟೆ ಪ್ರೇಮ್ ಸಿಂಗ್‌ ಪ್ರಮಾಣವಚನ

ಒಂದು ದಿನದ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿಕ್ಕಿಂ ಮುಖ್ಯಮಂತ್ರಿ...