ಉತ್ತರಾಖಂಡದಲ್ಲಿ ಭಾರೀ ಮಳೆ; ರುದ್ರಪ್ರಯಾಗ, ಕೇದಾರನಾಥದಲ್ಲಿ ಆತಂಕ

Date:

ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು ಶಿವನ ಬೃಹತ್ ಪ್ರತಿಮೆ ನೀರಿನಲ್ಲಿ ಮುಳಿಗಿವೆ.

- Advertisement -

ಇದೇ ಸಂದರ್ಭದಲ್ಲಿ, ಉತ್ತರಾಖಂಡದ ಪ್ರಸಿದ್ಧ ತಾಣ ಕೇದಾರನಾಥದಲ್ಲಿ ‘ಕೇದಾರನಾಥ ಯಾತ್ರೆ’ಯೂ ನಡೆಯುತ್ತಿದೆ. ಸುಮಾರು 8 ಸಾವಿರ ಭಕ್ತರು ಕೇದಾರನಾಥದಲ್ಲಿದ್ದಾರೆ. ಅಲ್ಲಿಯೂ ಮಳೆ ಸುರಿಯುತ್ತಿದ್ದು, ಭಕ್ತರು ಆತಂಕಗೊಂಡಿದ್ದಾರೆ. ಕೇದಾರನಾಥದಲ್ಲಿದ್ದ ಎಲ್ಲ ಭಕ್ತರನ್ನು ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಸೋನ್‌ಪ್ರಯಾಗಕ್ಕೆ ಸ್ಥಳಾಂತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಮಳೆಯಿಂದಾಗಿ, ಚಾರ್‌ಧಾಮ ಯಾತ್ರೆಯನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಯಾತ್ರಾರ್ಥಿಗಳನ್ನು ವಾಹನಗಳಲ್ಲಿ ಕೇದಾರನಾಥಕ್ಕೆ ಕರೆದೊಯ್ಯಲಾಗಿದೆ.

ಕೇದಾರನಾಥದ ಗೌರಿಕುಂಡ್ ಹೆದ್ದಾರಿಯಲ್ಲಿ ಶಟಲ್ ಪಾರ್ಕಿಂಗ್ ಮತ್ತು ಮುಂಕಟಿಯಾ ಬಳಿ ಭೂಕುಸಿತಗಳೂ ಸಂಭವಿಸಿವೆ. ನಿರಂತರ ಮಳೆ ಸುರಿಯುತ್ತಿರುವ ಕಾರಣ ಹೆದ್ದಾರಿ ಮತ್ತು ಪಾದಚಾರಿ ಮಾರ್ಗವು ಹಲವೆಡೆ ಆತಂಕಕರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು – ಡೆಹ್ರಾಡೂನ್, ಉತ್ತರಕಾಶಿ, ತೆಹ್ರಿ, ಪೌರಿ, ರುದ್ರಪ್ರಯಾಗ, ನೈನಿತಾಲ್ ಹಾಗೂ ಬಾಗೇಶ್ವರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಜುಲೈ 6ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶದಲ್ಲಿಯೂ ಮಳೆಯಾಗುತ್ತಿದೆ. ಕುಲ್ಲು, ಮನಾಲಿ ಹಾಗೂ ಬಂಜಾರ್‌ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಪ್ರದೇಶಗಳ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಶಾಲೆಗಳು, ಐಟಿಐಗಳು, ವೃತ್ತಿಪರ ತರಬೇತಿ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ; ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ, 2026ರ ಸೆಪ್ಟೆಂಬರ್...

ವಿದ್ಯಾರ್ಥಿನಿ ಮೇಲೆ ಗೂಂಡಾಗಿರಿ; ಬಿಹಾರ ಸರ್ಕಾರದ ವಿರುದ್ಧ ರಾಹುಲ್ ಕಿಡಿ; ಪೋಕ್ಸೋ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಿಗೆ ಸಾರ್ವಜನಿಕ...

ಬಿಹಾರ: ಅಪ್ರಾಪ್ತೆಯನ್ನು ನಡುರಸ್ತೆಯಲ್ಲಿ ಎಳೆದಾಡಿ, ಕಿರುಕುಳ ನೀಡಿದ ಪುಂಡರು

ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಯುವಕರ ಗುಂಪೊಂದು ನಡುರಸ್ತೆಯಲ್ಲಿ...

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಹಿಂದಿನ ಹೇಳಿಕೆಗೆ ಆಡಳಿತ ಮಂಡಳಿ ಕ್ಷಮೆ, ಡೀನ್ ಅಮಾನತು

ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ...