ಘೋರ ಕೃತ್ಯ | ಪತಿ, ಮಗನ ಎದುರೇ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Date:

ತೋಟದ ಕಾವಲು ಕೆಲಸ ಮಾಡುತ್ತ ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ಮಲಗಿದ್ದ ಬುಡಕಟ್ಟು ಮಹಿಳೆಯ ಮೇಲೆ ಆಕೆಯ ಪತಿ ಮತ್ತು ಮಗನ ಎದುರೇ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಕಳ್ಳತನ ಮಾಡುವ ಉದ್ದೇಶದಿಂದ ತೋಟಕ್ಕೆ ನುಗ್ಗಿದ್ದ ದುಷ್ಕರ್ಮಿಗಳು, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೌರ್ಯ ಮೆರೆದಿದ್ದಾರೆ. ಸಂತ್ರಸ್ತೆಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಸಂತ್ರಸ್ತೆಯ ದೂರಿನ ಪ್ರಕಾರ, ಉಜ್ಜಯಿನಿಯ ಬದ್ನಗರ್ ಪ್ರದೇಶದಲ್ಲಿರುವ ತೋಟವೊಂದರಲ್ಲಿ ಸಂತ್ರಸ್ತೆಯ ಕುಟುಂಬವು ಕಾವಲು ಕಾಯುವ ಕೆಲಸ ಮಾಡುತ್ತಿತ್ತು. ಮಹಿಳೆ, ಆಕೆಯ ಪತಿ ಹಾಗೂ ಅವರ ಅಪ್ರಾಪ್ತ ಮಗ ತೋಟದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಗುಡಿಸಲಿನಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆಗೆ ಐದು ಮಂದಿ ದುಷ್ಕರ್ಮಿಗಳು ಅಲ್ಲಿಗೆ ನುಗ್ಗಿದ್ದಾರೆ. ಗಾಢ ನಿದ್ರೆಯಲ್ಲಿದ್ದ ಕುಟುಂಬವನ್ನು ಬಲವಂತವಾಗಿ ಎಬ್ಬಿಸಿದ ಆರೋಪಿಗಳು, ಪತಿಯನ್ನು ಗುಡಿಸಲಿನಿಂದ ಹೊರಗೆ ಎಳೆದೊಯ್ದು ಗನ್ ತೋರಿಸಿ ಆತನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಈ ವೇಳೆ, ಕೆಲವು ದುಷ್ಕರ್ಮಿಗಳು ಹತ್ತಿರದಲ್ಲಿದ್ದ ಪವನ ವಿದ್ಯುತ್ ಘಟಕದಿಂದ (ವಿಂಡ್‌ಮಿಲ್) ವೈರ್‌ಗಳನ್ನು ಕದಿಯಲು ಆರಂಭಿಸಿದರೆ, ಇನ್ನುಳಿದವರು ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ.

ದುಷ್ಕರ್ಮಿಗಳು ತನ್ನನ್ನು ಮತ್ತು ತನ್ನ ಮಗನನ್ನು ಹತ್ತಿರದ ಪೊದೆಗಳ ಕಡೆಗೆ ಬಲವಂತವಾಗಿ ಎಳೆದೊಯ್ದರು. ಅಲ್ಲಿ ಮಗನ ಎದುರೇ ಗನ್ ತೋರಿಸಿ ಬೆದರಿಸಿದ ಆರೋಪಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯಿಂದ ತೀವ್ರವಾಗಿ ಹೆದರಿ ನಡುಗುತ್ತಿದ್ದ ಬಾಲಕನಿಗೆ ಗನ್ ತೋರಿಸಿ, ಕಿರುಚಾಡದಂತೆ ಜೀವಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಸ್ಥಳೀಯ ಪೊಲೀಸರು ಅಪರಿಚಿತ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಅಪರಾಧಿಗಳನ್ನು ಶೀಘ್ರದಲ್ಲೇ ಗುರುತಿಸಿ ಬಂಧಿಸಲಾಗುತ್ತದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...