ಭೀಕರ ಕೃತ್ಯ: 20ಕ್ಕೂ ಹೆಚ್ಚು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ’ ಯುವಕನ ಬಂಧನ

Date:

ಅತ್ಯಂತ ಸಮಾಜಘಾತುಕ ಮತ್ತು ಭೀಕರ ಘಟನೆಯೊಂದು ಮಹಾರಾಷ್ಟ್ರದ ನಂದೂರ್ಬಾರ್‌ನಲ್ಲಿ ಬೆಳಕಿಗೆ ಬಂದಿದೆ. ಕಳೆದ ನಾಲ್ಕು ವರ್ಷಗಳಿಂದ 20ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವೀಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಸರ್ಕಾರಿ ಅನುಮೋದಿತ ಮದ್ಯದಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯ ಮೊಬೈಲ್ ಫೋನ್‌ನಿಂದ ಸಂತ್ರಸ್ತ ಬಾಲಕರ ಸುಮಾರು 200ಕ್ಕೂ ಹೆಚ್ಚು ಆಕ್ಷೇಪಾರ್ಹ ಫೋಟೋಗಳು ಮತ್ತು ವೀಡಿಯೋಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಚಳವಳಿ ನಿಗ್ರಹಕ್ಕೆ ತೋರುವ ಶೌರ್ಯ ರಕ್ಷಣೆಯಲ್ಲೇಕಿಲ್ಲ? ಅಮಿತ್ ಶಾ...

ಯಾವುದೇ ಒಂದು ಆಡಳಿತದ ನಿಜವಾದ ಮಾನದಂಡ ಇರುವುದು ರಾಜಕೀಯ ಭಾಷಣಗಳಲ್ಲಲ್ಲ, ಬದಲಿಗೆ ಆ ಆಡಳಿತದಲ್ಲಿ ಸಾಮಾನ್ಯ ನಾಗರಿಕರು, ವಿಶೇಷವಾಗಿ ಮಹಿಳೆಯರು, ಪಡೆಯುವ ಭದ್ರತೆಯಲ್ಲಿ. ರಾಜಧಾನಿಯಲ್ಲಿ ಸಾಲು ಸಾಲಾಗಿ ಹರಿದ ರಕ್ತ ಮತ್ತು ಈ...

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ಯುವಕನೊಬ್ಬ ಅಪ್ರಾಪ್ತ ಬಾಲಕರಿಗೆ ಹಣ, ಚಾಕೊಲೇಟ್ ಹಾಗೂ ಇತರ ಆಮಿಷಗಳನ್ನು ಒಡ್ಡಿ ತನ್ನ ಮನೆಗೆ ಅಥವಾ ಜನಸಂಚಾರವಿಲ್ಲದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾನೆ ಎಂಬ ಸುದ್ದಿ ಪೊಲೀಸರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಪೊಲೀಸರು ವಿಶೇಷ ತಂಡವನ್ನು ರಚಿಸಿ, ಪ್ರಾಥಮಿಕ ತನಿಖೆ ನಡೆಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಪೊಲೀಸರೇ ಆಘಾತಕ್ಕೊಳಗಾಗಿದ್ದಾರೆ. ಆತನ ಫೋನ್‌ನಲ್ಲಿ 200ಕ್ಕೂ ಹೆಚ್ಚು ಭೀಕರ ವೀಡಿಯೋ ಮತ್ತು ಫೋಟೋಗಳು ಸಿಕ್ಕಿವೆ. ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಆ ವೀಡಿಯೋಗಳನ್ನು ತೋರಿಸಿ ‘ಯಾರಿಗಾದರೂ ವಿಷಯ ತಿಳಿಸಿದರೆ ವೀಡಿಯೋ ಹರಿಬಿಡುವುದಾಗಿ’ ಬಾಲಕರಿಗೆ ಆರೋಪಿ ಬೆದರಿಕೆ ಹಾಕುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂದೂರ್ಬಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ ಸನಪ್ ನೀಡಿರುವ ಮಾಹಿತಿಯಂತೆ, ಪ್ರಸ್ತುತ ಸ್ಥಳೀಯ ಪೊಲೀಸ್ ಕಾನ್‌ಸ್ಟೇಬಲ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ಆಗಸ್ಟ್ 12ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ. ಆತನ ಮೊಬೈಲ್‌ನಲ್ಲಿದ್ದ ಫೋಟೋಗಳು ಮತ್ತು ವೀಡಿಯೋಗಳ ಆಧಾರದ ಮೇಲೆ ಸಂತ್ರಸ್ತ ಬಾಲಕರನ್ನು ಮತ್ತು ಅವರ ಕುಟುಂಬದವರನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ: ಚುನಾವಣಾ ಆಯೋಗದ ಸಮರ್ಥನೆಗಿಳಿದ ಬಿಜೆಪಿ!

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮತದಾರರ ಪಟ್ಟಿಯಿಂದ...

ಟಿಎಂಸಿ ಬಂಡಾಯ ಸಂಸದರ ಅನರ್ಹತೆ ಪ್ರಕರಣ: ತ್ವರಿತ ನಿರ್ಧಾರಕ್ಕೆ ಲೋಕಸಭಾ ಸ್ಪೀಕರ್‌ಗೆ ಸುಪ್ರೀಂ ಕಿವಿಮಾತು

ತ್ರಿಪುರಾ ಮೂಲದ 'ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ' (ಎನ್‌ಸಿಪಿಐ -...

ವಿಜಯಪುರ | ಜಿಲ್ಲೆಯ 4 ತಾಲೂಕುಗಳು ತೀವ್ರ ಬರಪೀಡಿತ: ಸಚಿವ ಎಂ.ಬಿ ಪಾಟೀಲ

ಕೇಂದ್ರ ಸರಕಾರದ ಬರ ನಿರ್ವಹಣಾ ಮಾನದಂಡಗಳನ್ನು ಆಧರಿಸಿ ವಿಜಯಪುರ ಜಿಲ್ಲೆಯ ಆಲಮೇಲ,...