ಮೀರತ್‌ ಹೆಲಿಕಾಪ್ಟರ್ ‘ಕಳ್ಳತನ’ ಆರೋಪ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

Date:

ಉತ್ತರ ಪ್ರದೇಶದ ಮೀರತ್‌ನಲ್ಲಿ ಹೆಲಿಕಾಪ್ಟರ್ ‘ಕಳ್ಳತನ’ವಾಗಿದೆ ಎಂಬ ಆರೋಪವು ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ವಿಚಾರದಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಎಸ್‌ಎಆರ್ ಏವಿಯೇಷನ್ ​​ಸರ್ವಿಸ್ ಪ್ರೈವೇಟ್ ಲಿಮಿಟೆಡ್‌ನ ಪೈಲಟ್ ರವೀಂದ್ರ ಸಿಂಗ್ ತನ್ನ ಸಂಸ್ಥೆಯ ಹೆಲಿಕಾಪ್ಟರ್ ಕಳ್ಳತನವಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೇ ತಿಂಗಳಲ್ಲಿ ಕೆಲವರು ಟ್ರಕ್‌ನಲ್ಲಿ ಹೆಲಿಕಾಪ್ಟರ್ ಅನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ತೆಗೆದುಕೊಂಡು ಹೋಗಿದ್ದಾರೆ ಎಂದು ಸಿಂಗ್ ದೂರಿದ್ದಾರೆ. ಹಾಗೆಯೇ ತನ್ನ ಮೇಲೆ ಈ ಆರೋಪಿಗಳು ಹಲ್ಲೆ ಮಾಡಿರುವುದಾಗಿಯೂ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಪ್ರಕರಣ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, “ಇದುವರೆಗೂ ಉತ್ತರ ಪ್ರದೇಶದ ಕ್ರಿಮಿನಲ್‌ಗಳು ಕೊಲೆ, ದರೋಡೆ, ಡಕಾಯಿತಿ ಮತ್ತು ಅತ್ಯಾಚಾರದ ಮೂಲಕ ಬಿಜೆಪಿಯ ಕಾನೂನು ಸುವ್ಯವಸ್ಥೆಯನ್ನು ಪುಡಿ ಪುಡಿ ಮಾಡುತ್ತಿದ್ದರು. ಈಗ ಮೀರತ್‌ನಲ್ಲಿ ಹೆಲಿಕಾಪ್ಟರ್ ಅನ್ನು ಟ್ರಕ್‌ನಲ್ಲಿ ತೆಗೆದುಕೊಂಡು ಹೋದ ಸುದ್ದಿ ಬಂದಿದೆ. ಇದು ವಿಮಾನ ನಿಲ್ದಾಣದ ಭದ್ರತೆಯ ಪ್ರಶ್ನೆಯೂ ಹೌದು. ಅಲ್ಲಿನ ಸೆಕ್ಯುರಿಟಿ ರಜೆಯಲ್ಲಿದ್ದರಾ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಇನ್ನು ಪೊಲೀಸರು ಶೀಘ್ರವಾಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಹೆಲಿಕಾಪ್ಟರ್ ಅನ್ನು ಎಸ್‌ಎಆರ್ ಏವಿಯೇಷನ್ ​​ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಮತ್ತೊಂದು ಸಂಸ್ಥೆಗೆ ಮಾರಾಟ ಮಾಡಿದೆ. ಈ ವಿಷಯ ತಿಳಿದಿರದ ಕಾರಣ ಕಳ್ಳತನದ ಬಗ್ಗೆ ಸಿಂಗ್ ದೂರು ನೀಡಿದ್ದಾರೆ ಎಂದು ಸರ್ಕಲ್ ಅಧಿಕಾರಿ ಅಂತರಿಕ್ಷ್ ಜೈನ್ ಹೇಳಿಕೊಂಡಿದ್ದಾರೆ.

ಇದು ಕಳ್ಳತನವಲ್ಲ, ಇಬ್ಬರು ಪಾಲುದಾರರ ನಡುವಿನ ವಿವಾದವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೆಯೇ ತನ್ನ ಮೇಲೆ ಹಲ್ಲೆ ನಡೆದಿದೆ ಎಂಬ ಪೈಲಟ್ ರವೀಂದ್ರ ಸಿಂಗ್ ಆರೋಪ ಸಾಬೀತಾಗಿಲ್ಲ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...