ಕೇರಳ | ಲ್ಯಾಂಡಿಂಗ್‌ ವೇಳೆ ಕುಸಿದ ಹೆಲಿಪ್ಯಾಡ್‌: ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಾಣಾಪಾಯದಿಂದ ಪಾರು

Date:

ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಹೆಲಿಪ್ಯಾಡ್ ಕುಸಿದ ಘಟನೆ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದಿದೆ. ಮುರ್ಮು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್‌ನ ಒಂದು ಭಾಗವು ಬುಧವಾರ ಮುರ್ಮು ಅವರ ಹೆಲಿಕಾಪ್ಟರ್ ಲ್ಯಾಂಡ್‌ಗಾಗಿ ಕೊನೆಯ ಕ್ಷಣದಲ್ಲಿ ಕಾಯ್ದಿರಿಸಲಾಗಿತ್ತು. ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಹೆಲಿಕಾಪ್ಟರ್‌ನ ಒಂದು ಚಕ್ರ ಡಾಂಬರಿನಲ್ಲಿ ಸಿಲುಕಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಅದಾದ ಬಳಿಕ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಹಲವು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಒಳಗೊಂಡಂತೆ ಭಾರತೀಯ ವಾಯುಪಡೆ ಸಿಬ್ಬಂದಿ ಹೆಲಿಕಾಪ್ಟರ್‌ನ ಚಕ್ರಗಳನ್ನು ತಳ್ಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದ್ರೌಪದಿ ಮುರ್ಮು ಅವರು ಸುರಕ್ಷಿತವಾಗಿದ್ದು ಶಬರಿಮಲೆಯ ತಪ್ಪಲಿನಲ್ಲಿರುವ ಪಂಬಾಗೆ ತೆರಳಿದ್ದಾರೆ.

ಈ ಹಿಂದೆ ಪಂಬಾ ಬಳಿಯ ನೀಲಕ್ಕಲ್‌ನಲ್ಲಿ ಮುರ್ಮು ಅವರಿದ್ದ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ನಿರ್ಧರಿಸಲಾಗಿತ್ತು. ಆದರೆ ಹವಾಮಾನ ಸಮಸ್ಯೆಯಿಂದಾಗಿ ಪ್ರಮದಂನಲ್ಲಿ ಲ್ಯಾಂಡ್ ಮಾಡಬೇಕಾಯಿತು. ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಸ್ಥಳ ಬದಲಾವಣೆಯಾಗಿದ್ದರಿಂದ ಸಮಸ್ಯೆಯಾಗಿದೆ. ಪ್ರಮದಂನ ಕಾಂಕ್ರಿಟ್ ಹೆಲಿಕಾಪ್ಟರ್‌ನ ಭಾರವನ್ನು ತಡೆಯುವಷ್ಟು ಗಟ್ಟಿಯಾಗಿರಲಿಲ್ಲ ಎಂದು ಹೇಳಲಾಗಿದೆ.

ರಾಷ್ಟ್ರಪತಿ ಮುರ್ಮು ಅವರು ಅಕ್ಟೋಬರ್ 21ರಂದು ಕೇರಳಕ್ಕೆ ಭೇಟಿ ನೀಡಿದ್ದು, ಅ.24ರವರೆಗೆ ಕೇರಳದಲ್ಲಿ ಇರಲಿದ್ದಾರೆ. ಮಂಗಳವಾರ ತಿರುವನಂತಪುರಂಗೆ ತೆರಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...