ಪ್ರಶ್ನೆಗಳನ್ನು ಕೇಳಿದ್ದಕ್ಕೆ, ವಿಚಿತ್ರವಾಗಿ ವರ್ತಿಸಿದ್ದಕ್ಕೆ ಅಮಾನತುಗೊಳಿಸಲಾಗಿದೆ: ಹೇಮಾ ಮಾಲಿನಿ

Date:

‘ಅವರು ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ವಿಚಿತ್ರವಾಗಿ ವರ್ತಿಸುತ್ತಾರೆ, ಅದಕ್ಕಾಗಿ ಅಮಾನತುಗೊಳಿಸಲಾಗಿದೆ’ ಇದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಂಗಳವಾರ ನೂರಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ್ದಕ್ಕೆ ನೀಡಿದ ಕಾರಣ.

ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಮಥುರಾ ಕ್ಷೇತ್ರದ ಸಂಸದೆ, ಸಂಸತ್ತನ್ನು ಅಡ್ಡಿಪಡಿಸುವುದು ಮತ್ತು ಮೋದಿ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವುದು ಪ್ರತಿಪಕ್ಷಗಳ ಏಕೈಕ ಗುರಿಯಾಗಿದೆ ಎಂದು ಹೇಳಿದರು.

“ಅಮಾನತು ಎಂದರೆ ಅವರು ಏನಾದರೂ ತಪ್ಪು ಮಾಡಿದ್ದಾರೆ” ಎಂದು ಮೂರನೇ ಎರಡರಷ್ಟು ಸಂಸದರನ್ನು ಅಮಾನತುಗೊಳಿಸಿರುವುದನ್ನು ಸಮರ್ಥಿಸಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅವರನ್ನು ಅಮಾನತು ಮಾಡಿದ್ದರೆ ಅವರು ತಪ್ಪು ಮಾಡಿದ್ದಾರೆ ಎಂದರ್ಥ. ಸಂಸತ್ತಿನ ನಿಯಮಗಳ ಪ್ರಕಾರ ಕೆಲಸ ಮಾಡಬೇಕು. ಅವರು ಅದನ್ನು ಮಾಡದಿದ್ದ ಕಾರಣ ಅಮಾನತುಗೊಳಿಸಲಾಗಿದೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಇದು ಸರಿಯಾದ ಕ್ರಮ” ಎಂದು ಹೇಮಾ ಮಾಲಿನಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

“ಹೇಗಾದರೂ ಮಾಡಿ ಸಂಸತ್ತನ್ನು ಕಾರ್ಯನಿರ್ವಹಿಸದಂತೆ ಮಾಡುವುದು ಪ್ರತಿಪಕ್ಷದವರ ಗುರಿಯಾಗಿದೆ. ಮೋದಿಯವರು ಹಗಲಿರುಳು ಶ್ರಮಿಸುತ್ತಿದ್ದಾರೆ, ಆದರೆ ಅವರನ್ನು ಸೋಲಿಸುವ ವಿಪಕ್ಷಗಳ ಗುರಿ ಯಶಸ್ವಿಯಾಗುವುದಿಲ್ಲ” ಎಂದು ಹೇಮಾ ಮಾಲಿನಿ ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆಯ 141 ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ ನಂತರ ಅವರು ನಟಿ ಕಂ ರಾಜಕಾರಣಿ ಈ ಹೇಳಿಕೆ ನೀಡಿದ್ದಾರೆ.

141 ಸಂಸದರ ಅಮಾನತು ವಿರೋಧಿಸಿ ಇದೇ ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ವಿಪಕ್ಷಗಳ ಮೈತ್ರಿಕೂಟ ನಿರ್ಧರಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42...

ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ...

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ....