‘ದಿ ಕೇರಳ ಸ್ಟೋರಿ-2’ ಸಿನಿಮಾ ನಿರ್ಮಾಪಕರು, ಸಿಬಿಎಫ್‌ಸಿಗೆ ಹೈಕೋರ್ಟ್‌ ನೋಟಿಸ್‌

Date:

‘ದಿ ಕೇರಳ ಸ್ಟೋರಿ 2 – ಗೋಸ್ ಬಿಯಾಂಡ್’ ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಿಚಾರಣೆ ನಡೆಸಿದೆ. ಅರ್ಜಿಗೆ ಸಂಬಂಧಿಸಿದಂತೆ ಸಿನಿಮಾದ ನಿರ್ಮಾಪಕರು, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ( ಸಿಬಿಎಫ್‌ಸಿ) ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

- Advertisement -

ಸಿನಿಮಾ ವಿರುದ್ಧ ಕಣ್ಣೂರು ಜಿಲ್ಲೆಯ ಕಣ್ಣವಂನ ಶ್ರೀದೇವ್ ನಂಬೂದಿರಿ ಎಂಬವರು ಫೆಬ್ರವರಿ 18 ರಂದು ರಿಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ; ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಸಿಬಿಎಫ್‌ಸಿ ಹಾಗೂ ನಿರ್ಮಾಪಕ ವಿಪುಲ್ ಅಮೃತ್‌ಲಾಲ್ ಶಾ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ‘ದಿ ಕೇರಳ ಸ್ಟೋರಿ 2 – ಗೋಸ್ ಬಿಯಾಂಡ್’ ಸಿನಿಮಾಗೆ 1952ರ ಸಿನಿಮಾಟೋಗ್ರಾಫ್ ಕಾಯ್ದೆಯ ಅಡಿಯಲ್ಲಿ ಶಾಸನಬದ್ಧ ಆದೇಶವನ್ನು ಪಾಲಿಸದೆ ಸಿಬಿಎಫ್‌ಸಿ ಪ್ರಮಾಣೀಕರಣ ನೀಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಪೀಠ, ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿದೆ.

ಅರ್ಜಿಯ ಪ್ರಕಾರ, ಚಿತ್ರದ ಟೀಸರ್ ಮತ್ತು ಟ್ರೇಲರ್‌ನಲ್ಲಿ ಬಹು ರಾಜ್ಯಗಳ ಮಹಿಳೆಯರನ್ನು ಒಳಗೊಂಡ ನಿರೂಪಣೆಗಳನ್ನು ಚಿತ್ರಿಸಲಾಗಿದೆ. ಆದರೆ ವಿಷಯವನ್ನು ‘ಕೇರಳ ಕಥೆ’ ಎಂದು ಬ್ರಾಂಡ್ ಮಾಡಲಾಗಿದೆ. ಇದರಿಂದಾಗಿ ಭಯೋತ್ಪಾದನೆ, ಬಲವಂತದ ಮತಾಂತರ ಹಾಗೂ ಜನಸಂಖ್ಯಾ ಪಿತೂರಿಯ ಘಟನೆಗಳನ್ನು ಕೇರಳ ರಾಜ್ಯದೊಂದಿಗೆ ಸಂಯೋಜಿಸಲಾಗಿದೆ. ಇಂತಹ ಚಿತ್ರಣವು ಕೇರಳದ ಜನ ಸಮುದಾಯಗಳಿಗೆ ಕಳಂಕ ತರುವ, ಸಾರ್ವಜನಿಕ ಸುವ್ಯವಸ್ಥೆಯನ್ನು ಭಂಗಗೊಳಿಸುವ, ಕೋಮುದ್ವೇಷವನ್ನು ಪ್ರಚೋದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ವಾದಿಸಿದ್ದಾರೆ.

“2023ರಲ್ಲಿ ಬಿಡುಗಡೆಯಾಗಿದ್ದ ಸಿನಿಮಾದ ಮೊದಲ ಭಾಗವು ಸುಳ್ಳು ಹೇಳಿಕೆಗಳಿಂದಾಗಿ ಗಂಭೀರ ವಿವಾದವನ್ನು ಸೃಷ್ಟಿಸಿತ್ತು. ಇದನ್ನು ಸುಪ್ರೀಂ ಕೋರ್ಟ್‌ನ ವಿಚಾರಣೆಯ ಸಮಯದಲ್ಲಿ ಗಮನಿಸಲಾಗಿದೆ. ಈ ಹಿನ್ನೆಲೆಯ ಹೊರತಾಗಿಯೂ, 1952ರ ಸಿನಿಮಾಟೋಗ್ರಾಫ್ ಕಾಯ್ದೆಯ ಸೆಕ್ಷನ್ 5B ಅಡಿಯಲ್ಲಿ ಕಡ್ಡಾಯಗೊಳಿಸಿದಂತೆ, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಹಾಗೂ ನೈತಿಕತೆಯ ಮೇಲೆ ಸಿನಿಮಾದ ಪ್ರಭಾವವನ್ನು ಸಮರ್ಪಕವಾಗಿ ಪರಿಶೀಲಿಸದೆಯೇ CBFC ಪ್ರಮಾಣೀಕರಣ ನೀಡಿದೆ” ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ದಿ ಕೇರಳ ಸ್ಟೋರಿ-2: ಕಾಮನ್ ಸೆನ್ಸ್ ಇಲ್ಲದ ಟ್ರೈಲರ್?

“ಟೀಸರ್ ಮತ್ತು ಟ್ರೇಲರ್‌ನಲ್ಲಿರುವ ಮುಕ್ತಾಯದ ಹೇಳಿಕೆಗಳು ಪ್ರತೀಕಾರಕ್ಕೆ ಕರೆ ನೀಡುವಂತಿವೆ. ಇದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ನಿಜವಾದ ಮತ್ತು ಸನ್ನಿಹಿತ ಆತಂಕವನ್ನು ಸೃಷ್ಟಿಸುತ್ತದೆ. ಆದ್ದರಿಂದ, ಸಂಭಾವ್ಯ ಹಾನಿಯನ್ನು ತಡೆಗಟ್ಟಲು ಮತ್ತು ಸಂವಿಧಾನದ 14, 19(2) ಮತ್ತು 21ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಲಾದ ಹಕ್ಕುಗಳನ್ನು ರಕ್ಷಿಸಲು ಹಾಗೂ ಸಿನಿಮಾದ ಪ್ರಮಾಣೀಕರಣ ನೀಡುವಲ್ಲಿ ಕಾನೂನಿನ ಪ್ರಕಾರ ಶಾಸನಬದ್ಧ ಕರ್ತವ್ಯಗಳನ್ನು ನಿರ್ವಹಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯದ ಮೆಟ್ಟಿಲೇರಿದ್ದೇನೆ” ಎಂದು ಅರ್ಜಿದಾರರು ವಿವರಿಸಿದ್ದಾಎರ.

ಸಿಬಿಎಫ್‌ಸಿ ನೀಡಿದ ಪ್ರಮಾಣೀಕರಣವನ್ನು ರದ್ದುಗೊಳಿಸುವ ಮತ್ತು ಪ್ರಮಾಣೀಕರಣವನ್ನು ಮರುಪರಿಶೀಲಿಸುವಂತೆ ನಿರ್ದೇಶಿಸಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಅರ್ಜಿಯನ್ನು ಇತ್ಯರ್ಥವಾಗುವವರೆಗೆ ಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸುವಂತೆ ಮತ್ತು ಪ್ರಾದೇಶಿಕ ನಿಂದನೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದನ್ನು ತಡೆಯಲು ಶೀರ್ಷಿಕೆಯ ಮರುಪರಿಶೀಲನೆ ಮತ್ತು ಸಾಕಷ್ಟು ಹಕ್ಕು ನಿರಾಕರಣೆಗಳನ್ನು ಸೇರಿಸುವುದು ಸೇರಿದಂತೆ ಸೂಕ್ತ ಮಾರ್ಪಾಡುಗಳಿಗೆ ನಿರ್ದೇಶಿಸುವಂತೆಯೂ ಅವರು ಕೋರಿದ್ದಾರೆ.

ಸಿನಿಮಾ ಫೆಬ್ರವರಿ 27ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೀಪತೂಣ್’ ವಿವಾದ | ದೀಪ ಹಚ್ಚಲು ಸುಪ್ರೀಂ ಗ್ರೀನ್ ಸಿಗ್ನಲ್: ಈ ವರ್ಷಕ್ಕೆ ಮಾತ್ರ ಸೀಮಿತ!

ತಮಿಳುನಾಡಿನ ಮಧುರೈ ಜಿಲ್ಲೆಯ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ತಿರುಪ್ಪರಂಕುಂದ್ರಂ ಬೆಟ್ಟದ...

ಅಕ್ರಮ ಕ್ವಾರಿ ಪ್ರಕರಣ: ತಮಿಳುನಾಡು ಮಾಜಿ ಸಚಿವ ಪಿ. ಮೂರ್ತಿ ಮನೆ ಮೇಲೆ ಕ್ರೈಂ ಬ್ರಾಂಚ್ ದಾಳಿ!

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಡಿಎಂಕೆ ಸಚಿವ...

ರಾಜಸ್ಥಾನ ಪಂಚಾಯತ್ ಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಜಯ; ಬಿಜೆಪಿಗೆ ತೀವ್ರ ಹಿನ್ನಡೆ

ರಾಜಸ್ಥಾನದ 41 ಜಿಲ್ಲೆಗಳ ಪೈಕಿ 37 ಜಿಲ್ಲೆಗಳಲ್ಲಿ ಶುಕ್ರವಾರ ನಡೆಯುತ್ತಿರುವ ಜಿಲ್ಲಾ...

ಕಾವೇರಿ ಅರ್ಜಿ ವಜಾ |’ವಕೀಲರಿಗೆ ವ್ಯರ್ಥ ಮಾಡಲು ಸಾಕಷ್ಟು ಹಣವಿದೆ’; ತಮಿಳುನಾಡಿಗೆ ಸುಪ್ರೀಂ ತರಾಟೆ! 

ದಶಕಗಳ ಹಳೆಯ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು...