ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

Date:

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ಬೆಂಗಾವಲು ವಾಹನಗಳ ಮೇಲೆ ಪ್ರತಿಭಟನಾಕಾರರು ಏಕಾಏಕಿ ಮೊಟ್ಟೆ, ಟೊಮೆಟೊ ಎಸೆದು ಭಾರಿ ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ರಾಜ್ಯದಲ್ಲಿ ರಾಜಕೀಯ ಸಂಚಲನ ಮೂಡಿಸಿದೆ.

- Advertisement -

​ಬಟಾಲಾ-ಗುರುದಾಸ್‌ಪುರ ಹೆದ್ದಾರಿಯ ಸಮೀಪ ಬಿಟ್ಟು ಅವರ ವಾಹನಗಳು ಸಾಗುತ್ತಿದ್ದಾಗ ಈ ದಾಳಿ ನಡೆದಿದೆ. ‘ಬಾಬೆ ದಾ ವಿವಾಹ’ (ಗುರುನಾನಕ್ ವಿವಾಹ) ಉತ್ಸವ ನಡೆಯುತ್ತಿದ್ದ ಸ್ಥಳದ ಬಳಿ ಜಮಾಯಿಸಿದ್ದ ಗುಂಪೊಂದು, 8-9 ವಾಹನಗಳ ಸಾಲಿನತ್ತ ವಸ್ತುಗಳನ್ನು ತೂರಿದೆ. ದಾಳಿಯಿಂದಾಗಿ ಬಿಟ್ಟು ಅವರ ಎರಡು ಬೆಂಗಾವಲು ವಾಹನಗಳ ಗಾಜುಗಳು ಪುಡಿಪುಡಿಯಾಗಿದ್ದು, ಭದ್ರತೆಗಾಗಿ ಇದ್ದ ಜಾಮರ್ ವಾಹನಕ್ಕೂ ಹಾನಿಯಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

​ಘಟನಾ ಸ್ಥಳದಲ್ಲಿ ರಸ್ತೆ ತಡೆ ನಡೆಸಿದ್ದ ಮೂವರು ಪ್ರತಿಭಟನಾಕಾರರನ್ನು ಬಿಟ್ಟು ಅವರ ಭದ್ರತಾ ಸಿಬ್ಬಂದಿ ಸೆರೆಹಿಡಿದಿದ್ದು, ಇವರು ಎಎಪಿ ಪಕ್ಷಕ್ಕೆ ಸೇರಿದವರು ಎಂದು ಆರೋಪಿಸಲಾಗಿದೆ. ‘ನನಗೆ ಅಥವಾ ನನ್ನ ಜೊತೆಗಿರುವವರಿಗೆ ಯಾವುದೇ ಹಾನಿಯಾದರೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ರಾಜ್ಯ ಡಿಜಿಪಿ ಅವರೇ ನೇರ ಹೊಣೆಯಾಗುತ್ತಾರೆ. ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವಾಲಯದ ಗಮನಕ್ಕೂ ತಂದಿದ್ದೇನೆ’ ಎಂದು ಬಿಟ್ಟು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಮತ್ತೊಂದೆಡೆ, ರಸ್ತೆ ತಡೆಯಿಂದಾಗಿ ಬಿಟ್ಟು ಅವರ ಪ್ರಯಾಣಕ್ಕೆ ತೀವ್ರ ಅಡ್ಡಿಯಾಯಿತು. ಆದರೆ ಬಿಜೆಪಿ ನಾಯಕರ ಈ ಎಲ್ಲಾ ಆರೋಪಗಳನ್ನು ಆಡಳಿತರೂಢ ಎಎಪಿ ಸಾರಾಸಗಟಾಗಿ ತಳ್ಳಿಹಾಕಿದೆ. ‘ನಮ್ಮ ಕಾರ್ಯಕರ್ತರು ರಸ್ತೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಬಿಟ್ಟು ಅವರೇ ತಮ್ಮ ಬೆಂಬಲಿಗರನ್ನು ಛೂಬಿಟ್ಟು ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿದ್ದಾರೆ’ ಎಂದು ಎಎಪಿ ನಾಯಕ ಜೋಬನ್ ರಾಂಧವಾ ವಿಡಿಯೊ ಮೂಲಕ ತಿರುಗೇಟು ನೀಡಿದ್ದಾರೆ.

​ಕಳೆದ ಜುಲೈನಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರವನೀತ್ ಸಿಂಗ್ ಬಿಟ್ಟು, ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಒಂದು ತಿಂಗಳ ಹಿಂದಷ್ಟೇ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಶಸ್ತ್ರಾಸ್ತ್ರ ದಾಳಿಯ ಯತ್ನ ನಡೆದಿತ್ತು. ಇದೀಗ ಮತ್ತೋರ್ವ ಪಂಜಾಬ್ ನಾಯಕನ ಮೇಲೆ ನಡೆದಿರುವ ಈ ದಾಳಿ, ಪ್ರಜಾಪ್ರಭುತ್ವ ಮತ್ತು ರಾಜಕೀಯ ನಾಯಕರ ಭದ್ರತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ಫ್ಯಾಕ್ಟ್‌ಚೆಕ್ | ‘ಮೋದಿಗೂ 76 ವರ್ಷ, ಅವರ ಶಿಕ್ಷಕರಿಗೂ 76 ವರ್ಷ’; ಅಸಲಿಯತ್ತೇನು?

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಸಂದರ್ಭದಲ್ಲಿ, ಅವರ ಶಾಲಾ...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ಕೇವಲ 1 ಲಕ್ಷ ವಿಲೇವಾರಿ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ...

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...