ಪರೀಕ್ಷಾ ಸುಧಾರಣೆಗೆ ನಂದನ್ ನಿಲೇಕಣಿ ನೇತೃತ್ವದ ಉನ್ನತ ಮಟ್ಟದ ಕಾರ್ಯಪಡೆ: ಪ್ರಧಾನಿ ಮೋದಿ

Date:

ದೇಶದಲ್ಲಿ ಸ್ಪರ್ಧಾತ್ಮಕ ಹಾಗೂ ಪ್ರವೇಶ ಪರೀಕ್ಷೆಗಳ ಭದ್ರತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.

- Advertisement -

ನೀಟ್ ಸೇರಿದಂತೆ ವಿವಿಧ ಪ್ರಮುಖ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಇನ್ನೂ ಎರಡು ಬೇಡಿಕೆಗಳು ಬಾಕಿ ಇವೆ ಎಂದ ಸಿಜೆಪಿ

ಈ ಬಗ್ಗೆ “ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಆರೋಪಿಗಳು ಈಗಾಗಲೇ ಜೈಲು ಪಾಲಾಗಿದ್ದಾರೆ. ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ನಂಬಿಕಾರ್ಹ ಹಾಗೂ ಪಾರದರ್ಶಕಗೊಳಿಸಲು ನಾವು ಆಧುನಿಕ ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ, ಜಾಗತಿಕ ಮಟ್ಟದ ತಂತ್ರಜ್ಞ ನಂದನ್ ನಿಲೇಕಣಿ ನೇತೃತ್ವದ ಸಮಿತಿಯು ಮುಂಬರುವ ಪರೀಕ್ಷೆಗಳ ಸುಧಾರಣೆಗೆ ಅಗತ್ಯ ಶಿಫಾರಸುಗಳನ್ನು ನೀಡಲಿದೆ” ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದನ್ನು “ತಡವಾಗಿ ಎಚ್ಚೆತ್ತುಕೊಂಡ ಕ್ರಮ” ಎಂದು ಟೀಕಿಸಿವೆ. ಕೇವಲ ಕಾರ್ಯಪಡೆ ಅಥವಾ ಉನ್ನತ ಮಟ್ಟದ ಸಮಿತಿಗಳನ್ನು ರಚಿಸುವುದರಿಂದ ಪರೀಕ್ಷಾ ಅಕ್ರಮಗಳಿಗೆ ತಕ್ಷಣದ ಮುಕ್ತಿ ಸಿಗುವುದಿಲ್ಲ. ಲಕ್ಷಾಂತರ ಯುವಕರ ಭವಿಷ್ಯ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದೆ ಎಂದು ವಿಪಕ್ಷಗಳು ದೂರಿವೆ.

ಹಾಗೆಯೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯಂತಹ ಸಂಸ್ಥೆಗಳು ಪರೀಕ್ಷೆಗಳನ್ನು ಸರಿಯಾಗಿ ನಡೆಸುವಲ್ಲಿ ವಿಫಲವಾಗಿವೆ. ತಾಂತ್ರಿಕ ಕಮಿಟಿಗಳ ಜೊತೆಗೆ ರಾಜಕೀಯ ಹಾಗೂ ಆಡಳಿತಾತ್ಮಕ ಹೊಣೆಗಾರಿಕೆಯನ್ನು ನಿಗದಿಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...